ಬೀದರ.09.ಆಗಸ್ಟ್.25:- ಗೌರವಾನ್ವಿತ ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ನಿರ್ದೇಶನದಂತೆ ದಿನಾಂಕ: 13-09-2025 ರಂದು ರಾಷ್ಟ್ರೀಯ ಲೋಕ ಆದಾಲತನ್ನು ರಾಷ್ಟಾçದ್ಯಾಂತ ಹಮ್ಮಿಕೊಳ್ಳಲು ಸೂಚಿಸಿರುತ್ತಾರೆ.
ಪ್ರಯುಕ್ತ ರಾಷ್ಟ್ರೀಯ ಲೋಕ ಆದಾಲತನಲ್ಲಿ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಸಹಕರಿಸುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೀದರನ ಸಭಾಂಗಣದಲ್ಲಿ ವಿವಿಧ ಇಲಾಖೆಯ ಮುಖ್ಯಸ್ಥರೊಂದಿಗೆ ದಿನಾಂಕ: 07-08-2025, 11-08-2025, 12-08-2025, 13-08-2025, 14-08-2025, 18-08-2025, 19-08-2025 ಹಾಗೂ 20-08-2025 ರ ದಿನಾಂಕಗಳoದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ ಇವರ ಘನ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿ ರಾಷ್ಟ್ರೀಯ ಲೋಕ ಅದಾಲತನ ಪೂರ್ವಭಾವಿ ಸಭೆಯನ್ನು ಕರೆಯಲಾಗಿರುತ್ತದೆ.
ಸದರಿ ದಿನಾಂಕಗಳoದು ನಿಗಧಿತ ಸಮಯಕ್ಕೆ ಸಂಬoಧಿಸಿದ ಇಲಾಖೆಯ ಮುಖ್ಯಸ್ಥರು ಸಭೆಗೆ ತಪ್ಪದೇ ಭಾಗವಹಿಸಿ ಸಲಹೆ ಸೂಚನೆ ನೀಡಿ ಸಹಕರಿಸಲು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನುನು ಸೇವೆಗಳ ಪ್ರಾಧಿಕಾರ ಬೀದರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.