04.ಜ.25.ಬೀದರ:- ಬೀದರ ಜಿಲ್ಲೆಗೆ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೋಳಿ ಅವರು ಜನವರಿ.7 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.
ಅವರು ಅಂದು ಬೆಳಿಗ್ಗೆ 11 ಗಂಟೆಗೆ ಹುಮನಾಬಾದ ತಾಲ್ಲೂಕಿನ ಜಿಲ್ಲಾ ಮುಖ್ಯ ರಸ್ತೆ ಎನ್‍ಎಚ್.9 ರಲ್ಲಿ ಕಿ.ಮೀ.6.40 ರಿಂದ 9.20 ವರೆಗಿನ ಚಿಟಗುಪ್ಪಾ ವಯಾ ಶಮತಬಾದ್ ರಸ್ತೆಯಲ್ಲಿ ಕೈಗೊಂಡಿರುವ ಕಾಮಗಾರಿಯ ಪರಿವೀಕ್ಷಣೆ ಮಾಡಲಿದ್ದಾರೆ.
ನಂತರ ಮಧ್ಯಾಹ್ನ 2 ಗಂಟೆಗೆ
ನೌಬಾದ್-ಕಮಲನಗರ-ನಾಬಾದ್ (ಬೀದರ) ಮಹಾರಾಷ್ಟ್ರ ಗಡಿ ಭಾಗದ ರಾಷ್ಟ್ರೀಯ ಹೆದ್ದಾರಿ-50 ರ ಕಿ.ಮೀ. 0.00 ದಿಂದ ಕಿ.ಮೀ. 54.370 ನೌಬಾದ್‍ವರೆಗಿನ ಕೈಗೊಳ್ಳಲಾಗಿರುವ ರಸ್ತೆ ಕಾಮಗಾರಿಗಳ ಪರಿವೀಕ್ಷಣೆ ನಡೆಸುವರು. ನಂತರ ಮಧ್ಯಾಹ್ನ 3 ಗಂಟೆಗೆ ಬೀದರ್ ಜಿಲ್ಲಾ ಕಾಂಗ್ರೆಸ್ ಕಛೇರಿ ಭೇಟಿ ನೀಡುವರು.
ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೀದರ ಜಿಲ್ಲೆಯ ಲೋಕೋಪಯೋಗಿ ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…