02/08/2025 4:54 PM

Translate Language

Home » ಲೈವ್ ನ್ಯೂಸ್ » ರೇಷ್ಮೆ ಇಲಾಖೆ: ವಿವಿಧ ಕಾರ್ಯಕ್ರಮಗಳಡಿ ಸೌಲಭ್ಯ ಪಡೆಯಲು ಅರ್ಜಿ ಕರೆಯಲಾಗಿದೆ

ರೇಷ್ಮೆ ಇಲಾಖೆ: ವಿವಿಧ ಕಾರ್ಯಕ್ರಮಗಳಡಿ ಸೌಲಭ್ಯ ಪಡೆಯಲು ಅರ್ಜಿ ಕರೆಯಲಾಗಿದೆ

Facebook
X
WhatsApp
Telegram

ಕೊಪ್ಪಳ.24.ಜುಲೈ 25: ರೇಷ್ಮೆ ಕೃಷಿಯು ಗುಡಿ ಮತ್ತು ಕೈಗಾರಿಕೆಯನ್ನು ಹೊಂದಿದ್ದು, ಗ್ರಾಮೀಣ ಜನರ ಆರ್ಥಿಕ ಸ್ಥಿತಿ ಸುಧಾರಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ. ಕೊಪ್ಪಳ ಜಿಲ್ಲೆಯಲ್ಲಿ ರೇಷ್ಮೆ ಕೃಷಿಯು ಅಭಿವೃದ್ಧಿ ಪ್ರಗತಿಯ ಪಥದಲ್ಲಿ ಸಾಗುತ್ತಿದೆ. ರೇಷ್ಮೆ ಇಲಾಖೆಯ ಸಿಬ್ಬಂದಿಯವರು ಪ್ರತಿಯೊಂದು ಹಳ್ಳಿಗೆ ಭೇಟಿ ನೀಡಿ ನೀರಾವರಿ ರೈತರನ್ನು ಸಂಪರ್ಕಿಸಿ ರೇಷ್ಮೆ ಕೃಷಿಯಿಂದಾಗುವ ಅನುಕೂಲಗಳ ಕುರಿತು ಹಾಗೂ ಸಿಗುವ ಸೌಲಭ್ಯಗಳ ಕುರಿತು ಮನವರಿಕೆ ಮಾಡಿ ರೇಷ್ಮೆ ಕೃಷಿಯ ವಿಸ್ತರಣೆಗೆ ಪ್ರಯತ್ನಿಸುತ್ತಿದ್ದಾರೆ.

ರೇಷ್ಮೆ ಇಲಾಖೆಯಲ್ಲಿ ಈ ಕೆಳಕಂಡ ಸರಕಾರಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ರೈತರು ಈ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

ಜಿಲ್ಲಾ ಪಂಚಾಯತ್ ಕಾರ್ಯಕ್ರಮ: ಹಿಪ್ಪುನೇರಳೆ ನಾಟಿ ಮಾಡುವ ರೇಷ್ಮೆ ಕೃಷಿಕರಿಗೆ ಸಹಾಯಧನ ನೀಡುವ ಕಾರ್ಯಕ್ರಮದಡಿ ಯಶಸ್ವಿ ಗೂಡು ಉತ್ಪಾದನೆಗೆ ಹಿಪ್ಪುನೇರಳೆ ಗುಣಮಟ್ಟ ಮುಖ್ಯವಾದ ಅಂಶ. ಈ ನಿಟ್ಟಿನಲ್ಲಿ ಹಿಪ್ಪುನೇರಳೆ ತೋಟ ನಿರ್ವಹಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ನೀರಾವರಿ ಸೌಲಭ್ಯವಿರುವ ರೈತರನ್ನು ಅಥವಾ ಕೃಷಿಕರನ್ನು ಆಯ್ಕೆ ಮಾಡಿ ಹಿಪ್ಪುನೇರಳೆ ನಾಟಿ ಮಾಡುವ ತೋಟ ವಿಸ್ತರಿಸುವ, ಸಾಂಪ್ರದಾಯಿಕ ಹಿಪ್ಪುನೇರಳೆ ತಳಿ ತೆಗೆದು ಹೆಚ್ಚಿನ ಇಳುವರಿ ನೀಡುವ ಹೊಸ ತಳಿಗೆ ಬದಲಾಯಿಸುವ ರೇಷ್ಮೆ ಕೃಷಿಕರಿಗೆ ಸಹಾಯಧನ ಒದಗಿಸಲಾಗುವುದು. ಒಬ್ಬ ಫಲಾನುಭವಿ ಗರಿಷ್ಠ 2 ಹೆಕ್ಟೆರ್‌ವರೆಗೆ ಸೌಲಭ್ಯ ಪಡೆಯಲು ಅವಕಾಶವಿರುತ್ತದೆ. ಈ ಕಾರ್ಯಕ್ರಮದಡಿಯಲ್ಲಿ 1 ಎಕರೆ ಹೊಸ ಹಿಪ್ಪುನೇರಳೆ ನಾಟಿಗಾಗಿ ಸಾಮಾನ್ಯ ವರ್ಗದ ರೇಷ್ಮೆ ಬೆಳೆಗಾರರಿಗೆ ರೂ.45,000/- ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ರೇಷ್ಮೆ ಬೆಳೆಗಾರರಿಗೆ ರೂ.54,000/-  ಗಳ ಪ್ರೋತ್ಸಾಹ ಧನವನ್ನು ನೀಡಲಾಗುವುದು. 1 ಎಕರೆ ಹಿಪ್ಪುನೇರಳೆ ನರ್ಸರಿಗಾಗಿ ಸಾಮಾನ್ಯ ವರ್ಗದ ರೇಷ್ಮೆ ಬೆಳೆಗಾರರಿಗೆ ರೂ.1,12,500/- ಗಳನ್ನು ಹಾಗೂ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ರೇಷ್ಮೆ ಬೆಳೆಗಾರರಿಗೆ ರೂ.1,35,000/-ಗಳ ಪ್ರೋತ್ಸಾಹ ಧನವನ್ನು ನೀಡಲಾಗುವುದು.
ರೇಷ್ಮೆ ಹುಳು ಸೋಂಕು ನಿವಾರಕ ಔಷಧ: ಹಾಲಿ ರೇಷ್ಮೆ ಬೆಳೆಗಾರರಿಗೆ ಜಿಲ್ಲಾ ಪಂಚಾಯತ್ ವತಿಯಿಂದ ಸೋಂಕು ನಿವಾರಕ, ಹಾಸಿಗೆ ಸೋಂಕು ನಿವಾರಕ ಹಾಗೂ ಸಸ್ಯ ಸಂವರ್ಧಕಗಳನ್ನು ಉಚಿತವಾಗಿ ನೀಡಲಾಗುವುದು. ಅರ್ಹ ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.


ಮಹಾತ್ಮ ಗಾಂಧಿ ರಾಷ್ಟಿçಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ: ರೇಷ್ಮೆ ಇಲಾಖೆಯಡಿಯಲ್ಲಿ ಹೊಸದಾಗಿ ಹಿಪ್ಪುನೇರಳೆ ನಾಟಿ, ಹಿಪ್ಪುನೇರಳೆ ನರ್ಸರಿ, ಹಿಪ್ಪುನೇರಳೆ ಮರಗಡ್ಡೆ ಕಾರ್ಯಕ್ರಮಗಳನ್ನು ಮಹಾತ್ಮ ಗಾಂಧಿ ರಾಷ್ಟಿçಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಆಸಕ್ತ, ನೀರಾವರಿ ಹೊಂದಿರುವ ರೈತರು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು.


ತಾಲ್ಲೂಕು ಪಂಚಾಯತ್ ಕಾರ್ಯಕ್ರಮ: ತಾಲೂಕು ಪಂಚಾಯತ್ ಉತ್ಪಾದನೆ ಅಥವಾ ಉತ್ಪಾದಕತೆ ಆಧಾರಿತ ಕಾರ್ಯಕ್ರಮ ಯೋಜನೆಯಡಿ ಮಾರ್ಗಸೂಚಿಗಳನ್ವಯ ಜಿಲ್ಲೆಯ ರೈತರಿಗೆ ರೇಷ್ಮೆ ಕೃಷಿ ಕೈಗೊಳ್ಳಲು ರೇಷ್ಮೆ ಕೃಷಿ ವಿಚಾರ ಸಂಕಿರಣಗಳನ್ನು ಹಾಗೂ ವಸ್ತು ಪ್ರದರ್ಶನಗಳನ್ನು ಪ್ರಚಾರ ಸಾಹಿತ್ಯಕ್ಕಾಗಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು. ಅರ್ಹ ಫಲಾನುಭವಿಗಳು ಇದರ ಪ್ರಯೋಜನ ಪಡೆಯಬಹುದು ಎಂದು ಕೊಪ್ಪಳ ರೇಷ್ಮೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!