ಬೆಂಗಳೂರು.09.ಜುಲೈ.25:- ಪರಿವೀಕ್ಷಣಾ ಅವಧಿಯಲ್ಲಿ ತಡೆಹಿಡಿಯಲಾದ ವಾರ್ಷಿಕ ವೇತನ ಬಡ್ತಿಗಳನ್ನು ಬಿಡುಗಡೆಗೊಳಿಸಿ ವೇತನ ನಿಗಧೀಕರಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪರಿವೀಕ್ಷಣಾ ಅವಧಿಯನ್ನು ತೃತ್ತಿಕರವಾಗಿ ಪೂರೈಸಿದ ಕೂಡಲೇ ವಾರ್ಷಿಕ ವೇತನ ಬಡ್ತಿ ಮಂಜೂರು ಮಾಡುವುದಕ್ಕೆ ಸಂಬಂಧಿಸಿದಂತೆ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ನೇಮಕಾತಿ ಹೊಂದಿರುವ ಸರ್ಕಾರಿ ನೌಕರರು ಪರಿವೀಕ್ಷಣಾವಧಿಯನ್ನು ತೃಪ್ತಿಕರವಾಗಿ ಪೂರೈಸಿರುವ ಘೋಷಣೆ ನಂತರದಲ್ಲಿ ವಾರ್ಷಿಕ ವೇತನ ಬಡ್ತಿ ಬಿಡುಗಡೆಗೆ ಒಳಗೊಂಡಂತೆ ಸಕ್ಷಮ ಪ್ರಾಧಿಕಾರಗಳಿಂದ ವೇತನ ನಿಗಧಿ ಆದೇಶಗಳನ್ನು ಹೊರಡಿಸಲು ಸಾಮಾನ್ಯವಾಗಿ ವಿಳಂಬವಾಗುತ್ತಿದೆ.
ಇದರಿಂದ ಅನಗತ್ಯ ತೊಂದರೆಯುಂಟಾಗುತ್ತಿದೆ.
ಈ ಸನ್ನಿವೇಶಗಳನ್ನು ಸರಿಪಡಿಸುವ ದೃಷ್ಟಿಯಿಂದ ವೇತನ ನಿಗಧಿ ಆದೇಶಗಳು/ವಾರ್ಷಿಕ ವೇತನ ಬಡ್ತಿ ಬಿಡುಗಡೆಗಳಂತಹ ಪ್ರಕರಣಗಳಲ್ಲಿ ಪರಿವೀಕ್ಷಣಾವಧಿಯನ್ನು ತೃಪ್ತಿಕರವಾಗಿ ಪೂರೈಸಿದ ಘೋಷಣಾ ಆದೇಶ ಹೊರಡಿಸಿದ ದಿನಾಂಕದಿಂದ ಒಂದು ತಿಂಗಳೊಳಗಾಗಿ ಮಂಜೂರು ಮಾಡುವ ಕುರಿತು ಸೂಚನೆ ನೀಡುವಂತೆ ಆಯೋಗವು ಶಿಫಾರಸ್ಸು ಮಾಡಿದೆ.
ಈ ಹಿನ್ನೆಲೆಯಲ್ಲಿ ಗ್ರೂಪ್-ಸಿ ಮತ್ತು ಡಿ ವೃಂದದ ಸರ್ಕಾರಿ ನೌಕರರ ಪರಿವೀಕ್ಷಣಾ ಅವಧಿಯನ್ನು ವಿಸ್ತರಿಸಿದ ಸಂದರ್ಭದಲ್ಲಿ, ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಗಳು ಪರಿವೀಕ್ಷಣಾ ಅವಧಿಯನ್ನು ತೃಪ್ತಿಕರವೆಂದು ಘೋಷಿಸಿ ಆದೇಶ ಹೊರಡಿಸಿದ ದಿನಾಂಕದಿಂದ ಒಂದು ತಿಂಗಳೊಳಗೆ ತಡೆಹಿಡಿಯಲಾದ ವಾರ್ಷಿಕ ವೇತನ ಬಡ್ತಿಗಳನ್ನು ಬಿಡುಗಡೆಗೊಳಿಸಿ ವೇತನ ನಿಗದಿಪಡಿಸಲು ಅಗತ್ಯ ಕ್ರಮ ಕೈಗೊಳ್ಳತಕ್ಕದ್ದು.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…