ಲೋಕಸಭೆಯಲ್ಲಿ 5 ವರ್ಷಗಳಿಂದ ಉಪ ಸಭಾಧ್ಯಕ್ಷರ ಹುದ್ದೆ ಖಾಲಿ: ಸಂಸದ ಸಾಗರ್‌ ಖಂಡ್ರೆ

ಹೊಸ ದೆಹಲಿ.31.ಮಾರ್ಚ್.25:- ಕೇಂದ್ರ ಸರ್ಕಾರವು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ. 2019ರಿಂದ ಲೋಕಸಭೆಯ ಉಪಸಭಾಧ್ಯಕ್ಷರ ಹುದ್ದೆ ತುಂಬಿಲ್ಲ. ಸಂವಿಧಾನದ 93ನೇ ವಿಧಿ ಉಲ್ಲಂಘಿಸಲಾಗಿದೆ’ ಎಂದು ಸಂಸದ ಸಾಗರ್‌ ಖಂಡ್ರೆ ಅವರು ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ.

ಸಂಸತ್ತಿನ ಕೆಳಮನೆ ಸಾಂವಿಧಾನಿಕವಾಗಿ, ಪ್ರಜಾಪ್ರಭುತ್ವದ ತತ್ವದಲ್ಲಿ ನಡೆಯಬೇಕು.

ಆದರೆ, ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ತಾಳಿದೆ. ಸಂಸತ್ತು ಪ್ರಜಾಸತ್ತಾತ್ಮಕವಾಗಿ ನಡೆಯಬೇಕಾದರೆ, ಎಲ್ಲ ಜನಪ್ರತಿನಿಧಿಗಳಿಗೂ ಪಕ್ಷಭೇದವಿಲ್ಲದೆ ಸಮಾನ ಅವಕಾಶ ದೊರಕಬೇಕು.

ಸದಸ್ಯರು ಸಾಂವಿಧಾನಿಕ ಕರ್ತವ್ಯ ನಿಭಾಯಿಸುವಂತಹ ವಾತಾವರಣ ಇರಬೇಕು. ಆದರೆ, ಇತ್ತೀಚಿನ ಕೆಲವು ಪ್ರವೃತ್ತಿಗಳು ಈ ವ್ಯವಸ್ಥೆಯ ಪಾವಿತ್ರ‍್ಯತೆಗೆ ಧಕ್ಕೆ ತಂದಿವೆ. ಪ್ರಜಾಪ್ರಭುತ್ವದ ಮೂಲ ತತ್ವಗಳನ್ನೇ ಅಪಹಾಸ್ಯ ಮಾಡುತ್ತಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸದನದಲ್ಲಿ ಪ್ರತಿಪಕ್ಷದ ಸದಸ್ಯರಿಗೆ ಮಾತನಾಡಲು ಸೂಕ್ತ ಅವಕಾಶ ಕಲ್ಪಿಸದೆ, ಅವರ ಹಕ್ಕನ್ನೇ ಮೊಟಕುಗೊಳಿಸಲಾಗುತ್ತಿದೆ. ಇದು ಸಂಸದೀಯ ಕಲಾಪದ ಚರ್ಚೆಯ ಸ್ವರೂಪವನ್ನು ದುರ್ಬಲಗೊಳಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರತಿಪಕ್ಷಗಳ ಸಂಸದರು ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದಾಗ, ಅವರ ಮಾತುಗಳು ಕೇಳದ ರೀತಿಯಲ್ಲಿ ಮೈಕ್ರೊಫೋನ್‌ ಆಫ್ ಮಾಡಲಾಗುತ್ತಿದೆ. ಪ್ರತಿಪಕ್ಷ ಸದಸ್ಯರ ಧ್ವನಿಯನ್ನೇ ದಮನ ಮಾಡುವ ಅಪಾಯಕಾರಿ ಪ್ರವೃತ್ತಿ ಬೆಳೆಯುತ್ತಿದೆ. ಆದರೆ, ಆಡಳಿತ ಪಕ್ಷದ ಸದಸ್ಯರಿಗೆ ಮುಕ್ತ ಅವಕಾಶ ನೀಡಲಾಗುತ್ತಿದೆ. ಈ ತಾರತಮ್ಯ ಪ್ರವೃತ್ತಿ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ತಿಳಿಸಿದ್ದಾರೆ.

ಬಜೆಟ್ ಮೇಲಿನ ಚರ್ಚೆಯಲ್ಲಿ ಕೆಲವು ಪ್ರಮುಖ ಸಚಿವಾಲಯಗಳನ್ನು ಹೊರಗಿಡಲಾಗುತ್ತಿದೆ. ಇದರಿಂದ ಹಣಕಾಸು ಮೇಲ್ವಿಚಾರಣೆ ಮತ್ತು ಪಾರದರ್ಶಕತೆ ತೀವ್ರವಾಗಿ ಕುಗ್ಗುತ್ತಿದೆ. ತುರ್ತು ಮತ್ತು ಜನರಿಗೆ ಉಪಯುಕ್ತವಾದ ವಿಷಯಗಳ ಬಗ್ಗೆ ಚರ್ಚಿಸಲು ಇರುವ ನಿಯಮ 193ನ್ನು ಸಮರ್ಪಕವಾಗಿ ಬಳಸಲು ಅವಕಾಶ ನೀಡುತ್ತಿಲ್ಲ. ಸರ್ಕಾರ ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಸಂಸದೀಯ ಸ್ಥಾಯಿ ಸಮಿತಿಗಳ ಸ್ವಾಯತ್ತತೆಯನ್ನು ಸಹ ಕಸಿದುಕೊಳ್ಳಲಾಗುತ್ತಿದೆ. ಕೆಲವು ಸಂದರ್ಭಗಳಲ್ಲಿ ಸ್ಪೀಕರ್ ಕಚೇರಿಯಿಂದಲೇ ವರದಿಗಳ ತಿದ್ದುಪಡಿಯ ಸೂಚನೆ ನೀಡಲಾಗುತ್ತಿದೆ.

ಶೂನ್ಯ ವೇಳೆಯಲ್ಲಿ ತುರ್ತು ವಿಷಯಗಳನ್ನು ಪ್ರಸ್ತಾಪಿಸಲು ಸಂಸದರಿಗೆ ನೀಡಲಾಗುತ್ತಿದ್ದ ಅವಕಾಶವನ್ನು ನಿರ್ಬಂಧಿಸಲಾಗುತ್ತಿದೆ. ಇದು ಸರ್ಕಾರದ ದಮನಕಾರಿ ಪ್ರವೃತ್ತಿ ಎಂದು ಸಾಗರ್ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಖಾಸಗಿ ಸದಸ್ಯರ ಮಸೂದೆಗಳು ಮತ್ತು ನಿರ್ಣಯಗಳಿಗೆ ಗಣನೀಯ ಹಿನ್ನಡೆಯಾಗುತ್ತಿದೆ. ಚರ್ಚೆಗೆ ಬೇಕಾದಷ್ಟು ಸಮಯ ಲಭಿಸುತ್ತಿಲ್ಲ. ಸಂಸತ್‌ ಟಿವಿಯಲ್ಲಿ ಪ್ರತಿಪಕ್ಷ ನಾಯಕರು ಮತ್ತು ಸದಸ್ಯರು ಮಾತನಾಡುವಾಗ ಅವರತ್ತ ಕ್ಯಾಮೆರಾ ಇರುತ್ತಿಲ್ಲ.

Agಸಭಾಧ್ಯಕ್ಷರು ಮತ್ತು ಸದನದ ಇತರ ದೃಶ್ಯಗಳನ್ನು ತೋರಿಸಲಾಗುತ್ತದೆ. ಇದು ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ ಎಂದು ಹೇಳಿದ್ದಾರೆ.

ಸಲಹಾ ಸಮಿತಿ ಸಭೆಗಳನ್ನು ನಿಯಮಿತವಾಗಿ ಕರೆಯದೆ, ನಿರ್ಲಕ್ಷಿಸಲಾಗುತ್ತಿದೆ. ಈ ಬೆಳವಣಿಗೆಳಿಂದ ನಮ್ಮ ಸಂಸದೀಯ ವ್ಯವಸ್ಥೆಯ ಮೂಲಭೂತ ತತ್ವಗಳಿಗೆ ಧಕ್ಕೆಯಾಗುತ್ತಿದೆ. ತಕ್ಷಣ ಸರಿಪಡಿಸುವ ಅಗತ್ಯವಿದೆ.

ನ್ಯಾಯಸಮ್ಮತ, ಪಾರದರ್ಶಕ ಮತ್ತು ಸಂವಿಧಾನದ ನಿಯಮಗಳ ಅನುಸರಣೆಯನ್ನು ಮರುಸ್ಥಾಪಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕು. ಪ್ರತಿಯೊಬ್ಬ ಜನಪ್ರತಿನಿಧಿಗೂ ಸದನದಲ್ಲಿ ಧ್ವನಿ ಎತ್ತಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

7 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

7 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

7 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

7 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

7 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

8 hours ago