ಬೀದರ್.04.ಮಾರ್ಚ.25:- ಬೀದರ ಲೋಕಸಭಾ ಸಂಸದರಾದ ಶ್ರೀ ಸಾಗರ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಇಂದು ಬೀದರ ಜಿಲ್ಲಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಜಿಲ್ಲಾ ಲೀಡ್ ಬ್ಯಾಂಕ್ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಸಲಹಾ ಸಮಿತಿ (DCC) ಹಾಗೂ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ (DLRC) ಸಭೆ ನಡೆಯಿತು.
ಬ್ಯಾಂಕ್ ಅಧಿಕಾರಿಗಳೊಂದಿಗೆ ನಡೆದ ಈ ಸಭೆಯಲ್ಲಿ, ಪಿಎಂ ವಿಶ್ವಕರ್ಮ, ಮುದ್ರಾ, ಪಿಎಂಇಜಿಪಿ ಮತ್ತು ಪಿಎಂ ಸೋಶಿಯಲ್ ಸೆಕ್ಯೂರಿಟಿ ಯೋಜನೆಗಳು ಸೇರಿದಂತೆ ಕೃಷಿ ಸಾಲ, ಶಿಕ್ಷಣ ಸಾಲಗಳ ಅನುಷ್ಠಾನ ಮತ್ತು ಪ್ರಗತಿಯ ಕುರಿತು ಪರಿಶೀಲನೆ ನಡೆಯಿತು.
ಬ್ಯಾಂಕುಗಳು ರೈತರಿಗೆ ಕೃಷಿ ಸಾಲ ನಿರಾಕರಿಸದಂತೆ ಹಾಗೂ ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಲಗಳನ್ನು ಆರ್‌ಬಿಐ ನಿಯಮದಂತೆ ಯಾವುದೇ ಭದ್ರತೆ (Security) ಪಡೆಯದೇ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದ ಸಾಗರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚಿಸಿದರು. ರೈತರು ಮತ್ತು ವಿದ್ಯಾರ್ಥಿಗಳು ಸಾಲ ಪಡೆಯುವಲ್ಲಿ ಯಾವುದೇ ಅಡೆತಡೆಯಾಗಬಾರದು ಎಂಬುದಾಗಿ ಅವರು ಕಟ್ಟುನಿಟ್ಟಾಗಿ ಆದೇಶಿಸಿದರು.
ಜನತೆಗೆ ಸುಲಭ ಬ್ಯಾಂಕಿಂಗ್ ಸೇವೆ ಒದಗಿಸುವ ನಿಟ್ಟಿನಲ್ಲಿ ಭಾಲ್ಕಿ ತಾಲೂಕಿನ ಮೆಹಕರ್ ಮತ್ತು ಔರಾದ್ (B)ನಲ್ಲಿ ನೂತನ ಎಸ್‌ಬಿಐ ಶಾಖೆ ತೆರೆಯುವ ಸಾಧ್ಯತೆಗಳ ಬಗ್ಗೆ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಬ್ಯಾಂಕ್ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…
ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…
ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…
ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…
ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…
ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…