ಕರ್ನಾಟಕ ರಾಜ್ಯ ಗ್ರಾಮೀಣ ಸಂಸ್ಥೆ ಜೀವನೋಪಾಯ ಅಭಿಯಾನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸಲು ಜಿಲ್ಲಾ ಮ್ಯಾನೇಜರ್, ತಾಲೂಕು ಪ್ರೊಗ್ರಾಂ ಮ್ಯಾನೇಜರ್, ಬ್ಲಾಕ್ ಮ್ಯಾನೇಜರ್ ಸೇರಿದಂತೆ ನಾನಾ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ.
ಈ ಹುದ್ದೆಗಳಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮೇ 30 ಆಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಹುದ್ದೆ ವಿವರ:
ಒಟ್ಟು 13 ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಯಲಿದ್ದು, ಜಿಲ್ಲಾ ಮ್ಯಾನೇಜರ್, ತಾಲೂಕು ಪ್ರೊಗ್ರಾಂ ಮ್ಯಾನೇಜರ್, ಬ್ಲಾಕ್ ಮ್ಯಾನೇಜರ್, ಕ್ಲಸ್ಟರ್ ಸೂಪರ್ವೈಸರ್- ಸ್ಕಿಲ್, ಕ್ಲಸ್ಟರ್ ಸೂಪರ್ವೈಸರ್, ತಾಲೂಕ್ ಪ್ರೋಗ್ರಾಂ ಮ್ಯಾನೇಜರ್ – ಎಸ್ವಿಇಪಿ, ಆಫೀಸ್ ಅಸಿಸ್ಟಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಿದೆ.
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ತಕ್ಕಂತೆ ಎಂಬಿಎ, ಎಂಎಸ್ಡಬ್ಲ್ಯೂ, ಸ್ನಾತಕೋತ್ತರ ಪದವಿ, ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ ವಯೋಮಿತಿ 45 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಕೆ:
ಕರ್ನಾಟಕ ಸರ್ಕಾರದ ಸಂಜೀವಿನಿ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನದ ಅಧಿಕೃತ ಜಾಲತಾಣದ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಈ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಮೇ 30 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಮಾಹಿತಿ ಪಡೆಯಲು Website Link :
http://ksrlps.karnataka.gov.in
ಭೇಟಿ ನೀಡಬಹುದಾಗಿದೆ.
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…
ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…