ರಾಜ್ಯ 5ನೇ ಹಣಕಾಸು ಆಯೋಗದ ಸಭೆ


ಬೀದರ 19ಜನವರಿ.25:- ದಿನಾಂಕ:17-01-2025 ರಂದು ರಾಜ್ಯ 5ನೇ ಹಣಕಾಸು ಆಯೋಗದ ಸಭೆಯು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿಸಲಾಯಿತು. ಸಭೆಗೆ ಆಗಮಿಸಿದ ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷರು ಡಾ. ಸಿ. ನಾರಾಯಣಸ್ವಾಮಿ ಅವರು ಮಾತನಾಡಿ 5ನೇ ಹಣಕಾಸು ಆಯೋಗದ ಸ್ಥಿತಿಗತಿಯ ಬಗ್ಗೆ ವಿವರಿಸಿದರು.

ತದನಂತರ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಗೆ ಸಂಬoಧಿಸಿದoತೆ 15ನೇ ಹಣಕಾಸು, ಲಿಂಕ್ ಡಾಕುಮೆಂಟ್, ರಾಜ್ಯ ಹಣಕಾಸು ಆಯೋಗದ ಪ್ರಗತಿ ಪರಿಶೀಲಿಸಿದರು. ಅಲ್ಲದೇ ಸದರಿಯವರು ಬೀದರ ಜಿಲ್ಲೆಯಲ್ಲಿ ಗ್ರಾಮ ಪಂಚಾಯತಿಗಳ ಕರ ವಸೂಲಿಯು ಗಣನೀಯವಾಗಿ ಪ್ರಗತಿ ಸಾಧಿಸಿದೆ ಎಂದು ಸಭೆಯ ಗಮನಕ್ಕೆ ತಂದರು.

ಅದಲ್ಲದೇ ಗ್ರಾಮ ಪಂಚಾಯತಿಯ ಕರ ವಸೂಲಾತಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವೈಯಕ್ತಿಕ ಗಮನ ಹರಿಸಿ ಅಭಿಯಾನ ಜರುಗಿಸಿರುವುದನ್ನು ಅಧ್ಯಕ್ಷರು ಶ್ಲಾಘಿಸಿದರು.


ಆಯೋಗವು ನಗರ ಸ್ಥಳೀಯ ಸಂಸ್ಥೆಗಳ ಆರ್ಥಿಕ ಸ್ಥಿತಿಗತಿ ಬಗ್ಗೆ ಚರ್ಚಿಸಿದರು. ಯೋಜನಾ ನಿರ್ದೇಶಕರಾದ ಮೋತಿಲಾಲ ಅವರು ನಗರ ಸ್ಥಳೀಯ ಸಂಸ್ಥೆಗಳ ಆರ್ಥಿಕ ಸ್ಥಿತಿ ಹಾಗೂ ಯೋಜನೆ ಪ್ರಗತಿಯ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಅಧ್ಯಕ್ಷರು ಮಾತನಾಡಿ ಬೀದರ ಜಿಲ್ಲೆಯ ನೀರಿನ ಕರ ವಸೂಲಾತಿ ತುಂಬಾ ಕಡಿಮೆಯಾಗಿದೆಯೆಂದು ತಿಳಿಸಿದರು. ಈ ಕುರಿತು ಸಂಬAಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕೆಂದು ಸೂಚಿಸಿದರು.


ಸಭೆಯ ಅಧ್ಯಕ್ಷರಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಗಿರೀಶ ದಿಲೀಪ್ ಬದೋಲೆ ಅವರು ಸ್ವಾಗತಿಸಿ, ಮಾತನಾಡಿದರು. ಮುಖ್ಯ ಯೋಜನಾಧಿಕಾರಿಗಳು ಜಿಲ್ಲೆಯ ಸಾಮಾನ್ಯ ಮಾಹಿತಿ ಹಾಗೂ ಜಿಲ್ಲಾ ಪಂಚಾಯತನ ವಿವಿಧ ಯೋಜನೆಗಳ ಬಗ್ಗೆ ಸ್ವವಿವರವಾಗಿ ವಿವರಿಸಿದರು.
ಈ ಸಭೆಯಲ್ಲಿ ಮೊಹಮದ್ ಸನಾವುಲ್ಲಾ ಭಾ.ಆ.ಸೇ. (ನಿವೃತ್ತ) ಸದಸ್ಯರು 5ನೇ ರಾಜ್ಯ ಹಣಕಾಸು ಆಯೋಗದ, ಆರ್. ಎಸ್. ಪೋಂಡೆ ಸದಸ್ಯರು 5ನೇ ರಾಜ್ಯ ಹಣಕಾಸು ಆಯೋಗದ, ಎಂ. ಕೆ. ಕೆಂಪೇಗೌಡ ಸಮಾಲೋಚಕರು 5ನೇ ರಾಜ್ಯ ಹಣಕಾಸು ಆಯೋಗದ, ಸಿ. ಜೆ. ಸುಪ್ರಸನ್ನ ಸಮಾಲೋಚಕರು 5ನೇ ರಾಜ್ಯ ಹಣಕಾಸು ಆಯೋಗದ, ಕೆ. ಯಾಲಕ್ಕಿಗೌಡ ಅದ್ಯಕ್ಷರು ಆಪ್ತಕಾರ್ಯದರ್ಶಿ 5ನೇ ರಾಜ್ಯ ಹಣಕಾಸು ಆಯೋಗದವರು, ಉಪಕಾರ್ಯದರ್ಶಿಗಳು, ಯೋಜನಾ ನಿರ್ದೇಶಕರು, ತಾಲೂಕಿನ ಎಲ್ಲ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ ಬೀದರ ಹಾಗೂ ಇತರರು ಉಪಸ್ಥಿತರಿದ್ದರು.

prajaprabhat

Recent Posts

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

4 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

4 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

5 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

5 hours ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

6 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

15 hours ago