ಬೆಂಗಳೂರು: 09.ಜನವರಿ.25. ಕರ್ನಾಟಕ ರಾಜ್ಯ ಸರ್ಕಾರ ಉನ್ನತ ಶಿಕ್ಷಣದಲ್ಲಿ ಮತ್ತೆ ಪ್ರಗತಿಪರ ಚಿಂತನೆ ನಡೆಸುತ್ತಿದೆ. ಉನ್ನತ ಶಿಕ್ಷಣ ಪ್ರವೇಶಾತಿಯಲ್ಲಿ ಕರ್ನಾಟಕ ರಾಷ್ಟ್ರಮಟ್ಟದಲ್ಲಿ 12ನೇ ಸ್ಥಾನದಲ್ಲಿದ್ದು, ಈ ಸ್ಥಾನ ಮತ್ತಷ್ಟು ಉತ್ತಮಪಡಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯದಲ್ಲಿ ಉನ್ನತ ಶಿಕ್ಷಣದಲ್ಲಿ ಒಟ್ಟು 24 ಲಕ್ಷ ವಿದ್ಯಾರ್ಥಿಗಳಿದ್ದು, 5 ಲಕ್ಷ ವಿದ್ಯಾರ್ಥಿಗಳು ಸರಕಾರಿ ಕಾಲೇಜುಗಳಲ್ಲಿ ಕಲಿಯುತ್ತಿದ್ದಾರೆಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗ ಮಾಹಿತಿ ನೀಡಿದರು.
ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣಕ್ಕೆ ಒಟ್ಟಾರೆ ಪ್ರವೇಶಾತಿ ರಾಜ್ಯದಲ್ಲಿ ಶೇ.36 ರಷ್ಟಿದೆ. ದೇಶದ ಶೇಕಡಾವಾರು 27.30 ರಷ್ಟಿದೆ.
ಉನ್ನತ ಶಿಕ್ಷಣ ಪ್ರವೇಶಾತಿಯಲ್ಲಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ 12ನೇ ಸ್ಥಾನದಲ್ಲಿದ್ದು, ಇನ್ನಷ್ಟು ಉತ್ತಮಪಡಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಬೇಕು.
ಕನ್ನಡ ವಿಶ್ವವಿದ್ಯಾಲಯ ಮತ್ತು ಜಾನಪದ ವಿಶ್ವವಿದ್ಯಾಲಯಗಳ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲು ಇಲಾಖಾ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.
ಉನ್ನತ ಶಿಕ್ಷಣಕ್ಕೆ ಪ್ರಸಕ್ತ ಆಯವ್ಯಯದಲ್ಲಿ 5862 ಕೋಟಿ ರೂ. ಒದಗಿಸಲಾಗಿದ್ದು, ಇದುವರೆಗೆ 3713.73 ಕೋಟಿ ರೂ. ವೆಚ್ಚ ಮಾಡಿ ಶೇ.72.87 ಪ್ರಗತಿ ಸಾಧಿಸಲಾಗಿದೆ.
ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಬಜೆಟ್‍ನಲ್ಲಿ 250 ಕೋಟಿ ರೂ. ಒದಗಿಸಲಾಗಿದ್ದು, ಇದನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…