ಬೆಂಗಳೂರು.16.ಜೂನ್.25:- ರಾಜ್ಯ ಸರ್ಕಾರ ಗ್ಯಾರಂಟೀ ಯೋಜನೆ ಜಾರಿಗೆ ತಂದಿ ಸಂಧ್ಯಾ ಸುರಕ್ಷಾ ಮತ್ತು ವೃದ್ಧಾಪ್ಯ ವೇತನ ಯೋಜನೆಯಡಿ 23.19 ಲಕ್ಷ ಫಲಾನುಭವಿಗಳನ್ನು ಅರ್ನಹರೆಂದು ಘೋಷಿಸಿದ್ದು, ಇವರ ಪಿಂಚಣಿಯನ್ನು ರದ್ದುಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆ ಆದೇಶ ನೀಡಿದೆ.
ಬಿಜೆಪಿ ಶಾಸಕ ವಿ.ಸುನಿಲ್‌ಕುಮಾರ್ ಅವರು ಆದೇಶದ ಪ್ರತಿಯನ್ನು ‘ಎಕ್ಸ್’ನಲ್ಲಿ ಟ್ಯಾಗ್ ಮಾಡಿ ಸರ್ಕಾರದ ಈ ಕ್ರಮವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬಡವರ ಬಗ್ಗೆ ಕಾಳಜಿ, ಸಹಾನುಭೂತಿ ಇರಲಿ ಎಂದು ಜಿಲ್ಲಾಧಿಕಾರಿಗಳ ಸಭೆಯಲ್ಲಿ ಪ್ರವಚನ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಬಡವರ ಮೇಲೆ ಪ್ರಹಾರ ಮಾಡಲು ಹೊರಟಿದ್ದಾರೆ. ವಿವಿಧ ಸಾಮಾಜಿಕ ಭದ್ರತಾ ಯೋಜನೆಯ ಅಡಿ ವೃದ್ಧರು, ಅಸಹಾಯಕರು, ದುರ್ಬಲರಿಗೆ ನೀಡುತ್ತಿದ್ದ ಪಿಂಚಣಿ ಹಣದ ಮೇಲೆ 60 ಪರ್ಸೆಂಟ್ ಸರ್ಕಾರದ ಕಣ್ಣು ಬಿದ್ದಿದೆ ಎಂದು ಟೀಕಿಸಿದ್ದಾರೆ.
ರಾಜ್ಯದಲ್ಲಿ ಒಟ್ಟು 21.87 ಲಕ್ಷ ವೃದ್ಧಾಪ್ಯ ಹಾಗೂ31.33 ಲಕ್ಷ ಸಂಧ್ಯಾ ಸುರಕ್ಷಾ ಯೋಜನೆಯ ಫಲಾನುಭವಿಗಳಲ್ಲಿ ಅನರ್ಹರನ್ನು ಹುಡುಕುವುದಕ್ಕೆ ಸರ್ಕಾರ ಮುಂದಾಗದೆ. 9.04 ಲಕ್ಷ ವೃದ್ಧಾಪ್ಯ ವೇತನದಾರರು 14.15 ಲಕ್ಷ ಸಂಧ್ಯಾ ಸುರಕ್ಷಾ ಕಾರ್ಡ್‌ಗಳನ್ನು ರದ್ದುಗೊಳಿಸುವುದಕ್ಕೆ ಸಂಬಂಧಿಸಿದಂತೆ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ.
ತಮ್ಮದು ಆಲಿಸುವ ಸರ್ಕಾರ ಎಂದು ಜಾಹೀರಾತಿನಲ್ಲಿ ಫೋಸು ಕೊಡುವ ಕಾಂಗ್ರೆಸ್ ಸರ್ಕಾರ ಬಡವರ ಪಿಂಚಣಿ ಹಣದಲ್ಲಿ ಉಳಿತಾಯ ಮಾಡಲು ಹೊರಟಿದೆ. ಸರ್ಕಾರ ದಿವಾಳಿ ಅಂಚಿಗೆ ತಲುಪಿದೆ ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ ಎಂದು ಪ್ರಶ್ನಿಸಿದ್ದಾರೆ.
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…