ರಾಜ್ಯ ಸರ್ಕಾರದಿಂದ ‘ಅಡುಗೆ ಸಿಬ್ಬಂದಿಗಳಿಗೆ’ ಗೌರವಧನ 1000 ರೂ.ಹೆಚ್ಚಳ ಮಾಡಿ ಆದೇಶ.!

ಬೆಂಗಳೂರು.26.ಮೇ.25:- 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-109ರ ಘೋಷಣೆಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು 1000 ರೂಗಳಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲೆ ಓದಲಾದ ಕ್ರಮಾಂಕ-1ರ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-109ರಲ್ಲಿ ಕೆಳಕಂಡಂತೆ ಘೋಷಿಸಲಾಗಿದೆ.ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ. ಹೆಚ್ಚಿಸಲಾಗುವುದು.”

ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರು ಹಾಗೂ ಸಹಾಯಕ ಅಡುಗೆಯವರಿಗೆ ನೀಡಲಾಗುವ ಮಾಸಿಕ ಗೌರವ ಸಂಭಾವನೆಯನ್ನು 2022-23ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ತಲಾ ರೂ 1000/- (ಒಂದು ಸಾವಿರ ರೂಪಾಯಿಗಳು ಮಾತ್ರ) ಗಳಷ್ಟು ಹೆಚ್ಚಿಸಿ ಆದೇಶಿಸಲಾಗಿದೆ.

ಮೇಲೆ ಓದಲಾದ ಕ್ರಮಾಂಕ (3)ರ ಆರ್ಥಿಕ ಇಲಾಖೆ ಅನಧಿಕೃತ ಟಿಪ್ಪಣಿಯಲ್ಲಿ (Budget Advice) 2025-26ನೇ ಸಾಲಿನ ಆಯವ್ಯಯ ಕಂಡಿಕೆ-109ರ ಘೋಷಣೆಯನ್ನು ಮುಂದುವರೆದ ಮಾರ್ಪಾಡಿತ ಯೋಜನೆಯೆಂದು ಪರಿಗಣಿಸಲಾಗಿದ್ದು, ಸದರಿ ಕಂಡಿಕೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಅನುದಾನವನ್ನು ರಾಜ್ಯ ಯೋಜನೆ ಕ್ಷೀರಭಾಗ್ಯ ಕಾರ್ಯಕ್ರಮದ ಲೆಕ್ಕ ಶೀರ್ಷಿಕೆ: 2202-00-101-0-18 (2202-01-196-1-02) ಯ ಉಪ ಶೀರ್ಷಿಕೆ: 324 ರಡಿ ನಿಗದಿಯಾಗಿರುವ ರೂ.41206.31 ಲಕ್ಷಗಳ ಅನುದಾನದಿಂದ ಭರಿಸುವಂತೆಯೂ ಹಾಗೂ ಸದರಿ ಕಂಡಿಕೆಯನ್ನು ಅನುಷ್ಠಾನ ಮಾಡಲು ರೂ.11300.00 ಲಕ್ಷಗಳ ಅನುದಾನವನ್ನು ನಿಗದಿಪಡಿಸಲಾಗಿದೆ

ಮೇಲೆ ಓದಲಾದ ಕ್ರಮಾಂಕ (4)ರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರ ಪ್ರಸ್ತಾವನೆಯಲ್ಲಿ, 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-109ರ ಘೋಷಣೆಯನ್ನು ಅನುಷ್ಠಾನಗೊಳಿಸುವ ಸಂಬಂಧ, ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ 1.26.103 ಅಡುಗೆ ಸಿಬ್ಬಂದಿಗಳ (ಮುಖ್ಯ ಅಡುಗೆಯವರು ಮತ್ತು ಸಹಾಯಕ ಅಡುಗೆಯವರನ್ನು ಒಳಗೊಂಡಂತೆ) ಅಡುಗೆ ಸಿಬ್ಬಂದಿಗಳ ಮಾಸಿಕ ಸಂಭಾವನೆಯನ್ನು ರೂ.1000/- ಗಳಷ್ಟು (ಒಂದು ಸಾವಿರ ರೂಪಾಯಿಗಳು ಮಾತ್ರ) ಹೆಚ್ಚಿಸಲು ರೂ.1261.03 ಲಕ್ಷಗಳ ಅನುದಾನ ಅಗತ್ಯವಿದ್ದು, ಈ ಅನುದಾನವನ್ನು ರಾಜ್ಯ ಯೋಜನೆ ಕ್ಷೀರಭಾಗ್ಯ : 2202-00-101-0-18 (2202-01-196-1-02) 2 ಅನುದಾನದಿಂದ ಭರಿಸಿಕೊಂಡು ಸದರಿ ಆಯವ್ಯಯ ಕಂಡಿಕೆಯನ್ನು ಅನುಷ್ಠಾನಗೊಳಿಸಲು ಅನುಮೋದನೆ ಕೋರಿರುತ್ತಾರೆ.

ಮೇಲೆ ಓದಲಾದ ಕ್ರಮಾಂಕ (5)ರ ಆರ್ಥಿಕ ಇಲಾಖೆಯ ಟಿಪ್ಪಣಿಯಲ್ಲಿ 2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ-109ರ ಯೋಜನೆಯನ್ವಯ ರಾಜ್ಯದ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ನೇಮಕಾತಿಗೊಂಡು ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗಳಿಗೆ ಮಾಸಿಕ ಗೌರವ ಸಂಭಾವನೆಯನ್ನು ತಲಾ ರೂ.1000/-ಗಳಿಗೆ ಹೆಚ್ಚಿಸಲು ಸಹಮತಿಯನ್ನು ನೀಡಲಾಗಿದೆ.

ಈ ಪ್ರಸ್ತಾವನೆಯಲ್ಲಿ ವಿವರಿಸಲಾದ ಮೇಲ್ಕಂಡ ಅಂಶಗಳನ್ನು ಸರ್ಕಾರವು ಕೂಲಂಕಷವಾಗಿ ಪರಿಶೀಲಿಸಿ. ಈ ಕೆಳಕಂಡಂತೆ ಆದೇಶಿಸಿದೆ.

2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-109ರ ಘೋಷಣೆಯ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರು ಹಾಗೂ ಸಹಾಯಕ ಅಡುಗೆಯವರಿಗೆ ನೀಡಲಾಗುವ ಮಾಸಿಕ ಗೌರವ ಸಂಭಾವನೆಯನ್ನು ದಿನಾಂಕ: 01.06.2025 ಜಾರಿಗೆ ಬರುವಂತೆ ತಲಾ ರೂ.1000/- (ಒಂದು ಸಾವಿರ ರೂಪಾಯಿಗಳು ಮಾತ್ರ) ಗಳಷ್ಟು ಹೆಚ್ಚಿಸಿ ಪಾವತಿಸಲು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರಿಗೆ ಅನುಮತಿ ನೀಡಿ ಆದೇಶಿಸಿದೆ.

ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು, ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಪಾಲಿಸಬೇಕಾಗಿರುವ ಷರತ್ತುಗಳು:-

1) 2025-26 ಆಯವ್ಯಯ ಭಾಷಣದಲ್ಲಿನ ಕಂಡಿಕೆ-109ರ ಘೋಷಣೆಯ ಕಾರ್ಯಕ್ರಮವನ್ನು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಾರ್ಗಸೂಚಿ ಹಾಗೂ ಆರ್ಥಿಕ ಇಲಾಖೆಯ ಸಹಮತಿಯಂತೆ ಕಟ್ಟುನಿಟ್ಟಾಗಿ ಅನುಷ್ಠಾನ ಮಾಡತಕ್ಕದ್ದು.

prajaprabhat

Recent Posts

ವಿದ್ಯುತ್ ಕಂಬ ಬಿದ್ದು ಲೈನ್‌ಮ್ಯಾನ್ ಮೃತ ಪ್ರಕರಣ: ಆರೋಪಿಗೆ ಶಿಕ್ಷೆ

ಕೊಪ್ಪಳ.07.ಆಗಸ್ಟ್.25: ಜೆ.ಸಿ.ಬಿ ಕ್ರೆನ್ ಸರಪಳಿ ಜಾರಿ ತೆಲೆ ಮೇಲೆ ಬಿದ್ದಿರುವುದರಿಂದ ಲೈನ್‌ಮ್ಯಾನ್ ಮೃತ ಪಟ್ಟಿರುವ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟವಾಗಿದೆ.…

5 hours ago

ಗೃಹಲಕ್ಷ್ಮೀ 3ನೇ ಕಂತಿನ ಹಣ ಬಿಡುಗಡೆ- ರೆಡ್ಡಿ ಶ್ರೀ ನಿವಾಸ

ಕೊಪ್ಪಳ.07.ಆಗಸ್ಟ್.25: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ವರಮಹಾಲಕ್ಷ್ಮೀ ಹಬ್ಬದ…

5 hours ago

ಕಮ್ಯುನಿಟಿ ಮೊಬಿಲೈಜರ್ ಹುದ್ದೆಗೆ ಅರ್ಜಿ ಆಹ್ವಾನ

ರಾಯಚೂರು.07.ಆಗಸ್ಟ್.25: ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯ ವಿವಿಧ ವಾರ್ಡ್ಗಳಲ್ಲಿ 2 ವರ್ಷಗಳ ಅವಧಿಗೆ ಸ್ವಚ್ಛ ಭಾರತ್ ಮಿಷನ್ 2.0ನ ಐಇಸಿ…

6 hours ago

ಡಿ.ದೇವರಾಜು ಅರಸು ಜಯಂತಿ: ಅರ್ಥಪೂರ್ಣ ಆಚರಣೆಗೆ ಸೂಚನೆ

ರಾಯಚೂರು.07.ಆಗಸ್ಟ್.25: ಜಿಲ್ಲೆಯಲ್ಲಿ ಆಗಸ್ಟ್ 20 ರಂದು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು…

6 hours ago

ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಕೆಪಿಎಂಇ, ಪಿಸಿಪಿಎನ್‌ಡಿಟಿ ಕಾಯ್ದೆಗಳ ಮಾರ್ಗಸೂಚಿ ಪಾಲನೆಯಾಗಲಿ

ರಾಯಚೂರು.07.ಆಗಸ್ಟ್ .25: ಜಿಲ್ಲೆಯಲ್ಲಿ ಎಲ್ಲಾ ಆಸ್ಪತ್ರೆ ಮತ್ತು ಕ್ಲಿನಿಕ್‌ಗಳು ಕೆಪಿಎಂಇ ಕಾಯ್ದೆಯಡಿ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡಬೇಕು. ಕೆಪಿಎಂಇ ಕಾಯ್ದೆ…

6 hours ago

ಪವರ್ ಸ್ಟಾರ್ ರಾಯಚೂರಿನಲ್ಲಿ ಸೇನಾ<br>ನೇಮಕಾತಿಯ ಅಗ್ನಿಪರೀಕ್ಷೆ: ಇಂದಿನಿoದ ಆರಂಭ.

ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ಯಾದಗಿರಿ, ರಾಯಚೂರ ಜಿಲ್ಲೆಗಳ ಅಭ್ಯರ್ಥಿಗಳು ಭಾಗಿ ಶಿಸ್ತಿನ ಸಿಪಾಯಿಗಳ ಶಾಲೆಯಂತಾದ ರಾಯಚೂರಿನ ಕೃಷಿ ವಿಜ್ಞಾನಿಗಳ…

6 hours ago