ಚಿತ್ರದುರ್ಗ.17.ಜುಲೈ.25: ರಾಷ್ಟ್ರ ಪ್ರಶಸ್ತಿ-2025″ ನೀಡುವ ಕುರಿತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ವತಿಯಿಂದ ಪ್ರತಿ ವರ್ಷದ ಡಿಸೆಂಬರ್ 03ರಂದು ಆಚರಿಸಲಾಗುವ ರಾಷ್ಟ್ರ ಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆ ಸಮಾರಂಭದಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ನೀಡುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದ್ದು,
ಅರ್ಜಿ ಸಲ್ಲಿಕೆ ಅವಧಿಯನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿದೆ.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ಜಾಲತಾಣ ಮತ್ತು ರಾಷ್ಟ್ರೀಯ http://www.depwd.gov.in ಪುರಸ್ಕಾರ ಪೋರ್ಟಲ್ http://www.awards.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ವಿಕಲಚೇತನರ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ವ್ಯಕ್ತಿಗಳು ಮತ್ತು ಸಂಸ್ಥೆಗಳು “ರಾಷ್ಟ್ರ ಪ್ರಶಸ್ತಿ-2025″ಕ್ಕೆ ಅರ್ಜಿಯನ್ನು ಆನ್‍ಲೈನ್ ಮೂಲಕ ಎಲ್ಲಾ ಪೂರಕ ದಾಖಲಾತಿಗಳೊಂದಿಗೆ ಸಲ್ಲಿಸಿ, ಅರ್ಜಿ ಸಲ್ಲಿಸಿದ ದಾಖಲಾತಿಗಳ 02 ಪ್ರತಿಗಳನ್ನು ಚಿತ್ರದುರ್ಗ ನಗರದ ಒನಕೆ ಓಬವ್ವ ಸ್ಟೇಡಿಯಂ ರಸ್ತೆ, ಜಿಲ್ಲಾ ಬಾಲಭವನ ಆವರಣ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ನೀಡಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-235284 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…
ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…