ಬೀದರ.21.ಜನವರಿ.25:- ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆ ವತಿಯಿಂದ ಬೀದರ ತಾಲ್ಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಜನವರಿ.22 ರಂದು ಬೆಳಿಗ್ಗೆ 11.30 ಗಂಟೆಗೆ ಔರಾದ (ಬಾ) ತಾಲ್ಲೂಕಾ ಪಂಚಾಯತ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಕುಂದು ಕೊರತೆ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೀದರ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳೊಂದಿಗೆ ಕೆಲಸ ನೆರವೇರಿಸಿಕೊಳ್ಳಲು ಅಥವಾ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ: 1 ಮತ್ತು 2 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದೆ, ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸಗಳಲ್ಲಿ ವಿಳಂಬವಾಗಿದ್ದರೆ ಅಥವಾ ಅಧಿಕಾರಿಗಳು ನ್ಯಾಯ ಸಮ್ಮತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ತೊಂದರೆ ಕೊಡುತ್ತಿದ್ದರೆ ಅಥವಾ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳಿದ್ದಲ್ಲಿ, ಸದರಿ ಸಭೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಸಭೆಯ ಸದುಪಯೋಗ ಪಡೆದುಕೊಳ್ಳಲು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಎಸ್‍ಪಿ ಮೊ.ಸಂ-9364062519, ಡಿಎಸ್‍ಪಿ ಮೊಬೈಲ ಸಂ-9364062571, ಪಿಐ-1 ಮೊಬೈಲ ಸಂ-9364062672, ಪಿಐ-2 ಮೊ.ಸಂ-9364062673, ಪಿಐ-3 ಮೊ.ಸಂ-9364062674 ಹಾಗೂ ಪಿಐ-4 ಮೊ.ಸಂ-9364062675 ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
