Home » ಲೈವ್ ನ್ಯೂಸ್ » ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ 31 ಜುಲೈ ಕೊನೆಯ

ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ 31 ಜುಲೈ ಕೊನೆಯ

Facebook
X
WhatsApp
Telegram

ಬೆಂಗಳೂರು.15.ಜುಲೈ.26:ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಮಹತ್ವದ ತೀರ್ಮಾನ ಕೈಗೊಂಡಿದೆ. 2026-27ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಜುಲೈ 31ರವರೆಗೆ ಮತ್ತೊಮ್ಮೆ ವಿಸ್ತರಿಸಿ ಅಧಿಕೃತ ಆದೇಶ ಹೊರಡಿಸಿದೆ.

ಮೂಲ ವೇಳಾಪಟ್ಟಿಯ ಪ್ರಕಾರ, ಪ್ರಸಕ್ತ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಯನ್ನು ದಿನಾಂಕ 15 ಏಪ್ರಿಲ್ 2026 ರಿಂದ 31 ಮೇ 2026 ರವರೆಗೆ ನಡೆಸಲು ನಿಗದಿಪಡಿಸಲಾಗಿತ್ತು. ಆದರೆ, ವಿವಿಧ ಇಲಾಖೆಗಳ ಆಡಳಿತಾತ್ಮಕ ಅಗತ್ಯತೆಗಳು ಹಾಗೂ ತಾಂತ್ರಿಕ ಕಾರಣಗಳನ್ನು ಪರಿಗಣಿಸಿ ಸರ್ಕಾರವು ಈ ಅವಧಿಯನ್ನು ಹಂತ ಹಂತವಾಗಿ ವಿಸ್ತರಿಸುತ್ತಾ ಬಂದಿದೆ.

ಈ ಹಿಂದೆ ಜೂನ್ 1 ಮತ್ತು ಜೂನ್ 30 ರಂದು ಎರಡು ಪ್ರತ್ಯೇಕ ಆದೇಶಗಳನ್ನು ಹೊರಡಿಸಿದ್ದ ಸರ್ಕಾರ, ವರ್ಗಾವಣೆ ಪ್ರಕ್ರಿಯೆಯ ಗಡುವನ್ನು ಜುಲೈ 15 ರವರೆಗೆ ಮುಂದೂಡಿತ್ತು. ಜುಲೈ 15ಕ್ಕೆ (ಇಂದಿಗೆ) ಈ ಅವಧಿ ಮುಕ್ತಾಯಗೊಳ್ಳಬೇಕಿತ್ತು.

ಜುಲೈ 31 ಕೊನೆಯ ದಿನಾಂಕ

ವರ್ಗಾವಣೆ ಪ್ರಕ್ರಿಯೆ ಇನ್ನೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಹಾಗೂ ಆಡಳಿತ ಹಿತದೃಷ್ಟಿಯಿಂದ ಸರ್ಕಾರವು ಇದೀಗ ಮೂರನೇ ಬಾರಿಗೆ ಅವಧಿ ವಿಸ್ತರಣೆ ಮಾಡಿದೆ. ಹೊಸ ಆದೇಶದ ಅನ್ವಯ, ನೌಕರರು ಮತ್ತು ಅಧಿಕಾರಿಗಳ ಸಾರ್ವತ್ರಿಕ ವರ್ಗಾವಣೆಗೆ ದಿನಾಂಕ 31 ಜುಲೈ 2026ರವರೆಗೆ ಕಾಲಾವಕಾಶ ನೀಡಲಾಗಿದೆ.

ಈ ವಿಸ್ತರಣೆಯಿಂದಾಗಿ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸಾವಿರಾರು ಸರ್ಕಾರಿ ನೌಕರರಿಗೆ ಹಾಗೂ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಇಲಾಖಾ ಮುಖ್ಯಸ್ಥರಿಗೆ ಹೆಚ್ಚಿನ ಕಾಲಾವಕಾಶ ಸಿಕ್ಕಂತಾಗಿದೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology