ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನಕ್ಕೆ ಚಾಲನೆ

ಕೊಪ್ಪಳ.02.ಜುಲೈ 25 ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಆರ್ಥಿಕವಾಗಿ ಸಭಲರಾಗಲು ತುಂಬಾ ಅನುಕೂಲವಾಗಿದೆ ಎಂದು ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಹೇಳಿದರು.


ಅವರು ಬುಧವಾರ ಕೊಪ್ಪಳ ಕೇಂದ್ರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜುಲೈ 2 ರಿಂದ ಜು. 4 ರವರೆಗೆ ಮೂರು ದಿನಗಳ ಕಾಲ ಏರ್ಪಡಿಸಲಾಗಿರುವ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.


ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದ್ದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ, ಅನ್ನಭಾಗ್ಯ ಮತ್ತು ಶಕ್ತಿಯೋಜನೆ ಸೇರಿದಂತೆ ಸರ್ಕಾರದ ಎಲ್ಲಾ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಇದರಿಂದಾಗಿ ಜನರು ಆರ್ಥಿಕವಾಗಿ ಸದೃಢರಾಗಿ ನೆಮ್ಮದಿಯಿಂದ ಬಧುಕುವಂತಾಗಿದೆ. ಪಂಚ ಗ್ಯಾರಂಟಿ ಯೋಜನೆಗಳಿಂದ ವಿಶೇಷವಾಗಿ ಕಡು ಬಡವರು, ಕೃಷಿ ಕೂಲಿ ಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಿದೆ. ಉಚಿತ ಬಸ್ ಪ್ರಮಾಣದಿಂದ ಮಹಿಳೆಯರು ಧಾರ್ಮಿಕ ಸ್ಥಳಗಳು ಮತ್ತು ಹಲವಾರು ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಿದ್ದಾರೆ. ಗೃಹಲಕ್ಷ್ಮೀ ಸಹಾಯಧನವು ಮಹಿಳೆಯರ ಕುಟುಂಬ ನಿರ್ವಹಣೆಗೆ ತುಂಬಾ ಅನುಕೂಲವಾಗಿದೆ ಎಂದರು.


ರಾಜ್ಯ ಸರ್ಕಾರವು ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನವನ್ನು ಉದ್ಘಾಟಿಸಲಾಗಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ಈ ವಸ್ತು ಪ್ರದರ್ಶನಕ್ಕೆ ಭೇಟಿ ನೀಡಿ ಅವುಗಳ ಮಾಹಿತಿ ಪಡೆಯಬಹುದಾಗಿದೆ ಎಂದು ಹೇಳಿದರು.
ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಮಾತನಾಡಿ, ಕೊಪ್ಪಳ ಜಿಲ್ಲೆಯ ಏಳು ತಾಲ್ಲೂಕುಗಳಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪರೀಣಾಮಕಾರಿಯಾಗಿ ಅನುಷ್ಠಾನ ಮಾಡಲಾಗುತ್ತಿದ್ದು, ಶೇ. 98ರಷ್ಟು ಗುರಿಯನ್ನು ಜಿಲ್ಲೆಯಲ್ಲಿ ತಲುಪಿದ್ದೇವೆ. ರಾಜ್ಯ ಸರ್ಕಾರ ಎರಡು ವರ್ಷ ಯಶಸ್ವಿಯಾಗಿ ಈ ಎಲ್ಲಾ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರಿಂದ ಜನರಿಗೆ ಬಹಳ ಅನುಕೂಲವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರ ಮಾರ್ಗದರ್ಶನದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳಿಂದ ನಿರಂತರವಾಗಿ ಸಭೆಗಳನ್ನು ನಡೆಸುತ್ತಿದ್ದೇವೆ. ಕೊಪ್ಪಳ ಜಿಲ್ಲೆಯು ರಾಜ್ಯದಲ್ಲಿಯೇ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಮುಂಚೂಣಿ ಜಿಲ್ಲೆಗಳಲ್ಲಿ ಒಂದಾಗಿದೆ ಎಂದು ಹೇಳಲು ನಮಗೆ ಹೆಮ್ಮೆ ಅನಿಸುತ್ತದೆ ಎಂದರು.


ಈ ಸಂದರ್ಭದಲ್ಲಿ ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಮಂಜುನಾಥ ಗೊಂಡಬಾಳ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಮಗದ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಂದ್ರ ಜಾಧವ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಡಾ. ಸುರೇಶ ಜಿ., ನಗರಸಭೆ ಸದಸ್ಯ ಗುರುರಾಜ ಹಲಗೇರಿ, ಗ್ಯಾರಂಟಿ ಸಮಿತಿ ತಾಲೂಕ ಸದಸ್ಯರಾದ ಜ್ಯೋತಿ ಎಂ. ಗೊಂಡಬಾಳ, ಅವಿತಾ ಗೋರಂಟ್ಲಿ, ಮಾನ್ವಿ ಪಾಶಾ, ಕ.ಕ.ರ.ಸಾ.ನಿ ಕೊಪ್ಪಳ ವಿಭಾಗೀಯ ಸಂಚಾರ ಅಧಿಕಾರಿ ಪರಮೇಶ್ವರಪ್ಪ, ಕಾರ್ಮಿಕ ಕಲ್ಯಾಣಾಧಿಕಾರಿ ಸತ್ಯನಾರಾಣ, ಘಟಕ ವ್ಯವಸ್ಥಾಕ ರಮೇಶ ಚಿಣಗಿ ಸೇರಿದಂತೆ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು, ವಾರ್ತಾ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.


*ಜು. 4 ರವರೆಗೆ ವಸ್ತು ಪ್ರದರ್ಶನ:* ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳು ಸೇರಿದಂತೆ ಸರ್ಕಾರದ ಎಲ್ಲಾ ಯೋಜನೆಗಳ ಮಾಹಿತಿಯನ್ನು ಒಳಗೊಂಡಿರುವ ವಸ್ತು ಪ್ರದರ್ಶನವನ್ನು ಸಾರ್ವಜನಿಕರ ವೀಕ್ಷಣೆಗೆ ಅವಕಾಶವಿದ್ದು, ವಸ್ತು ಪ್ರದರ್ಶನದಲ್ಲಿ ಅಲಂಕಾರಿಕ ಸ್ವಾಗತ ಕಮಾನು, ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳ ಬೃಹತ್ ಭಾವಚಿತ್ರದ ಕಟೌಟ್‌ಗಳು ಸೇರಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಹಾಗೂ ಪ್ರತಿ ಯೋಜನೆಗಳ ಫಲಾನುಭವಿಗಳ ಭಾವಚಿತ್ರಗಳನ್ನು ಪ್ರದರ್ಶಿಸಲಾಗಿದೆ. ವಿಶೇಷವಾಗಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಣೆ ಮಾಡುವ ಪ್ರತಿಮೆಯ ಸೆಲ್ಫಿ ಪಾಯಿಂಟ್‌ನಲ್ಲಿ ಫೋಟೋ ತೆಗೆದುಕೊಳ್ಳು ಅವಕಾಶ ಕಲ್ಪಿಸಲಾಗಿದೆ. ಈ ವಸ್ತು ಪ್ರದರ್ಶನವು ಜು. 4 ರವರೆಗೆ ನಡೆಯಲಿದ್ದು, ಕೊಪ್ಪಳ ಜಿಲ್ಲೆಯ ಸಾರ್ವಜನಿಕರು ಇಲ್ಲಿಗೆ ಭೇಟಿ ನೀಡಿ, ಸರ್ಕಾರದ ಯೋಜನೆಗಳ ಮಾಹಿತಿ ಪಡೆಯಬಹುದಾಗಿದೆ.

prajaprabhat

Recent Posts

ಭಾರಿ ಗಾತ್ರದ ಹೆಬ್ಬಾವು ರಕ್ಷಿಸಿದ ಸ್ನೇಕ್ ಮಹೇಶ್.

ಚಾಮರಾಜನಗರ.06.ಜುಲೈ.25:- ಯಳಂದೂರು ತಾಲೂಕು  ಕೊಮಾರನಪುರ ಗ್ರಾಮದ ಜೆಎಸ್ಎಸ್ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ರವಿ ಎಂಬುವವರ ಕಬ್ಬಿನ ಗದ್ದೆಯಲ್ಲಿ ಕಬ್ಬಿನ ಕಟಾವು…

8 hours ago

ಅತಿಥಿ ಉಪನ್ಯಾಸಕರ ಪ್ರಮುಖ ಸಮಸ್ಯೆಗಳನ್ನು ಸರ್ಕಾರ ಗಮನಹರಿಸಲೀ.

ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನಿಗದಿಪಡಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸದ ಕಾರಣ ವಜಾಗೊಳಿಸುವಿಕೆಯನ್ನು ಎದುರಿಸುತ್ತಿರುವ ಗ್ರೀ ಕಾಲೇಜುಗಳು. ಕರ್ನಾಟಕ ಸರ್ಕಾರವು…

13 hours ago

ಬೀದರ ವಾರ್ತಾ ಇಲಾಖೆ: ಬೀದಿನಾಟಕ ಮತ್ತು ಜಾನಪದ ಸಂಗೀತ ಕಲಾತಂಡಗಳಿoದ ಅರ್ಜಿ ಆಹ್ವಾನ

ಬೀದರ.06.ಜುಲೈ.25:- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್ಕಾರದ ಯೋಜನೆಗಳನ್ನು ಪ್ರಚುರ ಪಡಿಸುವ ಉದ್ದೇಶಕ್ಕಾಗಿ ಬೀದಿನಾಟಕ ಮತ್ತು ಜಾನಪದ ಸಂಗೀತ…

17 hours ago

ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಒದಗಿಸಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.06.ಜುಲೈ.25:- ಜಿಲ್ಲೆಯಲ್ಲಿರುವ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಅಗತ್ಯ ಸೌಲಭ್ಯ ಒದಗಿಸಬೇಕು ಹಾಗೂ ಆ ಜನಾಂಗದವರಿಗೆ ವಸತಿ ಸೌಲಭ್ಯದಡಿಯಲ್ಲಿ ಮನೆಗಳನ್ನು…

17 hours ago

ಗುರುದ್ವಾರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ

ಬೀದರ.06.ಜುಲೈ.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶನಿವಾರ ಐತಿಹಾಸಿಕ ಗುರುನಾನಕ್ ಝೀರಾ ಸಾಹೇಬ್…

17 hours ago