ಬೀದರ.13.ಮೇ.12:- ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ (ಎನ್.ಹೆಚ್.ಎಂ) 2025-26 ನೇ ಸಾಲಿಗೆ ಎಂ.ಬಿ.ಬಿ.ಎಸ್ ವೈದ್ಯರು ಹಾಗೂ ತಜ್ಞ ವೈದ್ಯರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿಗಳನ್ನು ಪ್ರತಿ ಸೋಮವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ವಿತರಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.