ಬೀದರ.16.ಜುಲೈ .25:- ಬೀದರ ಜಿಲ್ಲೆಯಲ್ಲಿ ವೀರಶೈವ ಲಿಂಗಾಯತ ಸಮಾಜ ಎಲ್ಲಾ ರಾಜಕೀಯ ಪಕ್ಷದಲ್ಲಿ ಹಂಚಿ ಹೋಗಿರುವುದರಿಂದ ಸಮಾಜದಲ್ಲಿ ವೀರಶೈವ ಲಿಂಗಾಯತ ಸಮಾಜದ ಸಂಘಟನೆ ಇಲ್ಲದಂತಾಗಿದೆ. ಇದರಿಂದಾಗಿ ಸಮಾಜದ ಸಂಘಟನೆಯಲ್ಲಿ ಮತ್ತು ಸಮಸ್ಯೆಗಳು ಬಗೆಹರಿಸುವಲ್ಲಿ ಒಗ್ಗಟ್ಟು ಇಲ್ಲದಂತಾಗಿದೆ ಎಂದು ವೀರಶೈವ ಲಿಂಗಾಯತ ಮಹಾಸಭಾದ ಮುಖಂಡರಾದ ರಾಜಶೇಖರ ಜವಳೆಯವರು ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.
ಬೀದರ ಜಿಲ್ಲೆಯಲ್ಲಿ ಸಾಕಷ್ಟು ಲಿಂಗಾಯತ ಪ್ರಭಾವಿ ರಾಜಕಾರಣ ಗಳಿದ್ದರೂ ಇಲ್ಲಿಯವರೆಗೆ ವೀರಶೈವ ಲಿಂಗಾಯತ ಭವನ ನಿರ್ಮಾಣವಾಗದೇ ಇರುವುದು ದುರದೃಷ್ಟಕರವಾದ ಸಂಗತಿಯಾಗಿದೆ. ಹೀಗಾಗಿ ಸಮಾಜದಲ್ಲಿ ಸಂಘಟನೆ ಇಲ್ಲವೆಂದು ಮೇಲ್ನೋಟಕ್ಕೆ ಕಂಡುಬರುತ್ತದೆ.
ಮುಂಬರುವ ದಿನಗಳಲ್ಲಿ ವೀರಶೈವ ಲಿಂಗಾಯತರು ಒಗ್ಗಟ್ಟು ತೋರಿಸಿ ವೀರಶೈವ ಲಿಂಗಾಯತ ಭವನ ನಿರ್ಮಾಣ ಮಾಡುವಲ್ಲಿ ಹಾಗೂ ಸಮಾಜದ ಏಳಿಗೆಗಾಗಿ ಎಲ್ಲಾ ರಾಜಕೀಯ ಲಿಂಗಾಯತ ಮುಖಂಡರು ಶ್ರಮಿಸಬೇಕೆಂದು ಜವಳೆ ತಿಳಿಸಿದ್ದಾರೆ. ಒಂದು ವೇಳೆ ವೀರಶೈವ ಲಿಂಗಾಯತರು ಒಗ್ಗಟ್ಟಾಗದಿದ್ದರೆ ಜಿಲ್ಲೆಯಲ್ಲಿ ಲಿಂಗಾಯತ ಸಮಾಜಕ್ಕೆ ಉಳಿಗಾಲವಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…