Home » ಲೈವ್ ನ್ಯೂಸ್ » ಲೋಕ ಅದಾಲತ್ ಮೂಲಕ ವಿವಿಧ ಪ್ರಕರಣಗಳ ಇತ್ಯರ್ಥ: ದಾಖಲೆಯ ಮೌಲ್ಯ

ಲೋಕ ಅದಾಲತ್ ಮೂಲಕ ವಿವಿಧ ಪ್ರಕರಣಗಳ ಇತ್ಯರ್ಥ: ದಾಖಲೆಯ ಮೌಲ್ಯ

Facebook
X
WhatsApp
Telegram

ಕೊಪ್ಪಳ.13.ಜುಲೈ .26: ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಪ್ರಾಧಿಕಾರದ ವತಿಯಿಂದ ಶನಿವಾರ (ಜು. 11ರಂದು) ಜಿಲ್ಲೆಯಾದ್ಯಂತ ನಡೆದ ಲೋಕ ಅದಾಲತ್ ಮೂಲಕ ವಿವಿಧ ಪ್ರಕರಣಗಳು ಇತ್ಯರ್ಥಗೊಂಡಿವೆ. ಜಿಲ್ಲೆಯಲ್ಲಿ ಒಟ್ಟು 1 ಪ್ರಕರಣದಲ್ಲಿ ಗಂಡ ಹೆಂಡತಿ ಮನಸ್ತಾಪ ಬಿಟ್ಟು ಮಧ್ಯಸ್ಥಿಕೆಯಗಾರರು, ವಕೀಲರು ಹಾಗೂ ನ್ಯಾಯಾಧೀಶರುಗಳ ಸೂಕ್ತ ಮಾರ್ಗದರ್ಶನದ ಮೇರೆಗೆ ಒಟ್ಟಿಗೆ ಬಾಳು ನಡೆಸಲು ಒಪ್ಪಿಕೊಂಡಿರುತ್ತಾರೆ.


2921 ಪ್ರಕರಣಗಳು ಇತ್ಯರ್ಥ: ಇದೆ ಸಂದರ್ಭದಲ್ಲಿ ವಿಮೆ, ನೀರಿನ ಬಿಲ್, ಬ್ಯಾಂಕ್ ಸಾಲ, ಮನೆ ಕರ, ಕೌಟುಂಬಿಕ ದೌರ್ಜನ್ಯ, ಜೀವನಾಂಶ, ಚೆಕ್ ಬೌನ್ಸ್ ಪ್ರಕರಣಗಳು, ಜನನ ಮರಣ, ಸಿವಿಲ್ ಕೇಸ್, ಕ್ರಿಮಿನಲ್ ಕೇಸ್, ಮೋಟಾರ್ ವಾಹನ ಅಪಘಾತ, ಎಂಎಂಆರ್ಡಿ ಪ್ರಕರಣಗಳು ಹಾಗೂ ಇತ್ಯಾದಿ ಸೇರಿದಂತೆ ಕೊಪ್ಪಳ, ಗಂಗಾವತಿ, ಕುಷ್ಟಗಿ ಹಾಗೂ ಯಲಬುರ್ಗಾ ನ್ಯಾಯಾಲಯಗಳಲ್ಲಿ ಒಟ್ಟು 5189 ಪ್ರಕರಣಗಳ ಪೈಕಿ 2921 ಪ್ರಕರಣಗಳನ್ನು ಇತ್ಯರ್ಥ ಮಾಡಲಾಯಿತು.


ದಾಖಲೆಯ ಮೌಲ್ಯ: ವಿಮೆ, ನೀರಿನ ಕರ, ಮೋಟಾರ್ ವಾಹನ ಅಪಘಾತ ಸೇರಿದಂತೆ ವಿವಿಧ ಪ್ರಕರಣಗಳು ಸೇರಿ ಪೂರ್ವ ದಾವೇ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 43,591 ಪ್ರಕರಣಗಳ ಪೈಕಿ 40,250 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಇತ್ಯರ್ಥ ಪಡಿಸಲಾದ ಒಟ್ಟು ಮೌಲ್ಯ 2,07,85,397 ಇದ್ದು, ಒಟ್ಟಾರೆ ಒಂದೇ ದಿನದಲ್ಲಿ ಒಟ್ಟು 48,780 ಪ್ರಕರಣಗಳ ಪೈಕಿ 43,171 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಇತ್ಯರ್ಥಪಡಿಸಲಾದ ಒಟ್ಟು ಮೌಲ್ಯ 23,09,47,209 ಇರುತ್ತದೆ.


ಈ ಬಾರಿ ದಾಖಲೆ ಪ್ರಮಾಣದಲ್ಲಿ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥ ಪಡಿಸಲು ಸಹಕಾರ ನೀಡಿದ ಗೌರವಾನ್ವಿತ ನ್ಯಾಯಾಧೀಶರು, ವಕೀಲರು, ಕಕ್ಷಿಗಾರರು, ಮಧ್ಯಸ್ತಿಗಾರ ವಕೀಲರುಗಳಿಗೆ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯ ಕಾರ್ಯದರ್ಶಿಗಳು ಧನ್ಯವಾದಗಳನ್ನು ತಿಳಿಸಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology