ಬೆಂಗಳೂರು.07.ಜೂನ್.25:- ರಾಜ್ಯ ಸರ್ಕಾರದಿಂದ ಜಾತಿ ಜನಗಣತಿಯ ವರದಿಯ ಬಗ್ಗೆ ನಿರ್ಧಾರ ಕೈಗೊಳ್ಳುವಂತ ಸಲುವಾಗಿ ಜೂನ್.12ರಂದು ವಿಶೇಷ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಿದೆ ಎನ್ನಲಾಗುತ್ತಿದೆ. ಇದಲ್ಲದೇ ಜೂನ್.19ರಂದು ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ.
ರಾಜ್ಯ ಸರ್ಕಾರ ಜಾತಿ ಜನಗಣತಿಯ ವರದಿಯ ನಿರ್ಧಾರ ಬಗ್ಗೆ ಜೂನ್.12ರಂದು ವಿಶೇಷ ಸಚಿವ ಸಂಪುಟ ಸಭೆ.ಈ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ದಿನಾಂಕ 12-06-2025ರ ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ ವಿಶೇಷ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಕರೆಯಲಾಗಿದೆ ಎಂದಿದೆ.
ಈ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಕುರಿತಂತೆ ಚರ್ಚಿಸಲಾಗುತ್ತದೆ ಎಂಬುದಾಗಿ ತಿಳಿಸಿದೆ.
ಜೂನ್.19ಕ್ಕೆ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ನಿಗದಿ
ಇನ್ನೂ ದಿನಾಂಕ 19-06-2025ರ ಗುರುವಾರದಂದು ಮಧ್ಯಾಹ್ನ 12 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 13ನೇ ಸಭೆಯನ್ನು ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿರುವಂತ ಮಯೂರ ಸಭಾಂಗಣದಲ್ಲಿ ಕರೆಯಲಾಗಿದೆ ಎಂದು ಹೇಳಿದೆ.
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…
ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಮತ್ತು ವಿಧಾನಸಭಾ ಸ್ಪೀಕರ್ ಡಾ. ರಮಣ್ ಸಿಂಗ್ ಅವರು ಇಂದು ರಾಜಧಾನಿ ರಾಯ್‌ಪುರ…
ಗೂಂಡಾ.03.ಆಗಸ್ಟ್.25:- ಉತ್ತರ ಪ್ರದೇಶದ ಗೊಂಡಾದಲ್ಲಿ ಇಂದು ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.…
ರಾಯಚೂರು.03.ಆಗಸ್ಟ್.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಉಡಮಗಲ್ ಖಾನಾಪುರ…
ರಾಯಚೂರು.03.ಆಗಸ್ಟ್.25:- ಯೂರಿಯಾ ಗೊಬ್ಬರ ವಿತರಿಸಿದ ವಿವರ (ಮೆಟ್ರೀಕ್ ಟನ್ ಗಳಲ್ಲಿ) ಅನ್ನಪೂರ್ಣೇಶ್ವರಿ ಅಗ್ರೋ ಟ್ರೇಡಿಂಗ್ ಕ್ಯಾಂಪ್ ಬ್ಯಾಗ್ವಾಟ್ -9, ಬಂದೇನವಾಜ್…
ಕೊಪ್ಪಳ.03.ಆಗಸ್ಟ್.25: ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು ಮುಷ್ಕರವನ್ನು ಕೈಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಪ್ರಾಯಾಣಕ್ಕೆ ಯವುದೇ…