|

ರಾಜ್ಯ ಸರ್ಕಾರದಿಂದ PDO ಗಳ ವರ್ಗಾವಣೆ ಕೌನ್ಸಿಲಿಂಗ ಆದೇಶ ಹೊರಡಿಸಿದೆ.

ಬೆಂಗಳೂರು.03.ಸೆಪ್ಟೆಂಬರ್.25:- 2025-26ನೇ ಸಾಲಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಉಲ್ಲೇಖಿತ ಅಧಿಸೂಚನೆ ಮತ್ತು ತಿದ್ದುಪಡಿ ಆದೇಶಗಳಲ್ಲಿನ ವೇಳಾಪಟ್ಟಿಯಂತೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಕಾಳಿದಾಸ ಮಾರ್ಗ, ಗಾಂಧಿನಗರ, ಬೆಂಗಳೂರು-560009 ಇಲ್ಲಿ ನಡೆಸಲಾಗುತ್ತಿದ್ದು, ವಿಶೇಷ ಪ್ರಕರಣ, ಕಡ್ಡಾಯ ವರ್ಗಾವಣೆ ಮತ್ತು ಸಾಮಾನ್ಯ ಕೋರಿಕೆ ವರ್ಗಾವಣೆಗೆ ಅರ್ಹರಾಗಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ನಿಗಧಿತ ದಿನಾಂಕಗಳಂದು ವರ್ಗಾವಣೆ ಕೌನ್ಸಿಲಿಂಗ್‌ಗೆ ಹಾಜರಾಗುವಾಗ ಈ ಕೆಳಕಂಡ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಿದೆ.

ವರ್ಗಾವಣೆ ಕೌನ್ಸಿಲಿಂಗ್‌ಗೆ ಹಾಜರಾಗುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕಡ್ಡಾಯವಾಗಿ ಗುರುತಿನ ಚೀಟಿ (ID Card)/ ಆಧಾರ್ ಕಾರ್ಡ್ ಮತ್ತು ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವುದು.

ವರ್ಗಾವಣೆ ಕೌನ್ಸಿಲಿಂಗ್‌ನ ನಿಗಧಿತ ದಿನಾಂಕದಂದು ಪೂರ್ವಾಹ್ನದ ಅಧಿವೇಶನಕ್ಕೆ ಹಾಜರಾಗಬೇಕಾದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಪೂರ್ವಾಹ್ನ 9:00 ಗಂಟೆಗೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಕಡ್ಡಾಯವಾಗಿ ಹಾಜರಿದ್ದು, ಪೂರ್ವಾಹ್ನ 930 ಗಂಟೆಯೊಳಗೆ ಅಗತ್ಯವಾಗಿ ನೊಂದಣಿಮಾಡಿಸಿಕೊಳ್ಳತಕ್ಕದ್ದು. ಅಪರಾಹ್ನದ ಅಧಿವೇಶನಕ್ಕೆ ಹಾಜರಾಗಬೇಕಾದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಅಪರಾಹ್ನ 01:00 ಗಂಟೆಗೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಕಡ್ಡಾಯವಾಗಿ ಹಾಜರಿದ್ದು ಅಪರಾಹ್ನ 1:30 ಗಂಟೆಯೊಳಗೆ ನೊಂದಣಿ ಮಾಡಿಸಿಕೊಳ್ಳತಕ್ಕದ್ದು.

ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆಗೆ ಹಾಜರಾದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆ ಪೂರ್ಣವಾಗುವವರೆಗೂ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಕಚೇರಿಯಲ್ಲಿ ಹಾಜರಿದ್ದು, ವರ್ಗಾವಣೆ ಆದೇಶಗಳನ್ನು ಹಾಗೂ ಹಾಜರಾತಿ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ಪಡೆದುಕೊಂಡು ತೆರಳತಕ್ಕದ್ದು.

ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆಯನ್ನು ಪಾರದರ್ಶಕವಾಗಿ ಕೌನ್ಸೆಲಿಂಗ್ ಮೂಲಕ ನಡೆಸುವ ಪ್ರಕ್ರಿಯೆಗೆ ಇಂದು ಚಾಲನೆ ನೀಡಲಾಯಿತು. ಇದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯ ಪುಟಗಳಲ್ಲಿ ಚರಿತ್ರಾರ್ಹ ದಿನವಾಗಿದೆ.

ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಪ್ರಮುಖ ಬೇಡಿಕೆಯಂತೆ ಕೌನ್ಸಿಲಿಂಗ್ ವರ್ಗಾವಣೆಗಳನ್ನು ಜಾರಿಗೆ ತರಲಾಗಿದ್ದು, ಪಿಡಿಒಗಳು ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ ನೀಡಿ ಕಾರ್ಯನಿರ್ವಹಿಸುವಲ್ಲಿ ಕಂಕಣಬದ್ಧರಾಗಬೇಕಾಗಿದೆ.

Similar Posts

Leave a Reply

Your email address will not be published. Required fields are marked *