ರಾಯಚೂರು.13.ಆಗಸ್ಟ.25:- ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿರವಾರ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮತ್ತು ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅರ್ಹ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳು ಮತ್ತು ಅರ್ಹತೆ:-
ಸಂಸ್ಥೆಯಲ್ಲಿ ಭೌತಶಾಸ್ತ್ರ ಉಪನ್ಯಾಸಕರ 01 ಹುದ್ದೆಗೆ ಎಂ.ಎಸ್ಸಿ ಭೌತಶಾಸ್ತ್ರ ಹಾಗೂ ಬಿ.ಎಡ್., ರಸಾಯನಶಾಸ್ತ್ರ ಉಪನ್ಯಾಸಕರ 01 ಹುದ್ದೆಗೆ ಎಂ.ಎಸ್ಸಿ ರಸಾಯನಶಾಸ್ತ್ರ ಹಾಗೂ ಬಿ.ಎಡ್., ಗಣಿತ ಉಪನ್ಯಾಸಕರ 01 ಹುದ್ದೆಗೆ ಎಂ.ಎಸ್ಸಿ ಗಣಿತ ಹಾಗೂ ಬಿ.ಎಡ್., ಜೀವಶಾಸ್ತ್ರ ಉಪನ್ಯಾಸಕರ 01 ಹುದ್ದೆಗೆ ಎಂ.ಎಸ್ಸಿ ಸಸ್ಯಶಾಸ್ತ್ರ/ಪ್ರಾಣಿಶಾಸ್ತ್ರ ಹಾಗೂ ಬಿ.ಎಡ್., ಕನ್ನಡ ಭಾಷಾ ಉಪನ್ಯಾಸಕರ 01 ಹುದ್ದೆಗೆ ಎಂ.ಎ ಕನ್ನಡ ಹಾಗೂ ಬಿ.ಎಡ್, ಆಂಗ್ಲ ಭಾಷಾ ಉಪನ್ಯಾಸಕರ 01 ಹುದ್ದೆಗೆ ಎಂ.ಎ ಇಂಗ್ಲಿಷ್ ಹಾಗೂ ಬಿ.ಎಡ್ ಪದವಿ ಪಡೆದಿರಬೇಕು.
ಕೊನೆಯ ದಿನಾಂಕ:
ಅರ್ಜಿ ಸಲ್ಲಿಸಲು ಇಚ್ಛಸುವ ಅಭ್ಯರ್ಥಿಗಳು ಆಗಸ್ಟ್ 18ರ ಸಂಜೆ 4.30 ರೊಳಗೆ ಪ್ರಾಂಶುಪಾಲರು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಅಥವಾ ವಸತಿ ಕಾಲೇಜು ಸಿರವಾರ (ಪ.ಪಂ-496) ಇವರಿಗೆ ಎಲ್ಲಾ ದೃಢೀಕೃತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಾತ್ಯಕ್ಷಿಕೆ ತರಗತಿ (ಡೆಮೋಕ್ಲಾಸ್)ಗೆ ಹಾಜರಾಗಬೇಕು.
ಅಲ್ಲದೆ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ :
ಪ್ರಾಂಶುಪಾಲರು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಅಥವಾ ವಸತಿ ಕಾಲೇಜು ಸಿರವಾರ (ಪ.ಪಂ-496) ದೂರವಾಣಿ ಸಂಖ್ಯೆ: 9901866601ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…
ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…
ಬಂಧುಗಳೇ, ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…
ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…
ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…