03/08/2025 11:39 PM

Translate Language

Home » ಲೈವ್ ನ್ಯೂಸ್ » ಲಸಿಕೆಗಳಿಂದ ತಡೆಗಟ್ಟುವ ಕಾಯಿಲೆಗಳ ಕುರಿತು ಕಾರ್ಯಾಗಾರಕ್ಕೆ ಡಿಎಚ್‌ಒ ಡಾ.ಸುರೇಂದ್ರ ಬಾಬು ಚಾಲನೆ

ಲಸಿಕೆಗಳಿಂದ ತಡೆಗಟ್ಟುವ ಕಾಯಿಲೆಗಳ ಕುರಿತು ಕಾರ್ಯಾಗಾರಕ್ಕೆ ಡಿಎಚ್‌ಒ ಡಾ.ಸುರೇಂದ್ರ ಬಾಬು ಚಾಲನೆ

Facebook
X
WhatsApp
Telegram

ರಾಯಚೂರು.28.ಜುಲೈ.25:- ಇಲ್ಲಿನ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರ್‌ಸಿಹೆಚ್ ವಿಭಾಗ, ಡಬ್ಲ್ಯು.ಹೆಚ್.ಓ ಕಲ್ಬುರ್ಗಿ ವಿಭಾಗ ಇವರ ಸಂಯುಕ್ತಾಶ್ರಯದಲ್ಲಿ ಲಸಿಕೆಗಳಿಂದ ತಡೆಗಟ್ಟುವ ಕಾಯಿಲೆಗಳ ಕುರಿತು ಕಾರ್ಯಾಗಾರವು ಯಶಸ್ವಿಯಾಗಿ ನಡೆಸಲಾಯಿತು.


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರ ಬಾಬು ಅವರು ಮಾತನಾಡಿ, 12 ಮಾರಕ ರೋಗಗಳನ್ನು ವಯಸ್ಸಿಗೆ ಅನುಸಾರವಾಗಿ ಮಕ್ಕಳಿಗೆ ಹಾಕಿಸುವ ಮೂಲಕ ಮಗುವಿನಲ್ಲಿ ರೋಗದ ವಿರುದ್ಧ ನಿರೋಧಕತೆಯನ್ನು ಹೆಚ್ಚಿಸಲು ಪಾಲಕರ ಮನವೊಲಿಕೆ ಮೂಲಕ ಲಸಿಕೆಗಳನ್ನು ಹಾಕಿಸಲು ಸಮುದಾಯದಲ್ಲಿ ನಿರಂತರ ಜಾಗೃತಿ ನೀಡಬೇಕೆಂದರು.
ಹುಟ್ಟಿದ ತಕ್ಷಣದಿಂದ ಒಂದು ವರ್ಷದೊಳಗೆ ಶಿಶುವಿಗೆ ಅಗತ್ಯ ಲಸಿಕೆಗಳನ್ನು ತಪ್ಪದೆ ಒದಗಿಸಲು ಜಿಲ್ಲೆಯಾದ್ಯಂತ ಪ್ರತಿ ಗುರುವಾರ ಗ್ರಾಮ, ವಾರ್ಡ ಮಟ್ಟದಲ್ಲಿ ಹಾಗೂ ಆಸ್ಪತ್ರೆಗಳಲ್ಲಿ ದಿನನಿತ್ಯ ಹಾಕಲಾಗುತ್ತಿದ್ದು, ಈ ದಿಶೆಯಲ್ಲಿ ವಯಸ್ಸಿಗನುಸಾರವಾಗಿ ನೀಡುವ ಲಸಿಕೆಗಳನ್ನು ತಪ್ಪದೆ ಕೊಡಿಸಲು ಪಾಲಕರ ಮನವೊಲಿಸಿ ಎಂದು ತಿಳಿಸಿದರು.


ಈ ವೇಳೆ ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ನಂದೀತಾ ಎಮ್ ಎನ್. ಅವರು ಮಾತನಾಡಿ, ಮಗುವಿಗೆ ಬಾಲ್ಯಾವಧಿ ಕಾಡುವ ಮಾರಕ ರೋಗಗಳ ಲಕ್ಷಣಗಳು ಆಕಸ್ಮಿಕವಾಗಿ ಕಂಡುಬAದಲ್ಲಿ ತಕ್ಷಣ ವರದಿ ಮಾಡುವ ಮೂಲಕ ಗಂಟಲು ಮಾರಿ, ದಡಾರ, ರೂಬೆಲ್ಲಾದಂತಹ ಪ್ರಕರಣಗಳನ್ನು ಸಕಾಲದಲ್ಲಿ ಗುರ್ತಿಸಿ ಚಿಕಿತ್ಸೆ ನೀಡಿ ರೋಗ ತಡೆಗೆ ಅವಕಾಶವಿದ್ದು, ಮುಖ್ಯವಾಗಿ 12 ಮಾರಕ ರೋಗಗಳು ಮತ್ತು ಅವುಗಳ ವಿರುದ್ಧ ನೀಡುವ ಲಸಿಕೆಗಳನ್ನು ವಯಸ್ಸಿಗನುಸಾರವಾಗಿ ಪೋಲಿಯೋ ರೋಗಕ್ಕೆ ಪೋಲಿಯೋ ದ್ರಾವಣ, ಬಾಲಕ್ಷಯಕ್ಕೆ ಬಿಸಿಜಿ ಲಸಿಕೆ, ಕಾಮಾಲೆ ರೋಗಕ್ಕೆ ಹೆಪಟೈಟಿಸ್ ಚುಚ್ಚುಮದ್ದು, ಗಂಟಲು ಮಾರಿ, ನಾಯಿಕೆಮ್ಮು ಧನುರ್ವಾಯು ರೋಟ ವೈರಸ್, ಹೆಚ್ ಇನ್‌ಪ್ಪುಯೆಂಜಾ, ಕಾಮಾಲೆ ಗಾಗಿ ಪೆಂಟಾವೈಲೆAಟ್ ಲಸಿಕೆ, ರೋಟಾವೈರಸ್ ಅತಿಸಾರಭೇದಿ ಗೆ ನಿಮೋಕಾಕಲ್ ಲಸಿಕೆ, ಮೆದುಳು ಜ್ವರ ರೋಗಕ್ಕೆ ಜಾಪನೀಸ್ ಎನ್ಸಲಿಟಿಸ್ ಲಸಿಕೆ, ದಡಾರ ರೂಬೇಲ್ಲಾ ರೋಗಕ್ಕೆ ಮಿಸಲ್ಸ್ ರೂಬೆಲ್ಲಾ ಲಸಿಕೆ, ಹಾಗೂ ಸಂಜೆಯ ಹೊತ್ತು ಕಂಡುಬರುವ ಇರುಳುಗಣ್ಣು ರೋಗಕ್ಕೆ ವಿಟಾಮಿನ್-ಎ ಅನ್ನಾಂಗ ದ್ರಾವಣ, ನೀಡಲಾಗುತ್ತಿರುವ ಹಾಗೂ ಇವೆಲ್ಲವುಗಳನ್ನು ಮಗುವಿನ ಒಂದು ವರ್ಷದೊಳಗೆ ಹಾಕಲಾಗುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕೆಂದರು. ಕಾರ್ಯಾಗಾರದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಸರ್ವೆಕ್ಷಣಾ ವೈದ್ಯಾಧಿಕಾರಿ ಡಾ.ಅನಿಲ್ ಲಕುಮಾರ ತಾಳಿಕೋಟ ಅವರು ವಿಶೇಷ ಉಪನ್ಯಾಸ ನೀಡಿದರು.


ಇದೇ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಣೇಶ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮಹಮ್ಮದ್ ಶಾಕೀರ್, ಜಿಲ್ಲಾ ಎನ್‌ವಿಬಿಡಿಸಿಪಿ ಅಧಿಕಾರಿ ಡಾ.ಚಂದ್ರಶೇಖರಯ್ಯ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್.ದಾಸಪ್ಪನವರ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ ಸೇರಿದಂತೆ ತಾಲೂಕಾ ಮೇಲ್ವಿಚಾರಣಾ ಅಧಿಕಾರಿಗಳು, ಸಿಬ್ಬಂದಿಯವರು ಹಾಗೂ ಇತರರು ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!