ಬೆಂಗಳೂರು.03.ಫೆ.25:- ಕರ್ಣಾಟಕ ರಾಜ್ಯ ಸರ್ಕಾರ ಇನ್ಮುಂದೆ ಹೊಸ ನಿಯಮಾವಳಿಗೆ ಚಾಲನೆ ಮಾಡಿದಾರೆ ಆದೇಶ ಯೆನ್ ಅಂದ್ರೆ ಇಲ್ಲಿ ನೋಡೋಣಾ,
ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್, ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದ ಸರ್ಕಾರದ ಸಭೆ ಮತ್ತು ಸಮಾರಂಭಗಳನ್ನು ಆಯೋಜಿಸುವಾಗ ಪಾಲೀಸಬೇಕಾದ ಶಿಷ್ಟಾಚಾರದ ಕ್ರಮಗಳ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಸಭೆ ಹಾಗೂ ಸಮಾರಂಭಗಳಲ್ಲಿ ಇನ್ಮುಂದೆ ಈ ನಿಯಮಗಳ ಪಾಲನೆ ಕಡ್ಡಾಯ : ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜಿಲ್ಲೆಯಲ್ಲಿ ಗ್ರಾಮ ಪಂಚಾಯತ, ತಾಲೂಕ, ಜಿಲ್ಲಾ ಮತ್ತು ರಾಜ್ಯ ಮಟ್ಟದ ಸರ್ಕಾರದ ಸಭೆ ಮತ್ತು ಸಮಾರಂಭಗಳನ್ನು ಆಯೋಜಿಸುವಾಗ ಆಹ್ವಾನ ಪತ್ರಿಕೆಗಳನ್ನು ಮುದ್ರಿಸುವಲ್ಲಿ ಮತ್ತು ಜನ ಪ್ರತಿನಿಧಿಗಳನ್ನು ಆಹ್ವಾನಿಸುವಲ್ಲಿ ಹಾಗೂ ಕಾರ್ಯಕ್ರಮದ ಮಾಹಿತಿಯನ್ನು ಆಹ್ವಾನ ಪತ್ರಿಕೆಯೊಂದಿಗೆ ಜನ ಪ್ರತಿನಿಧಿಗಳಿಗೆ ನೀಡುವಲ್ಲಿ ಸೂಚನೆಗಳನ್ನು ವಾಲಿಸದೇ ಜಿಲ್ಲಾಡಳಿತಕ್ಕೆ ಮುಜುಗುರ ಉಂಟು ಮಾಡುವ ಸನ್ನಿವೇಶಗಳು ಪದೇ ಪದೇ ಉದ್ಭವಿಸುತ್ತಿರುವುದು.
ವಿಷಾದನೀಯವಾಗಿರುತ್ತದೆ ಹಾಗೂ ಪಂಚಾಯತಿ ಅಧಿಕಾರಿಗಳು, ತಾಲೂಕ ಮಟ್ಟದ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಬಗ್ಗೆ ಕಾಳಜಿ ವಹಿಸದೇ ಇರುವುದು ಸಹ ಮುಖ್ಯ ಕಾರಣ ವಾಗಿರುತ್ತದೆ.
ಆದುದರಿಂದ ಜಿಲ್ಲೆಯಲ್ಲಿ ಯಾವುದೇ ಸರ್ಕಾರಿ ಕಾರ್ಯಕ್ರಮವನ್ನು ಏರ್ಪಡಿಸುವ ಮುನ್ನ ಸಂಬಂಧಪಟ್ಟ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಲ್ಲೇಖ ಮತ್ತು 12 ರಲ್ಲಿನಸೂಚನೆಗಳನ್ನು ಕಡ್ಡಾಯವಾಗಿ ಅನುಸರಿಸಿ ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಲು ಹಾಗೂ ಜನಪತಿನಿಧಿಗಳನ್ನು ಖುದ್ದಾಗಿ ಆಮಂತ್ರಣ ಪತ್ರಿಕೆ ನೀಡುವ ಮೂಲಕ ಆಹ್ವಾನಿಸಲು ಕ್ರಮ ಕೈಕೊಳ್ಳುವುದು.
ಆಮಂತ್ರಣ ಪತ್ರಿಕೆಗಳಿಗೆ ಅನುಮೋದನೆಯನ್ನು ಪಡೆದುಕೊಳ್ಳುವಾಗ ಸಿಬ್ಬಂದಿಗಳನ್ನು ಕಳುಹಿಸದೇ ಖುದ್ದಾಗಿ ಬಂದು ಜಿಲ್ಲಾಧಿಕಾರಿಗಳು/ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತಿಯವರ ಅನುಮೋದನೆ ಪಡೆದುಕೊಳ್ಳಲು ಸೂಚಿಸಿದೆ.
ಮುಂದುವರೆದು ಇನ್ನು ಮುಂದೆ ಜಿಲ್ಲೆಯಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಲೋಪವಾದ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಪಟ್ಟ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳನ್ನೆ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತಿನ ಕ್ರಮ ಕೈಕೊಳ್ಳಲಾಗುವುದು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಿದೆ.
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…