ಬೀದರ20.ಜೂನ್.25:- 2025-26 ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಘಟಕಗಳಿಗೆ ಸೌಲಭ್ಯ ಪಡೆಯಲು ಜಿಲ್ಲೆಯ ಆಸಕ್ತ ರೈತ ಸಮುದಾಯದಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ (ಜಿಲ್ಲಾ ಪಂಚಾಯತ) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಸಚೀನ್ ಕೌಠ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಹಾಯಧನ ನೀಡುವ ಯೋಜನೆಗಳ ವಿವರ: ಹಣ್ಣಿನ ತೋಟಗಳ ಸ್ಥಾಪನೆ, ಹೈಬ್ರಿಡ್ ತರಕಾರಿ ಪ್ರದೇಶ ವಿಸ್ತರಣೆಗೆ, ಹೂವಿನ ತೋಟಗಳ ಸ್ಥಾಪನೆಗೆ, ಸುಗಂಧ ದ್ರವ್ಯ ತೋಟಗಳ ಸ್ಥಾಪನೆಗೆ, ಹಣ್ಣಿನ ತೋಟಗಳ ಪುನಶ್ಚೇತನಕ್ಕೆ, ನೀರು ಸಂಗ್ರಹಣ ಘಟಕಕ್ಕೆ, ಸಂರಕ್ಷಿತ ಬೇಸಾಯ ಕಾರ್ಯಕ್ರಮಕ್ಕೆ, ಯಾಂತ್ರೀಕರಣಕ್ಕೆ, ಕೊಯ್ಲೋತ್ತರ ನಿರ್ವಹಣೆ ಘಟಕಗಳಿಗೆ, ಮಾರುಕಟ್ಟೆ: (ತಳ್ಳುವ ಗಾಡಿ) ಘಟಕಕ್ಕೆ ಸಹಾಯ ಧನ ಹಾಗೂ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಕೇಂದ್ರ ಪುರಸ್ಕøತ ರಾಷ್ಟ್ರೀಯ ಖಾದ್ಯ ತೈಲ ಅಭಿವಯಾನ ತಾಳೆ ಬೆಳೆ ಯೋಜನೆ, ತಾಳೆ ಸಸಿಗಳಿಗೆ ಸಹಾಯಧನ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಕೃಷಿ ಯಾಂತ್ರಿಕರಣ ಉಪ ಅಭಿಯಾನ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಸಹಾಯಧನ ನೀಡಲಾಗುತ್ತದೆ.
ಅರ್ಹತೆಗಳು: ಫಲಾನುಭವಿಗಳು ರೈತರಾಗಿದ್ದು, ಜಮೀನು ಅವರ ಹೆಸರಿನಲ್ಲಿ ಇರಬೇಕು ಜಂಟಿಖಾತೆಯಾಗಿದಲ್ಲಿ ಇತರೆ ಖಾತೆದಾರರ ಒಪ್ಪಿಗೆ ಪತ್ರವನ್ನು ಪಡೆದಿರಬೇಕು. ತಂದೆ ಅಥವಾ ತಾಯಿಯ ಹೆಸರಿನಲ್ಲಿ ಜಮೀನಿದ್ದು ಅವರು ಮರಣ ಹೊಂದಿದಲ್ಲಿ ಮಾತ್ರ ಗ್ರಾಮಲೆಕ್ಕಿಗರಿಂದ ದೃಢೀಕರಿಸಿದ, ಕುಟುಂಬದ ಇತರೆ ಸದಸ್ಯರಿಂದ ಒಪ್ಪಿಗೆ ಪಡೆದು ತಮ್ಮ ಹೆಸರಿನಲ್ಲಿ ಅರ್ಜಿಯನ್ನು ಸಲ್ಲಿಸುವುದು. ನೀರಿನ ಮೂಲ ಹೊಂದಿರಬೇಕು. ತಾಲ್ಲೂಕು ಕಂದಾಯ ಇಲಾಖೆಯಿಂದ ನೀಡಲಾಗುವ ಇತ್ತೀಚಿನ ಗಣಕಿಕೃತ ಪಹಣಿ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.
ಆಸಕ್ತ ರೈತಬಾಂಧವರು ಅರ್ಜಿಗಳನ್ನು ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ. ಪಂ) ಕಚೇರಿಗೆ ದಿನಾಂಕ: 30-06-2025 ಸಾಯಂಕಾಲ 5.30 ಗಂಟೆಯವರೆಗೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ ಹಾಗೂ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂರ್ಪಕಿಸುವಂತೆ ಅವರು ತಿಳಿಸಿದ್ದಾರೆ.
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…