Categories: ದೇಶ

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅನುಸರಿಸಬೇಕಾದ ನಡೆಗಳ ಕುರಿತು ಕಾಂಗ್ರೆಸ್ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ

26 ನೋವೆಂಬರ್ 25 ನ್ಯೂ ದೆಹಲಿ:-ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅನುಸರಿಸಬೇಕಾದ ನಡೆಗಳ ಕುರಿತು ಕಾಂಗ್ರೆಸ್ ಅಧ್ಯಕ್ಷರು ಆಗಿರುವ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟದ ನಾಯಕರ ಸಭೆ ನಡೆಯಿತು.


ಸಭೆಯಲ್ಲಿ ಮೈತ್ರಿಕೂಟದ ಹಲವು ನಾಯಕರು ಪಾಲ್ಗೊಂಡು ಎರಡು ಸದನಗಳಲ್ಲಿ ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಸಮಾಲೋಚನೆ ನಡೆಸಿದರು.
ಇತ್ತೀಚೆಗೆ ಮುಕ್ತಾಯಗೊಂಡ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವ ಮೈತ್ರಿಕೂಟ ಅಬೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ವಿದ್ಯುನ್ಮಾನ ಮತ ಯಂತ್ರಗಳ ಲೋಪ ಸೇರಿದಂತೆ ಮತ್ತು ಇತರ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಸಭೆಯಲ್ಲಿ ತಂತ್ರರೂಪಿಸಿದರು.


ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ವಕ್ಫ್ ತಿದ್ದುಪಡಿ ಮಸೂದೆ ಸೇರಿದಂತೆ ಪ್ರಮುಖ ಮಸೂದೆಗಳನ್ನು ಕೇಂದ್ರ ಸರ್ಕಾರ ಉಭಯ ಸದನಗಳಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲು ಮುಂದಾಗಿದೆ.


ಕಲಾಪ ಆರಂಭವಾಗುವುದಕ್ಕೂ ಮುನ್ನ ಪ್ರತಿಕ್ರಿಯೆ ನೀಡಿರುವ ಉದ್ದವ್ ಠಾಕ್ರೆ ನೇತೃತ್ವದ ಶಿವಸೇನೆಯ ಮುಖಂಡ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ವಿದ್ಯಮಾನ ಮತಯಂತ್ರಗಳು ಬಿಜೆಪಿ ಪರವಾಗಿ ಕೆಲಸ ಮಾಡಿವೆ. ಇದರಿಂದಾಗಿ ಬಿಜೆಪಿ ಮೈತ್ರಿಕೂಟಕ್ಕೆ ಗೆಲುವು ಬಂದಿದೆ, ಹೀಗಾಗಿ ಮತಪತ್ರಗಳನ್ನು ಮತ್ತೆ ಜಾರಿ ಮಾಡಬೇಕೆಂದು ಒತ್ತಾಯ ಮಾಡುವುದಾಗಿ ತಿಳಿಸಿದ್ದಾರೆ.


ಸಂಸತ್ ಕಲಾಪ ಆರಂಭವಾಗುವುದಕ್ಕೂ ಮುನ್ನ ನಿನ್ನೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವಪಕ್ಷಗಳ ನಾಯಕರ ಸಭೆ ಕರೆದು ಸುಗಮ ಕಲಾಪಕ್ಕೆ ಮನವಿ ಮಾಡಲಾಗಿದೆ. ಆದರೆ ಪ್ರತಿ ಬಾರಿಯಂತೆಯೂ ಈ ಬಾರಿಯೂ ಕಲಾಪ ಕಾವೇರಿದ ಕಲಾಪ ನಡೆಯುವ ಸಾಧ್ಯತೆ ಇದೆ.

prajaprabhat

Share
Published by
prajaprabhat

Recent Posts

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

48 minutes ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

10 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

13 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

13 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

13 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

13 hours ago