ಬೀದರ.26.ಏಪ್ರಿಲ್.25:- ಕರ್ನಾಟಕ ರಾಜ್ಯದ ಹಜ್ ಮಂಡಳಿಯ ಮಾಜಿ ಅಧ್ಯಕ್ಷರಾದ ರೌಫುದ್ದೀನ್ ಕಚೇರಿವಾಲೆಯವರನ್ನು ಭಾರತೀಯ ಜನತಾ ಪಕ್ಷದಿಂದ ೬ ವರ್ಷಗಳ ಕಾಲ ಉಚ್ಛಾಟಿಸಲಾಗಿದೆ ಎಂದು ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷರಾದ ಸೋಮನಾಥ ಪಾಟೀಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆಂದ್ರ ಸರ್ಕಾರದ ಐತಿಹಾಸಿಕ ವಕ್ಫ ತಿದ್ದುಪಡಿಯ ಬಿಲ್ಲುನ್ನ ವಿರೋಧಿಸಿ ಕಾಂಗ್ರೇಸ್ ಹಾಗೂ ಕೆಲ ಮುಸ್ಲಿಂ ಮುಖಂಡರ ಜೊತೆ ಸೇರಿ ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಯಲ್ಲಿ ರೌಫುದ್ದೀನ್ ಕಚೇರಿವಾಲೆ ಪಾಲ್ಗೊಂಡಿದ್ದಕ್ಕೆ ಕಾರಣ ಕೇಳಿ ದಿನಾಂಕ ೧೮-೦೪-೨೦೨೫ ರಂದು ರೌಫುದ್ದೀನ್ ಕಚೇರಿವಾಲೆಗೆ ಪಕ್ಷದಿಂದ ನೋಟಸ್ ನೀಡಲಾಗಿತ್ತು. ನೀಡಿರುವ ನೋಟಿಸಿಗೆ ಇಲ್ಲಿಯವರೆಗೆ ಸ್ಪಷ್ಠಿಕರಣ ನೀಡಲಿರುವುದರಿಂದ ರೌಫುದ್ದೀನ್ ಕಚೇರಿವಾಲೆ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ೬ ವರ್ಷಗಳ ಕಾಲ ಪಕ್ಷದಿಂದ ರಾಜ್ಯ ಶಿಸ್ತು ಸಮಿತಿಯ ಅಧ್ಯಕ್ಷರಾದ ಲಿಂಗರಾಜ ಪಾಟೀಲ ಅವರು ದಿನಾಂಕ ೨೫-೦೪-೨೦೨೫ ರಂದು ರೌಫುದ್ದೀನ್ ಕಚೇರಿವಾಲೆ ಇವರನ್ನು ಉಚ್ಛಾಟಿಸಿದ್ದಾರೆ ಎಂದು ಜಿಲ್ಲಾ ಅಧ್ಯಕ್ಷರಾದ ಸೋಮನಾಥ ಪಾಟೀಲ ಅವರು ಪ್ರಕಟಿಸಿದ್ದಾರೆ.
ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…
ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…
ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…
ರಾಯಚೂರು.11.ಆಗಸ್ಟ್.25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಜಿಲ್ಲೆಯ ಎಸ್.ಎಸ್.ಎಲ್.ಸಿ ಪ್ರೋತ್ಸಾಹಧನಕ್ಕಾಗಿ 2020 ರಿಂದ 2025ರವರೆಗೆ ಆಧಾರ್…
ಬೆಂಗಳೂರು.11.ಆಗಸ್ಟ್.25:- ರಾಜ್ಯದ ಸರ್ಕಾರಿ ಹಾಗೂ ಅನುದಾನಿತ್ ಶಾಲೆಗಳ SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಾಜ್ಯ…
ರಾಯಚೂರು.11.ಆಗಸ್ಟ್.25:- ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಯೂರಿಯಾ, ಡಿ.ಎ.ಪಿ ರಸಗೊಬ್ಬರ…