ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದಆಯ್ಕೆಯಾದ ಪುಸ್ತಕಗಳನ್ನು ಜಾಲತಾಣದಲ್ಲಿ ಪ್ರಕಟ

ಬೀದರ.18.ಮಾರ್ಚ.25:- 2021 ರಲ್ಲಿ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಿದ ಕನ್ನಡ, ಆಂಗ್ಲ, ಹಿಂದಿ ಮತ್ತು ಭಾರತೀಯ ಇತರೆ ಭಾಷಾ ಪುಸ್ತಕಗಳನ್ನು ಆಯ್ಕೆ ಸಮಿತಿ ಮುಂದೆ ಮಂಡಿಸಿದ್ದು, ಆಯ್ಕೆ ಸಮಿತಿಯು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು,

ಆಯ್ಕೆಯಾದ ಪುಸ್ತಕಗಳನ್ನು ಇಲಾಖೆಯ ಜಾಲತಾಣ  dpl.karnataka.gov.in  ರಲ್ಲಿ ದಿನಾಂಕ: 15-03-2025 ರಂದು ಪ್ರಕಟಿಸಲಾಗಿದೆ ಎಂದು ಬೀದರ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ (ಪ್ರ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕಾರಣ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಸರಬರಾಜುದಾರರು ಸಲ್ಲಿಸಿದ ಪುಸ್ತಕಗಳ ಹೆಸರು, ಪ್ರಕಾಶಕರ ಹೆಸರು, ಸರಬರಾಜುದಾರರ ಹೆಸರು, ಲೇಖಕರ ಹೆಸರು, ಪುಟ ಸಂಖ್ಯೆ, ಮುಖ ಬೆಲೆ, ನಿಗದಿತ ಬೆಲೆ, ಪುಸ್ತಕದ ಅಳತೆ, ಹಾಗೂ ಇತರೆ ತಾಂತ್ರಿಕ ವ್ಯತ್ಯಾಸಗಳಿದ್ದಲ್ಲಿ ದಿನಾಂಕ:18-03-2025 ಒಳಗಾಗಿ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ: ಅಂಬೇಡ್ಕರ್ ವೀದಿ ಬೆಂಗಳೂರ-560001.

ಇಲ್ಲಿಗೆ ಲಿಖಿತವಾಗಿ ಅಥವಾ ಇ-ಮೇಲ್  dpl_dir_acts@yahoo.co.in  ಮೂಲಕ ಮನವಿಗಳನ್ನು ಸಲ್ಲಿಸಬಹುದಾಗಿದೆ. ನಂತರ ಬಂದ ಮನವಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…

2 hours ago

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

7 hours ago

ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…

8 hours ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

8 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

8 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

9 hours ago