ರೈತಾಪಿ ವರ್ಗದ ಮುಟೇಶನ್ ಸಮಸ್ಯೆ ಸರಳೀಕೃತಗೊಳಿಸಲು ಇ-ಪೌತಿ ಆಂದೋಲನ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ.08.ಜುಲೈ.25:-: ರೈತಾಪಿ ವರ್ಗದವರ ಸಮಸ್ಯೆಗಳನ್ನು ಪರಿಹರಿಸಿ ಪೌತಿ/ವಾರಸಾ ಸ್ವರೂಪದ ಮುಟೇಶನ್ ಪ್ರಕ್ರಿಯೆಯನ್ನು ಸರಳೀಕೃತಗೊಳಿಸಲು ಕಂದಾಯ ಇಲಾಖೆಯಿಂದ ಇ-ಪೌತಿ/ವಾರಸಾ ಖಾತೆ ಆಂದೋಲನವನ್ನು ನಡೆಸಲಾಗುತ್ತಿದ್ದು, ಜಿಲ್ಲೆಯ ರೈತರಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ತಿಳಿಸಿದರು.

ಸೋಮವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ  ಇ-ಪೌತಿ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೃಷಿ ಜಮೀನಿನ ಮಾಲೀಕರು ಮರಣ ಹೊಂದಿದ ನಂತರ ಪೌತಿ/ವಾರಸಾ ರೀತ್ಯಾ ಮಾಲೀಕತ್ವವು ಮೃತರ ಉತ್ತರಾಧಿಕಾರಿಗಳ ಹೆಸರಿಗೆ ಬದಲಾವಣೆಯಾಗದಿದ್ದಲ್ಲಿ ಅಂತಹ ಜಮೀನುಗಳ ಸ್ವಾಧೀನವನ್ನು ಹೊಂದಿದ್ದರೂ ಸಹ ಕುಟುಂಬಸ್ಥರಿಗೆ ಜಮೀನು ಅಭಿವೃದ್ಧಿಪಡಿಸಲು ಸಾಲ ಸೌಕರ್ಯಗಳು ದೊರೆಯುವುದಿಲ್ಲ. ಪ್ರಕೃತಿ ವಿಕೋಪದಂತಹ ಅಚಾತುರ್ಯಗಳಿಂದಾಗಿ ಫಸಲು ನಾಶವಾದಾಗ ಸರಕಾರದಿಂದ ನೀಡಲಾಗುವ ವಿಮೆ/ಪರಿಹಾರದ ಮೊಬಲಗನ್ನು ಪಡೆಯುವುದು ದುಸ್ತರವಾಗುತ್ತದೆ.

ಅಲ್ಲದೇ ಇಂತಹ ಜಮೀನುಗಳನ್ನು ಸಾರ್ವಜನಿಕ ಉದ್ದೇಶಕ್ಕೆ ಭೂಸ್ವಾಧೀನ ಕಾಯ್ದೆಯಂತೆ ಸ್ವಾಧೀನ ಪಡಿಸಿಕೊಂಡಾಗಲೂ ಸಹ ಪರಿಹಾರದ ಹಣವನ್ನು ಪಡೆಯಲು ವಿವಿಧ ಕಛೇರಿಗಳಿಗೆ ಅಲೆದಾಡಬೇಕಾದ ಪರಿಸ್ಥಿತಿ ಇರುವುದನ್ನು ಗಮನಿಸಲಾಗಿದೆ. ಈ ರೀತಿಯ ಅಸಂಗತಗಳನ್ನು ತೊಡೆದುಹಾಕಿ, ರೈತಾಪಿ ವರ್ಗದವರ ಸಮಸ್ಯೆಗಳನ್ನು ಪರಿಹರಿಸಿ ಪೌತಿ/ವಾರಸಾ ಸ್ವರೂಪದ ಮುಟೇಶನ್ ಪ್ರಕ್ರಿಯೆಯನ್ನು ಸರಳೀಕೃತಗೊಳಿಸಲು ಇ-ಪೌತಿ/ವಾರಸಾ ಖಾತೆ ಆಂದೋಲನವನ್ನು ನಡೆಸಲು ಕಂದಾಯ ಇಲಾಖೆ ನಿರ್ಧರಿಸಿದೆ ಎಂದು ಮಾಹಿತಿ ನೀಡಿದರು.

ಮಾನ್ಯ ಮುಖ್ಯಮಂತ್ರಿಗಳು 2025-26ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ 418 ರಲ್ಲಿ ಘೋಷಿಸಿರುವಂತೆ ಪಹಣಿಗಳಿಗೆ ಆಧಾರ್ ಜೋಡಣೆ ಸಂದರ್ಭದಲ್ಲಿ ಪೌತಿ ಎಂದು ಗುರುತಿಸಲಾದ ಜಮೀನುಗಳ ಪಹಣಿಗಳನ್ನು ವಾರಸುದಾರರಿಗೆ ಖಾತೆ ಮಾಡುವ ಉದ್ದೇಶದಿಂದ ಇ-ಪೌತಿ ಆಂದೋಲನವನ್ನು ಕೊಪ್ಪಳ ಜಿಲ್ಲೆಯಲ್ಲಿ ಆರಂಭಿಸಲಾಗಿದೆ, ಕಂದಾಯ ಇಲಾಖೆಯು ಸಿದ್ಧಪಡಿಸಿದ ಇ-ಪೌತಿ ತಂತ್ರಾoಶದ ಮೂಲಕ ಇ-ಪೌತಿ ಆಂದೋಲನವನ್ನು ಕೊಪ್ಪಳ ಜಿಲ್ಲೆಯ ಎಲ್ಲಾ 7 ತಾಲೂಕಗಳಲ್ಲಿ ನಡೆಸಲಾಗುವುದು. ಆಧಾರ ಸೀಡಿಂಗ್ ಮೊಬೈಲ್ ಆ್ಯಪ್ ಮೂಲಕ ಈಗಾಗಲೇ ಪಹಣಿಗಳಲ್ಲಿನ ಮಾಲೀಕರ ಖಾತೆಗಳಿಗೆ ಆಧಾರ ಕಾರ್ಡ ಇ-ಕೆವೈಸಿ ಮಾಡಿಸಿ ಆಧಾರ್ ನಂಬರ್ ಅನ್ನು ಪಹಣಿಗೆ ಜೋಡಣೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಪಹಣಿದಾರರು ಮೃತರಾದ ಸಂದರ್ಭದಲ್ಲಿ ಆಧಾರ ಸೀಡಿಂಗ್ ಆ್ಯಪ್‌ನಲ್ಲಿ ಒಟ್ಟು 70,579 ಪ್ರಕರಣಗಳನ್ನು ಆಧಾರ ಸೀಡಿಂಗ್ ಮೊಬೈಲ್ ಆ್ಯಪ್‌ನಲ್ಲಿ ಮೃತರೆಂದು ಗುರುತಿಸಲಾಗಿದೆ. ಈ ಎಲ್ಲಾ 70,579 ಮೃತ ಪಹಣಿದಾರರ ಕುಟುಂಬಗಳಿಗೆ ಇ-ಪೌತಿ ವಾರಸಾ ಖಾತಾ ಮಾಡಿಕೊಡುವ ಉದ್ದೇಶ ಹೊಂದಲಾಗಿದೆ ಎಂದು ಅವರು ತಿಳಿಸಿದರು.

ಗ್ರಾಮ ಆಡಳಿತಾಧಿಕಾರಿಗಳು ಮೃತ ಕುಟುಂಬದ ಸದಸ್ಯರಿಗೆ ತಿಳುವಳಿಕೆ ಚೀಟಿ ನೀಡುತ್ತಾರೆ. ಸಂಬAಧಿಸಿದ ವಾರಸುದಾರರು/ಉತ್ತರಾಧಿಕಾರಿಗಳು ಮೃತರ ಮರಣ ಪ್ರಮಾಣ ಪತ್ರ, ಗಣಕೀಕೃತ ವಂಶವೃಕ್ಷ ಪ್ರಮಾಣ ಪತ್ರ, ಸ್ವಾಧೀನದಾರರ ಆಧಾರ ಕಾರ್ಡ ದಾಖಲಾತಿಗಳನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಸಲ್ಲಿಸಬೇಕು.

ಗ್ರಾಮ ಆಡಳಿತಾಧಿಕಾರಿಗಳು ನಂತರ ಕಾನೂನು ಬದ್ದ ವಾರಸಾದಾರರ ಆಧಾರ ಇ-ಕೆವೈಸಿ ಯನ್ನು ಮಾಡುತ್ತಾರೆ. ಮತ್ತು ಅವರ ಉತ್ತರಾಧಿಕಾರಿಗಳು ಲಭ್ಯವಿದ್ದಲ್ಲಿ ಫೋಟೋ ತೆಗೆದು ಆ್ಯಪ್‌ನಲ್ಲಿ ಅಪ್ಲೋಡ್ ಮಾಡುತ್ತಾರೆ. ಮೃತರ ಇನ್ನಿತರ ಯಾವುದೇ ಸರ್ವೆ ನಂಬರ್‌ಗಳು ಇದ್ದಲ್ಲಿ ಆ ಎಲ್ಲಾ ಸರ್ವೆ ನಂಬರಗಳನ್ನು ಸೇರ್ಪಡೆ ಮಾಡುತ್ತಾರೆ ಎಂದು ಅವರು ಹೇಳಿದರು.

ಇ-ಪೌತಿ ಆಂದೋಲನ ಸಂದರ್ಭದಲ್ಲಿ ಕೆಲವು ಪಹಣಿಗಳಿಗೆ ಸಂಬoಧಿಸಿದoತೆ ಮೃತರ ಉತ್ತರಾಧಿಕಾರಿಗಳು ತಕರಾರು ಇದೆ ಎಂದು ಪೌತಿ ಖಾತೆ ಮಾಡಲು ಅನುಮತಿ ನೀಡದೆ ಇರುವ ಪ್ರಕರಣಗಳಿಗೆ ಸಂಬoಧಿಸಿದoತೆ “ಉತ್ತರಾಧಿಕಾರಿಗಳ ತಕರಾರು ಇದ್ದು, ಪೌತಿ ಖಾತೆ ಮಾಡಲು ಒಪ್ಪಿರುವುದಿಲ್ಲ ಎಂದು ಪಹಣಿ ಕಾಲಂ 11ರಲ್ಲಿ” ನಮೂದಿಸಲಾಗುತ್ತದೆ.

ಹೀಗಾಗಿ ಇ-ಪೌತಿ ಖಾತಾಗೆ ಬೇಕಾದ ವಂಶವೃಕ್ಷ, ಮರಣ ಪ್ರಮಾಣದಂತಹ ಇತರ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಆಂದೋಲನ ಯಶಸ್ವಿಗೆ ಜಿಲ್ಲೆಯ ಎಲ್ಲಾ ರೈತರು ಸಹಕರಿಸಬೇಕಾಗಿ ಕೋರಿಕೆ. ಈ ವಿಷಯ ಕುರಿತಂತೆ ಯಾವುದೇ ಹೆಚ್ಚಿನ ಮಾಹಿತಿಗಾಗಿ ಸಂಬAಧಿಸಿದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸಂಪರ್ಕಿಸಬಹುದು ಎಂದು ಸಚಿವರು ತಿಳಿಸಿದರು.

ಇದೇ ಸಂದರ್ಭ ಕೃಷಿ ಇಲಾಖೆಯ ಮುಂಗಾರು ಭತ್ತದಲ್ಲಿ ಕಣೆ ಹುಳು ಬಾಧೆ ಮತ್ತು ಸಮಗ್ರ ನಿರ್ವಹಣೆ ಹಾಗೂ ಮೆಕ್ಕೆಜೋಳದಲ್ಲಿ ಸೈನಿಕ ಹುಳುವಿನ ನಿರ್ವಹಣೆ ಮತ್ತು ಯೂರಿಯಾ ಬಳಕೆಯಿಂದ ಮಾನವನ ಆರೋಗ್ಯ, ಮಣ್ಣು ಮತ್ತು ಪರಿಸರದ ಮೇಲೆ ಬೀರುವ ಹಾನಿಕಾರಕ ಪರಿಣಾಮಗಳ ಕುರಿತ ಕರಪತ್ರಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ಅವರು ಬಿಡುಗಡೆಗೊಳಿಸಿದರು.

ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ. ಕೃಷಿ ಇಲಾಖೆಯ ಜಂಟಿ ನಿರ್ದೆಶಕರಾದ ರುದ್ರೇಶಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು
ಈ ಸಂದರ್ಭ ಕೊಪ್ಪಳ ಸಂಸದರಾದ ರಾಜಶೇಖರ ಹಿಟ್ನಾಳ್, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಜಿಲ್ಲಾಧಿಕಾರಿಗಳಾದ ಸುರೇಶ ಬಿ.ಇಟ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್.ಅರಸಿದ್ದಿ, ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಉಪಾಧ್ಯಕ್ಷರಾದ ಮಂಜುನಾಥ ಗೊಂಡಬಾಳ, ಜಂಟಿ ಕೃಷಿ ನಿರ್ದೇಶಕರಾದ ಟಿ.ಎಸ್. ರುದ್ರೇಶಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಲಿಂಗರಾಜು ಟಿ., ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಉಪನಿರ್ದೇಶಕರು, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

58 minutes ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

1 hour ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

1 hour ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

1 hour ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

1 hour ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

2 hours ago