16/06/2025 11:50 PM

Translate Language

Home » ಲೈವ್ ನ್ಯೂಸ್ » ರಾಜ್ಯ ಸರ್ಕಾರದಿಂದ 13000 ಶಿಕ್ಷಕರ ನೇಮಕಾತಿ : ಸಚಿವ ಮಧು ಬಂಗಾರಪ್ಪ

ರಾಜ್ಯ ಸರ್ಕಾರದಿಂದ 13000 ಶಿಕ್ಷಕರ ನೇಮಕಾತಿ : ಸಚಿವ ಮಧು ಬಂಗಾರಪ್ಪ

Facebook
X
WhatsApp
Telegram

ಶಿಮೊಗಾ.06.ಏಪ್ರಿಲ್.25:- ರಾಜ್ಯದಲ್ಲಿ ಶಿಕ್ಷಕರ ನೇಮಕಾತಿ ಕ್ರಮಕೈಗೊಳ್ಳಲಾಗಿದೆ. ವರ್ಷದೊಳಗಾಗಿ ನೌಕರರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಯತ್ನಿಸಲಾಗುವುದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ  ಹೇಳಿದರು.

ಅವರು ನಗರದ ನೆಹರೂ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ತಮ್ಮ ಕಾರ್ಯಕ್ಷೇತ್ರದಲ್ಲಿ ದಿನನಿತ್ಯ ಒತ್ತಡದಿಂದ ದಿನಕಳೆಯುವ ನೌಕರರು ತಮ್ಮಲ್ಲಿರುವ ಸುಪ್ತ ಪ್ರತಿಭೆಯ ಅನಾವರಣಕ್ಕೆ ಹಾಗೂ ಕೆಲಕ್ಷಣಗಳಾದರೂ ಒತ್ತಡದ ಬದುಕಿನಿಂದ ಮುಕ್ತಗೊಳ್ಳಲು ಈ ಸ್ಪರ್ಧೆಗಳು ಸಹಕಾರಿಯಾಗಿವೆ ಎಂದರು.

ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರು ಸ್ವೀಕರಿಸಿದ ಪ್ರಮಾಣದಂತೆ ಸ್ಪರ್ಧಾತ್ಮಕಭಾವದಿಂದ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದ ಅವರು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರೂ ವಿಜೇತರಾಗುವುದು ಸಾಧ್ಯವಿಲ್ಲ. ಆದರೆ ಸ್ಪರ್ಧಿಸುವ ಮನೋಭಾವ ಬೆಳೆಸಿಕೊಳ್ಳಬೇಕು.

ವಿಜೇತರಾದವರು ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ, ಜಿಲ್ಲೆಯ ಕೀರ್ತಿಗೆ ಕಾರಣರಾಗುವಂತೆ ಮನವಿ ಮಾಡಿದರು.

ಪ್ರಸಕ್ತ ಸಾಲಿನಲ್ಲಿ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಶಿವಮೊಗ್ಗದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು, ಜಿಲ್ಲಾಢಳಿತದೊಂದಿಗೆ ರಾಜ್ಯ ಸರ್ಕಾರದ ಎಲ್ಲಾ ಸಹಕಾರ ಹಾಗೂ ನೆರವನ್ನು ಒದಗಿಸಿಕೊಡಲಾಗುವುದು ಎಂದ ಅವರು, ಯುರೋಪಿಯನ್ಪ್ರೀಮಿಯರ್ಲೀಗ್ನ ಸಹಕಾರದಲ್ಲಿ ರಾಜ್ಯದ ಸುಮಾರು 60ಕ್ರೀಡಾಪಟುಗಳಿಗೆ ಮಾಸ್ಟರ್ಟ್ರೈನಿಂಗ್ನೀಡಲಾಗಿದೆ. ಇದೇ ಮಾದರಿಯಲ್ಲಿ ರಾಜ್ಯದ ಪ್ರತಿ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳಿಗೂ ತರಬೇತಿ ನೀಡಲು ಮನವಿ ಮಾಡಿಕೊಳ್ಳಲಾಗಿದೆ ಎಂದರು.

ಸರ್ಕಾರವೂ ಕೂಡ ನೌಕರರ ಸ್ನೇಹಿಯಾಗಿದ್ದು, ಈಗಾಗಲೇ ಆರೋಗ್ಯ ಸಂಜೀವಿವಿ ಯೋಜನೆಯನ್ನು ಜಾರಿಗೊಳಿಸಿದ್ದು, ರಾಜ್ಯದ ಸುಮಾರು 4.50;ಲಕ್ಷ ನೌಕರರು ಮತ್ತು ಅವರ ಕುಟುಂಬದ ಅವಲಂಬಿತರು ಯೋಜನೆಯ ಲಾಭ ಪಡೆದುಕೊಳ್ಳಲಿದ್ದಾರೆ.ರಾಜ್ಯ ಸರ್ಕಾರು ರಾಷ್ಟೀಯ ಬ್ಯಾಂಕುಗಳೊಂದಿಗೆ ಮಾಡಿಕೊಂಡ ಒಪ್ಪಂದ-ಕರಾರಿನಂತೆ ವಿಮಾ ಸೌಲಭ್ಯ ನೀಡಲು ಉತ್ಸುಕವಾಗಿದೆ. ನೌಕರರ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಬದಲಾವಣೆ ಮಾಡಲು ಉದ್ದೇಶಿಸಿದೆ.

ಬ್ಯಾಕ್ಲಾಗ್ಹುದ್ದೆಗಳ ನೇಮಕಾತಿಗೆ ಈಗಾಗಲೇ ಗಮನಹರಿಸಿದೆ. 13000ಶಿಕ್ಷಕರ ನೇಮಕಾತಿ ಕ್ರಮಕೈಗೊಳ್ಳಲಾಗಿದೆ. ಮುಂದಿನ ಒಂದು ವರ್ಷದೊಳಗಾಗಿ ನೌಕರರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಯತ್ನಿಸಲಾಗುವುದು ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮಾತನಾಡಿ, ರಾಜ್ಯಮಟ್ಟದ ನೌಕರರ ಕ್ರೀಡಾಕೂಟವನ್ನು ಏಪ್ರಿಲ್ಮಾಹೆಯಲ್ಲಿ ಶಿವಮೊಗ್ಗದಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದರು.


ರಾಜ್ಯ ಸರ್ಕಾರಿ ನೌಕರರು ವೇತನಾಧಾರಿತ ಬ್ಯಾಂಕ್ಖಾತೆ ತೆರೆದು, 1.20ಕೋಟಿ ಮೊತ್ತದ ವಿಮಾ ಸೌಲಭ್ಯ ಮತ್ತು ಮಕ್ಕಳ ಶೈಕ್ಷಣಿಕ ಸೌಲಭ್ಯ, ಆಕಸ್ಮಿಕ ಅಪಘಾತ ಮುಂತಾದ ಸೌಲಭ್ಯಗಳ ಲಾಭ ಪಡೆದುಕೊಳ್ಳಬೇಕು.

ಈಗಾಗಲೇ ಸಂಘವು ಕೈಗೊಂಡು ನಿರ್ಣಯದಂತೆ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಲು ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅದರ ಅಧ್ಯಯನಕ್ಕಾಗಿ ಹಿರಿಯ ಅಧಿಕಾರಿ ಅಂಜುಂ ಫರ್ವೇಜ್‌ಅವರ ನೇತೃತ್ವದಲ್ಲಿ ಸಮಿತಿ ರಚಿಸಿದೆ. ಈ ಸಮಿತಿಯು ಶೀಘ್ರದಲ್ಲಿ ವರದಿ ಸಲ್ಲಿಸಲಿದ್ದು, ವರದಿಯಂತೆ ಸರ್ಕಾರ ಪಿಂಚಣಿ ವ್ಯವಸ್ಥೆ ಜಾರಿಗೊಳಿಸುವ ಆಶಾಭಾವನೆ ಹೊಂದಲಾಗಿದೆ ಎಂದರು.


ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಆರ್.ಮೋಹನ್ಕುಮಾರ್‌ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ಸದಸ್ಯೆ ಶ್ರೀಮತಿ ಬಲ್ಕಿಶ್ಬಾನು, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪೊಲೀಸ್ವರಿಷ್ಠಾಧಿಕಾರಿ ಜಿ.ಕೆ.ಮಿಥುನಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಮಹಾನಗರಪಾಲಿಕೆ ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!