ರೈತ ಸೊಸೈಟಿ ಮೂಲಕ ರಸಗೊಬ್ಬರ ವಿತರಣೆಗೆ ಆದ್ಯತೆ ನೀಡಿ- ಸಚಿವ ಶಿವರಾಜ ತಂಗಡಗಿ

ಕೊಪ್ಪಳ.30.ಜುಲೈ 25: ರಸಗೊಬ್ಬರವನ್ನು ಮಾರಾಟಕ್ಕಾಗಿ ಒಂದೇ ಕಂಪನಿ ಅಥವಾ ಎಜೆನ್ಸಿಯವರಿಗೆ ನೀಡಿದರೆ, ರೈತರಿಗೆ ಖರೀಸಲು ಸಮಸ್ಯೆಯುಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ರೈತರ ಸೊಸೈಟಿ ಮೂಲಕ ರಸಗೊಬ್ಬರ ವಿತರಣೆಗೆ ಆದ್ಯತೆ ನೀಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಅವರು ಮಂಗಳವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ರಸಗೊಬ್ಬರ ಪೂರೈಕೆಯ ಕುರಿತಾಗಿ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.


ಕೊಪ್ಪಳ ಜಿಲ್ಲೆಯಲ್ಲಿ ಕೆಲವೇ ಅಂಗಡಿಗಳಿಗೆ ರಸಗೊಬ್ಬರ ಮಾರಾಟ ಮಾಡಲು ನೀಡಿರುವುದಾಗಿ ರೈತರು ದೂರು ನೀಡಿದ್ದಾರೆ. ಇದರಿಂದ ರೈತರು ಗೊಬ್ಬರಕ್ಕಾಗಿ ಕ್ಯೂನಲ್ಲಿ ನಿಲ್ಲುವಂತಾಗಿದೆ ಹಾಗೂ ಕೊಪ್ಪಳ ತಾಲ್ಲೂಕಿನ ಮುದ್ದಾಬಳ್ಳಿ ಗ್ರಾಮದಲ್ಲಿಯೂ ಸಹ ಒಂದೆ ಅಂಗಡಿಯಲ್ಲಿ ಗೊಬ್ಬರಕ್ಕಾಗಿ ರಾತ್ರಿ ಇಡೀ ರೈತರು ಪಾಳೆ ನಿಂತಿದ್ದಾರೆ ಎಂದು ಪ್ರತಿಕೆಗಳಲ್ಲಿ ವರದಿಯಾಗಿದೆ. ಕೂಡಲೇ ಜಿಲ್ಲೆಯ ಸಹಕಾರ ಸಂಘಗಳಿಗೆ ಮತ್ತು ರಸಗೊಬ್ಬರ ಮಾರಾಟ ಎಜೆನ್ಸಿಯವರಿಗೆ ರಸಗೊಬ್ಬರವನ್ನು ಸಮಾನವಾಗಿ ಹಂಚಿಕೆ ಮಾಡಲು ಕೃಷಿ ಇಲಾಖೆ ಅಧಿಕಾರಿಗಳು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಸದ್ಯ ರೈತರಿಗೆ ನಾವೆಲ್ಲರೂ ರಕ್ಷಣೆಯನ್ನು ನೀಡಬೇಕಾಗಿದ್ದು, ರಸಗೊಬ್ಬರ ಮಾರಾಟ ಕಂಪನಿಯವರು ತಮ್ಮ ಅನುಕೂಲಕ್ಕೆ ತಕ್ಕಂತೆ ರಸಗೊಬ್ಬರಗಳನ್ನು ಮಾರಾಟ ಮಾಡುವಂತಿಲ್ಲ.

ಕಡ್ಡಾಯವಾಗಿ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಬೇಕು ಎಂದರು.
ನಿಗದಿತ ದರಕ್ಕಿಂತಲು ಹೆಚ್ಚಿನ ದರಕ್ಕೆ ರಸಗೊಬ್ಬರವನ್ನು ಮಾರಾಟ ಮಾಡುವ ರಸಗೊಬ್ಬರ ಅಂಗಡಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಮತ್ತು ಅಂತಹ ಅಂಗಡಿಗಳ ಪರವಾನಿಗೆ ರದ್ದು ಮಾಡಬೇಕೆಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.


ಕೊಪ್ಪಳ ಜಿಲ್ಲೆಯಲ್ಲಿ ಈ ವರ್ಷ ಮಳೆ ಬೇಗನೆಯಾಗಿರುವುದರಿಂದ ಭತ್ತದ ನಾಟಿ ಜೊತೆಗೆ ಮುಂಗಾರು ಬೆಳೆಗಳ ಬಿತ್ತನೆಯು ಬೇಗನೆ ಆಗಿದೆ. ಕಳೆದ ಬಾರಿಗಿಂತಲು ಈ ಬಾರಿ ಬಿತ್ತನೆ ಪ್ರಮಾಣವು ಹೆಚ್ಚಾಗಿದ್ದು ರಸಗೊಬ್ಬರದ ಬೇಡಿಕೆಯೂ ಹೆಚ್ಚಾಗಿದೆ. ರೈತರ ಬೇಡಿಕೆಯಂತೆ ಯುರಿಯಾ ಪೂರೈಸಬೇಕು. ಜಿಲ್ಲೆಗೆ ಮುಂದೆ ಬರಲಿರುವ ಯುರಿಯಾ ಪ್ರಮಾಣದ ಬಗ್ಗೆಯೂ ರೈತರಿಗೆ ಮಾಹಿತಿ ನೀಡಿ. ಅವಶ್ಯವಿರುವ ಪ್ರಮಾಣದಲ್ಲಿ ಮಾತ್ರ ಗೊಬ್ಬರ ಖರೀದಿಸುವಂತೆ ಹಾಗೂ ಜಿಲ್ಲೆಯಲ್ಲಿ ರಸಗೊಬ್ಬರಕ್ಕೆ ಯಾವುದೇ ಸಮಸ್ಯೆಯಿಲ್ಲ ಮತ್ತು ಮುಂದೆಯೂ ಯಾವುದೇ ರಸಗೊಬ್ಬರದ ಕೊರತೆಯಾಗುವುದಿಲ್ಲವೆಂದು ರೈತರಿಗೆ ಸೂಕ್ತ ಮಾಹಿತಿ ನೀಡಬೇಕು ಎಂದು ಹೇಳಿದರು.


ಜಿಲ್ಲೆಯ ನೀರಾವರಿ ಪ್ರದೇಶಗಳಲ್ಲಿ ಭತ್ತದ ಬೆಳೆಗೆ ಹಾಗೂ ಉತ್ತಮ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆಯಾದ ಮೆಕ್ಕೆಜೋಳ ಮತ್ತು ಇತರೆ ಬೆಳೆಗಳಿಗೂ ಯೂರಿಯಾದ ಅವಶ್ಯಕತೆಯಿರುವ ಕಾರಣ ಇದಕ್ಕೆ ಬೇಡಿಕೆ ಹೆಚ್ಚಾಗಿದೆ. ಅತಿ ಹೆಚ್ಚು ಬೇಡಿಕೆಯಿರುವ ಕಡೆ ಅಧಿಕಾರಿಗಳು ತ್ವರಿತವಾಗಿ ಗಮನ ಹರಿಸಬೇಕು. ರಸಗೊಬ್ಬರ ಪೂರೈಕೆಯನ್ನು ಸಮರ್ಪಕವಾಗಿ ನಿರ್ವಹಿಸಲು ಮೇಲ್ವಿಚಾರಣಾ ಸಮಿತಿಯನ್ನು ರಚನೆ ಮಾಡಬೇಕು.

ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿಗೆ ಒಬ್ಬರಂತೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು. ತಾಲ್ಲೂಕು ಮಟ್ಟದಲ್ಲಿ ಆಯಾ ತಹಶೀಲ್ದಾರರು ಮತ್ತು ಸಂಬಂಧಿಸಿದ ತಾಲ್ಲೂಕುಗಳ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಸಮಿತಿಯನ್ನು ರಚಿಸಿ, ಶೀಘ್ರದಲ್ಲಿಯೇ ಕಾರ್ಯಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿಗಳು ಕ್ರಮ ವಹಿಸಬೇಕು. ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಸಮಸ್ಯೆಉಂಟಾದಲ್ಲಿ ಸಂಬಂಧಿಸಿದ ತಾಲ್ಲೂಕುಗಳ ಕೃಷಿ ಇಲಾಖೆ ಅಧಿಕಾರಿಗಳನ್ನೆ ಹೊಣೆಗಾರರನ್ನಾಗಿ ಮಾಡಲಾಗುವುದು ಮತ್ತು ಆಯಾ ತಾಲ್ಲೂಕಿನ ತಹಶೀಲ್ದಾರರ ಮೇಲೆಯೂ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಸೂಚನೆ ನೀಡಿದರು.

ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡುತ್ತಿರುವ ಕುರಿತು ದೂರುಗಳು ಬರುತ್ತಿದ್ದು, ಇದರ ಕಡಿವಾಣಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬೇಕು ಹಾಗೂ ಈ ಬಗ್ಗೆ ತಹಶೀಲ್ದಾರರು ಗೊಬ್ಬರ ಮಾರಾಟ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು. ಎಲ್ಲಾ ರೈತರ ಸೊಸೈಟಿಗಳು ಮತ್ತು ಕಂಪನಿಗಳಿಗೆ ಗೊಬ್ಬರವನ್ನು ಸಮಾನವಾಗಿ ಹಂಚಿಕೆ ಮಾಡಬೇಕು ಎಂದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್ ಅವರು, ಕೊಪ್ಪಳ ಜಿಲ್ಲೆಯಲ್ಲಿ ಈ ವರ್ಷ ಮಳೆ ಬೇಗನೆಯಾಗಿರುವುದರಿಂದ ಭತ್ತದ ನಾಟಿ ಜೊತೆಗೆ ಮುಂಗಾರು ಬೆಳೆಗಳ ಬಿತ್ತನೆಯು ಬೇಗನೆ ಆಗಿದೆ. ಕಳೆದ ವರ್ಷ 2.41 ಲಕ್ಷ ಹೆಕ್ಟರ್ ಬಿತ್ತನೆಯಾಗಿದ್ದು, ಈ ವರ್ಷ 3.26 ಲಕ್ಷ ಹೆಕ್ಟರ್ ಬಿತ್ತನೆಯಾಗಿದ್ದು, ಹೆಚ್ಚುವರಿಯಾಗಿ 85 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆ ಯಾಗಿರುತ್ತದೆ. ಹಾಗಾಗಿ ರಸಗೊಬ್ಬರದ ಬೇಡಿಕೆಯೂ ಹೆಚ್ಚಾಗಿದೆ. ಕಳೆದ ವರ್ಷ ಜುಲೈ ಮಾಹೆಯಲ್ಲಿ 9610 ಟನ್ ಯುರಿಯಾದ ಬೇಡಿಕೆಯಿತ್ತು. ಈ ಬಾರಿ 10,360 ಟನ್ ಯುರಿಯಾದ ಬೇಡಿಕೆಯಲ್ಲಿ ಈಗಾಗಲೇ 11,252 ಟನ್ ಯುರಿಯಾ ಪೂರೈಸಲಾಗಿದೆ. ಇಂದು ಬೆಳಿಗ್ಗೆಯೂ 230 ಟನ್ ಯುರಿಯಾ ಜಿಲ್ಲೆಗೆ ಬಂದಿದ್ದು, ಮುಂದಿನ ವಾರದಲ್ಲಿ ಸುಮಾರು 3431 ಟನ್ ಯುರಿಯಾ ಜಿಲ್ಲೆಗೆ ಬರಲಿದ್ದು, ಹಂತ ಹಂತವಾಗಿ ಆಗಸ್ಟ್ ಮಾಹೆಯ ಬೇಡಿಯ ಅನುಗುಣವಾಗಿ ರಸಗೊಬ್ಬರವನ್ನು ಪೂರೈಸಲಾಗುತ್ತಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಿದರು.

ಸಭೆಯಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯಕಾಯನಿರ್ವಾಹಕ ಅಧಿಕಾರಿ ವರ್ಣಿತ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಉಪಾಧ್ಯಕ್ಷರಾದ ಮಂಜುನಾಥ ಗೊಂಡಬಾಳ, ಉಪ ನಿರ್ದೇಶಕ ಎಲ್.ಸಿದ್ದೇಶ್ ಇತರೆ ಸೇರಿದಂತೆ ಇಲಾಖೆಗಳ ಅಧಿಕಾರಿಗಳು, ತಹಶೀಲ್ದಾರರು, ವಿವಿಧ ತಾಲ್ಲೂಕುಗಳ ಕೃಷಿ ಅಧಿಕಾರಿಗಳು, ರಸಗೊಬ್ಬರ ವಿತರಕ ಕಂಪನಿಗಳ ಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

prajaprabhat

Recent Posts

ಕಾನ್ಪುರ ಬಳಿ ಜನಸಾಮಾನ್ಯರ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

ಹೊಸ ದೆಹಲಿ.01.ಆಗಸ್ಟ್.25:- ಮುಜಫರ್‌ಪುರದಿಂದ ಅಹಮದಾಬಾದ್‌ನ ಸಬರಮತಿ ಬಿಜಿ ನಿಲ್ದಾಣಕ್ಕೆ ಚಲಿಸುತ್ತಿದ್ದ ಜನಸಾಧಾರಣ್ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಇಂದು ಕಾನ್ಪುರದ ಭೌರ್‌ಪುರದ…

4 hours ago

ಹಬ್ಬದ ದಟ್ಟಣೆಯ ಸಮಯದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಲು ರೈಲ್ವೆ ನಿಲ್ದಾಣ ನಿರ್ದೇಶಕರಿಗೆ ಅಧಿಕಾರ ನೀಡಲಾಗುವುದು.

ಹೊಸ ದೆಹಲಿ.01.ಆಗಸ್ಟ್.25:- ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರು ಇಂದು ಮಾತನಾಡಿ, ಹಬ್ಬದ ದಟ್ಟಣೆಯ ಸಮಯದಲ್ಲಿ "ಸ್ಥಳದಲ್ಲೇ ಜನದಟ್ಟಣೆ ಕಡಿಮೆ…

4 hours ago

ಶಾಲೆ ಮಕ್ಕಳ ಕಳಪೆ ಆಹಾರದ ಬಗ್ಗೆ ಗಂಭೀರವಾಗಿ ಪರಿಗಣನೆ – ಸಚಿವ ಈಶ್ವರ ಬಿ.ಖಂಡ್ರೆ

ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ ದುರಸ್ತಿ,ಬೀದರ.01.ಆಗಸ್ಟ.25:- ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ…

4 hours ago

ಯುವಕರು ದುಶ್ಚಟಗಳಿಗೆ ಮಾರುಹೋಗದೇ ಒಳ್ಳೆಯ ಹವ್ಯಾಸ ಬೆಳೆಸಿಕೊಳ್ಳಿ-ಡಾ.ಎಸ್.ವಿ.ಪಾಟೀಲ್

ಬೀದರ.01.ಆಗಸ್ಟ್.25:- ಯುವಕರು ಮಧ್ಯಪಾನ, ತಂಬಾಕು, ಗುಟುಕಾ ಹಾಗೂ ಇನ್ನಿತರ ದುಶ್ಚಟಗಳಿಗೆ ಮಾರುಹೋಗದೇ ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕೆಂದು ಬೀದರ ತೋಟಗಾರಿಕಾ ಮಹಾವಿದ್ಯಾಲಯದ…

5 hours ago

ನವೋದಯ ವಿದ್ಯಾಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೀದರ.01.ಆಗಸ್ಟ್.25- ಬಸವಕಲ್ಯಾಣದ ನಾರಾಯಣಪೂರದಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 11ನೇ ತರಗತಿಯ ಖಾಲಿಯಿರುವ ಸೀಟುಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ರಾಜ್ಯ…

5 hours ago

ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ- ಸಚಿವ ಈಶ್ವರ ಬಿ.ಖಂಡ್ರೆ.

ಬೀದರ.01.ಆಗಸ್ಟ್25:- ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ…

5 hours ago