ರಾಜ್ಯ ಸರ್ಕಾರ ಶಿಕ್ಷಕರ ಸಾಮಾನ್ಯ ವರ್ಗಾವಣೆ ಶಿಕ್ಷಣ ಇಲಾಖೆಯಿಂದ ಮಾಹಿತಿ

ಬೆಂಗಳೂರು.20.ಮೇ.25:- 2024-25ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ ಪೂರ್ವಭಾವಿ ಚಟುವಟಿಕೆಗಳ ಭಾಗವಾಗಿ ಡಿಸೆಂಬರ್ 2024ರ ಅಂತ್ಯಕ್ಕೆ ಶಿಕ್ಷಕರ ಅಂತಿಮ ವೇಯ್ಟೇಡ್ ಅಂಕಗಳನ್ನು ತಂತ್ರಾಂಶದಲ್ಲಿ ಪ್ರಕಟಿಸಲಾಗಿದೆ ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ.

ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿದ್ದು, 2024-25ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ, ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ / ಪ್ರೌಢಶಾಲಾ ಸಹಶಿಕ್ಷಕರ ಮತ್ತು ಮುಖ್ಯ ಶಿಕ್ಷಕರುಗಳ, ಡಿಸೆಂಬರ್ ತಿಂಗಳವರೆಗೂ ನವೀಕರಿಸಿದ ಶಿಕ್ಷಕರ ಸೇವಾ ವಿವರದ ಆಧಾರದ ಮೇಲೆ ಗಣನೆಗೆ ತೆಗೆದುಕೊಂಡು ಕರಡು ವೇಯ್‌ಡ್ ಅಂಕಗಳನ್ನು, ಇ.ಇ.ಡಿ.ಎಸ್.

ತಂತ್ರಾಂಶದಲ್ಲಿನ ಶಿಕ್ಷಕರ ಲಾಗಿನ್‌ನಲ್ಲಿ ಹಾಗೂ ಇಲಾಖಾ ವೆಬ್‌ಸೈಟ್ ನಲ್ಲಿ ಉಲ್ಲೇಖ 3 ರಲ್ಲಿ ಪ್ರಕಟಿಸಿ, ಸೇವಾ ಮಾಹಿತಿಯ ಇಂದೀಕರಣಕ್ಕಾಗಿ ದಿನಾಂಕ : 20-03-2025 ರವರೆಗೆ ಕಾಲಾವಕಾಶವನ್ನು ನೀಡಲಾಗಿತ್ತು ಎಂದು ತಿಳಿಸಿದೆ.

ಮುಂದುವರೆದು, ಉಲ್ಲೇಖ 4 ರಲ್ಲಿ ಇಇಡಿಎಸ್‌ನಲ್ಲಿ ಎಲ್ಲಾ ನೌಕರರ ಮಾಹಿತಿಯನ್ನು ಇಂದೀಕರಣ ಮಾಡಲು ದಿನಾಂಕ : 28-03-2025 ರವರೆಗೆ ಮತ್ತೊಮ್ಮೆ ಅವಕಾಶವನ್ನು ಕಲ್ಪಿಸಲಾಗಿರುತ್ತದೆ. ಅಲ್ಲದೇ ಉಲ್ಲೇಖ 5 ರಲ್ಲಿ ಇಇಡಿಎಸ್‌ನಲ್ಲಿ ಇಂದೀಕರಣಕ್ಕಾಗಿ ಈ ಹಿಂದೆ ಹಲವಾರು ಬಾರಿ ಕಾಲಾವಕಾಶವನ್ನು ಕಲ್ಪಿಸಲಾಗಿರುತ್ತದೆ ಎಂದು ಹೇಳಿದೆ.

ವರ್ಗಾವಣೆಗೆ ಸಂಬಂಧಿಸಿದ ವಿವಿಧ ಕಾರ್ಯಗಳ ನಿರ್ವಹಿಸಬೇಕಾಗಿರುವುದರಿಂದ ಮತ್ತು ಈಗಾಗಲೇ ಇಇಡಿಎಸ್‌ನಲ್ಲಿ ಮಾಹಿತಿ ಇಂದೀಕರಣಕ್ಕಾಗಿ ಸಾಕಷ್ಟು ಕಾಲಾವಕಾಶವನ್ನು ನೀಡಿರುವುದರಿಂದ ಇನ್ನೂ ಮುಂದೆ ಇಇಡಿಎಸ್‌ನಲ್ಲಿ ಇಂದೀಕರಣ / ತಿದ್ದುಪಡಿ / ಬದಲಾವಣೆಯನ್ನು ವರ್ಗಾವಣೆಗೆ ಪರಿಗಣಿಸಲಾಗುವುದಿಲ್ಲ ಎಂದಿದೆ.

ಅಂತಿಮವಾಗಿ ಪ್ರಕಟಿಸಲ್ಪಟ್ಟ ಸೇವಾ ಅಂಕಗಳನ್ನೇ ಪ್ರಸಕ್ತ ಸಾಲಿನಲ್ಲಿ ನಡೆಯುವ ವರ್ಗಾವಣೆಯ ಎಲ್ಲಾ ಪ್ರಕ್ರಿಯೆಗಾಗಿ ಪರಿಗಣಿಸಲಾಗುವುದೆಂದು ತಿಳಿಸಲಾಗಿದೆ ಹಾಗೂ ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ / ಪ್ರೌಢಶಾಲಾ ಸಹಶಿಕ್ಷಕರ ಮತ್ತು ಮುಖ್ಯ ಶಿಕ್ಷಕರುಗಳ ಅಂತಿಮ ಸೇವಾ ಅಂಕಗಳನ್ನು (weighted score) ಇ.ಇ.ಡಿ.ಎಸ್. ತಂತ್ರಾಂಶದಲ್ಲಿನ ಶಿಕ್ಷಕರ ಲಾಗಿನ್, ಕ್ಷೇತ್ರಶಿಕ್ಷಣಾಧಿಕಾರಿಗಳ / ಉಪನಿರ್ದೇಶಕರ ಲಾಗಿನ್ ಹಾಗೂ ಇಲಾಖಾ ವೆಬ್‌ಸೈಟ್‌ನಲ್ಲಿ ಪುಕಟಿಸಲಾಗಿದೆ ಎಂದು ತಿಳಿಸುತ್ತಾ, ಸದರಿ ಮಾಹಿತಿಯನ್ನು ಎಲ್ಲಾ ಶಿಕ್ಷಕರಿಗೆ ತಲುಪಿಸಲು ಕ್ರಮವಹಿಸುವಂತೆ ಇಲಾಖೆಯ ಎಲ್ಲಾ ಕಛೇರಿಯ ಮುಖ್ಯಸ್ಥರಿಗೆ ಕೋರಿದ್ದಾರೆ.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

2 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

3 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

3 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

4 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

4 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

5 hours ago