ಕಲಬುರಗಿ .23.ಏಪ್ರಿಲ್.25: ಕೇಂದ್ರದ ಲೋಕ ಸೇವಾ ಆಯೋಗದ UPSC ಪರೀಕ್ಷೆಯಲ್ಲಿ ಕಲಬುರಗಿ ಜಿಲ್ಲೆಯ ರೈತನ ಮಗ ಉತ್ತಮ ರ್ಯಾಂಕ್ ಪಡೆಯುವ ಮೂಲಕ ಉತ್ತೀರ್ಣರಾಗಿದ್ದಾರೆ.
ಅದರಲ್ಲೂ ಕಲ್ಯಾಣ ಕರ್ನಾಟಕದಿಂದ ಯುಪಿಎಸ್ಸಿ ಪರೀಕ್ಷೆ ಪಾಸಾದ ಏಕೈಕ ಅಭ್ಯರ್ಥಿಯಾಗಿದ್ದಾರೆ.
ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಡೋರ ಜಂಬಗಾ ಗ್ರಾಮದ ರೈತ ಸಂಗಣ್ಣಗೌಡ ಪಾಟೀಲ್ ಪುತ್ರ ಮೋಹನ ಪಾಟೀಲ್ ಯುಪಿಎಸ್ ಸಿ ರಾಷ್ಟ್ರ ಮಟ್ಟದ ಪರೀಕ್ಷೆಯಲ್ಲಿ ಆಯ್ಕೆಯಾಗದ್ದಾರೆ.
ಮೋಹನ ಪಾಟೀಲ್ ಯುಪಿಎಸ್ ಸಿ ಪರೀಕ್ಷೆಯಲ್ಲಿ 984 ರ್ಯಾಂಕ್ ಪಡೆದು ಗಮನಾರ್ಹ ಸಾಧನೆ ತೋರಿದ್ದಾರೆ. ಮಗ ಯುಪಿಎಸ್ಸಿ ಪರೀಕ್ಷೆ ಪಾಸಾಗಿದ್ದಕ್ಕೆ ರೈತ ಸಂಗಣ್ಣಗೌಡ ಪಾಟೀಲ್ ಖುಷಿಗೊಂಡಿದ್ದು, ಮಗ ರೈತರ ಹಾಗೂ ಬಡವರ ಸೇವೆ ಮೂಲಕ ಹೆಸರು ತರಲಿ ಎಂದು ಆಶೀಸಿದ್ದಾರೆ.
ಮೋಹನ್ ಪಾಟೀಲ್ ಯುಪಿಎಸ್ ಸಿ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದಿದ್ದಕ್ಕೆ ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹರ್ಷ ವ್ಯಕ್ತಪಡಿಸಿ, ವಿದ್ಯಾರ್ಥಿ ಗೆ ಅಭಿನಂದನೆ ಸಲ್ಲಿಸಿದ್ದಾರೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…