ಬೆಂಗಳೂರು.16.ಜುಲೈ.25:- ರಾಜ್ಯ ಸಾರಿಗೆ ನೌಕರರು ಮತ್ತೆ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಆಗಸ್ಟ್.5ರಿಂದ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.
38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳಕ್ಕೆ ಆಗ್ರಹ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವತೆ ಒತ್ತಾಯಿಸಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಆಗಸ್ಟ್.5ರಂದು ಬೆಳಿಗ್ಗೆ 6ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ಸಾರಿಗೆ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಮುಷ್ಕರ ನಡೆಯಲಿದೆ.