01.ಜಿ.25.ಬೀದರ :- 2024-25ನೇ ಸಾಲಿಗೆ ಭಾರತ ಸರ್ಕಾರವು ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬೀದರ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದಿರುವ FAQ ಗುಣಮಟ್ಟದ ತೊಗರಿ ಕಾಳನ್ನು ಪ್ರತಿ ಕ್ವಿಂಟಾಲ್‍ಗೆ 7550 ರೂ. ದರದಲ್ಲಿ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ರೈತರಿಂದ ಖರೀದಿಸಲು ಕರ್ನಾಟಕ ಸರ್ಕಾರವು ದಿನಾಂಕ: 02-01-2025 ರಂದು ಆದೇಶಿಸಿದೆ.
ಸದರಿ ಆದೇಶದನ್ವಯ ಮಾನ್ಯ ಜಿಲ್ಲಾಧಿಕಾರಿಗಳು ಬೀದರ ಹಾಗೂ ಅಧ್ಯಕ್ಷರು ಜಿಲ್ಲಾ ಟಾಸ್ಕ್‍ಫೋರ್ಸ್ ಸಮಿತಿ ಬೀದರ ಅವರ ಅಧ್ಯಕ್ಷತೆಯಲ್ಲಿ ದಿನಾಂಕ: 03-01-2025 ರಂದು ಜರುಗಿದ ಸಭೆಯ ನಡುವಳಿಗಳ ಪ್ರಕಾರ ಬೀದರ ಜಿಲ್ಲೆಯಲ್ಲಿ ಒಟ್ಟು 70 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಬೀದರ ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಖರೀದಿ ಕೇಂದ್ರಗಳು ಲಾಗಿನ್ ಕ್ರಡೆನ್ಷಿಯಲ್ಸ್‍ಗಳನ್ನು ಪಡೆದು ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದ ಮೇಲೆ ನೋಂದಣಿ ಮಾಡಿಕೊಳ್ಳಲು ಇಚ್ಛಿಸುವ ರೈತರು ಸಮೀಪದ ಖರೀದಿ ಕೇಂದ್ರಗಳಿಗೆ ನೋಂದಣಿ ಮಾಡಿಸಿಕೊಳ್ಳಲು ಸೂಚಿಸಿದೆ.
ಖರೀದಿ ಪ್ರಕ್ರಿಯೆಯಲ್ಲಿ ರೈತರು ಪ್ರತಿ ಎಕರೆಗೆ 4 ಕ್ವಿಂಟಾಲ್‍ನಂತೆ ಗರಿಷ್ಠ 40 ಕ್ವಿಂಟಾಲ್‍ವರೆಗೆ FAQ ಗುಣಮಟ್ಟದ ತೊಗರಿ ಕಾಳನ್ನು ಮಾರಾಟ ಮಾಡಬಹುದಾಗಿದೆ. ಆದ್ದರಿಂದ ರೈತರು ಬೆಂಬಲ ಬೆಲೆ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಡಳಿತವು ಕೋರಿದೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…