ಬೆಂಗಳೂರು.01ಜುನ್.25:-ರಾಜ್ಯದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ರೂಪಿಸಲಾಗಿರುವ ಸಿಎಸ್ ಆರ್ ಅನುದಾನದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ ಯೋಜನೆಗೆ ನೋಡಲ್ ಅಧಿಕಾರಿಗಳನ್ನು ಸರಕಾರ ನೇಮಿಸಿದೆ.
ಈ ಯೋಜನೆಯನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರಲು ವಿವಿಧ ಸಂಸ್ಥೆಗಳ ಸಿಎಸ್ ಆರ್ ಹಣ ಕ್ರೂಢೀಕರಿಸಲು ಕೈಗಾರಿಕೆ ಅಭಿವೃದ್ಧಿ ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ ಅವರನ್ನು ಸಮನ್ವಯ ಅಧಿಕಾರಿಯನ್ನಾಗಿ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಖುಷ್ಬೂ ಜಿ.ಚೌಧರಿ ಅವರನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.
ತಮ್ಮ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಸರ್ಕಾರ ಸೂಚಿಸಿದ ಕಡೆಗಳಲ್ಲಿ ಕೆಪಿಎಸ್ ಶಾಲೆಗಳ ಕಟ್ಟಡ ಹಾಗೂ ಮೂಲಸೌಕರ್ಯಗಳನ್ನು ಖಾಸಗಿ ಸಂಸ್ಥೆಗಳು ತಮ್ಮ ಸಿಎಸ್ ಆರ್ ಹಣದಲ್ಲಿ ನಿರ್ಮಿಸಿ ಕೊಡಬೇಕಾಗಿದೆ.
ರಾಜ್ಯ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಈ ಕನಸಿನ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಜಾರಿಯಾಗದ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ತ್ವರಿತವಾಗಿ ಕಾರ್ಯಗತಗೊಳಿಸಲು ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…