ಬೆಂಗಳೂರು.17.ಮೇ.25:- ರಾಜ್ಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ 2 ಸಾವಿರ ಬೋಧಕ ಸಿಬ್ಬಂದಿ ಭರ್ತಿಗೆ ಚಿಂತನೆ ನಡೆಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್‌ಗಳಿಗೆ ಆಧುನಿಕ ತಂತ್ರಜ್ಞಾನಕ್ಕೆ ತಕ್ಕಂತೆ ಮೂಲಸೌಕರ್ಯ ಕಲ್ಪಿಸುವುದು ಆದ್ಯತೆಯಾಗಿದೆ
ರಾಜ್ಯದಲ್ಲಿ 16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, 430 ಪ್ರಥಮ ದರ್ಜೆ, 300ಕ್ಕೂ ಹೆಚ್ಚಿನ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಬೋಧಕ ಸಿಬ್ಬಂದಿ ರೂಪಿಸುವುದೇ ದೊಡ್ಡ ಸವಾಲಾಗಿದೆ. ಇದನ್ನು ಸಮರ್ಥವಾಗಿ ನಿಭಾಯಿಸುವುದಕ್ಕಾಗಿ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ 6 ಸಾವಿರ ಬೋಧಕ ಸಿಬ್ಬಂದಿಯನ್ನು 3 ಹಂತದಲ್ಲಿ ಭರ್ತಿ ಮಾಡಲಾಗುತ್ತಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ 2 ಸಾವಿರ ಬೋಧಕ ಸಿಬ್ಬಂದಿ ಭರ್ತಿಗೆ ಚಿಂತನೆ ನಡೆಸಲಾಗಿದೆ ಎಂದು