ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಎ ಚೀಂಕೋಡೇ

01.ಜಿ.25.ಬೀದರ:-  ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸದುಪಯೋಗ ಎಲ್ಲರೂ ಪಡೆದುಕೊಳ್ಳಬೇಕೆಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಮೃತರಾವ ಚಿಮಕೋಡೆ ತಿಳಿಸಿದರು.


ಅವರು ಇಂದು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಯೋಜನೆಗಳಿಂದ ಬಡವರು, ಕೂಲಿ ಕಾರ್ಮಿಕರು ಹಾಗೂ ನಿರುದ್ಯೋಗ ಯುವಕರ ಬದುಕಿಗೆ ಆಸರೆಯಾಗಿದೆ. ಈ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಅಗತ್ಯ ಕ್ರಮ ವಹಿಸುವಂತೆ ತಿಳಿಸಿದರು. 


ಜಿಲ್ಲೆಯಾದ್ಯಂತ ಅನ್ನಭಾಗ್ಯ ಯೋಜನೆಯಡಿ ಆಗಸ್ಟ್.2024 ರವರೆಗೆ 343703 ಪಡಿತರ ಚೀಟಿಗಳಿದ್ದು, ರೂ. 188019490 ಕೋಟಿ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ. ಗೃಹಲಕ್ಷ್ಮೀ ಯೋಜನೆಯಡಿ ಅಕ್ಟೋಬರ್-2024 ರವರೆಗೆ 335429 ಫಲಾನುಭವಿಗಳು ನೋಂದಾಯಿಸಿಕೊಂಡಿದ್ದು, ಒಟ್ಟು ರೂ. 9298820000 ಗಳನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ.

ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 376084 ಫಲಾನುಭವಿಗಳಿದ್ದು, ಒಟ್ಟು 231.12 ಕೋಟಿ ರೂ. ವೆಚ್ಚ ಭರಿಸಲಾಗಿದೆ. ಶಕ್ತಿ ಯೋಜನೆಯಡಿಯಲ್ಲಿ ಒಟ್ಟು 62337710 ಅಭ್ಯರ್ಥಿಗಳು ಉಚಿತವಾಗಿ ಪ್ರಯಾಣಿಸುವುದರ ಮೂಲಕ ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ. ಹಾಗೂ ಯುವನಿಧಿ ಯೋಜನೆಯಡಿ ಜಿಲ್ಲೆಯಾದ್ಯಂತ ಒಟ್ಟು 5395 ಪದವಿ ಹಾಗೂ 81 ಡಿಪ್ಲೋಮಾ ಪೂರ್ಣಗೊಳಿಸಿದ ನೋಂದಾಯಿತ ಫಲಾನುಭವಿಗಳು ಯೋಜನೆಯ ಲಾಭ ಪಡೆಯುತ್ತಿದ್ದು, ಒಟ್ಟು ರೂ. 93234000 ಗಳನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ ಎಂದು ಮಾಹಿತಿ ನೀಡಿದರು.


ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕರಿಗಳಾದ ಡಾ.ಗಿರೀಶ ಬದೋಲೆ ಮಾತನಾಡಿ, ಪ್ರಗತಿ ಪರಿಶೀಲನಾ ಸಭೆಗೆ ಸಂಬಂಧಪಟ್ಟ ಯೋಜನೆಗಳ ಅಧಿಕಾರಿಗಳು ಗೈರು ಹಾಜರಾಗಿ ಸರಿಯಾದ ಮಾಹಿತಿ ನೀಡದ ಅಧಿಕಾರಿಗಳಿಗೆ ನೋಟಿಸ ನೀಡಲು ಸೂಚಿಸಿದರು.


ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿಗಳಾದ ಕಿಶೋರ ದುಬೆ, ಜಿಲ್ಲಾ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾದ ಪೂರ್ಜಾ ಚಾರ್ಜ, ಲತಾ ಹಾರಕೂಡೆ, ಮಾರುತಿ ಬಂಗಾರೆ, ಮಹೆರೋಜ್ ಖಾನ್, ಬೀದರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಚಂದ್ರಶೇಖರ ಫೂಲೆಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಶ್ರೀಧರ, ಜೇಸ್ಕಾಂ ಕಾರ್ಯಪಾಲಕ ಅಭಿಯಂತರರು, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಉದ್ಯೋಗ ವಿನಿಮಯ ಇಲಾಖೆಯ ಅಧಿಕಾರಿಗಳು ಮತ್ತು ತಾಲ್ಲೂಕ ಮಟ್ಟದ ಗ್ಯಾರಂಟಿ ಸಮಿತಿ ಸದಸ್ಯರುಗಳು ಸೇರಿದಂತೆ ಎಲ್ಲಾ ತಾಲ್ಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಬೀದರ ಜಿಲ್ಲೆಯ ಎಲ್ಲಾ ಎಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು ಇದರು.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

2 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

3 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

3 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

4 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

4 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

5 hours ago