ಬೀದರ.19.ಜೂನ್.26:- 2026-27ನೇ ಸಾಲಿನ ಕಾನೂನು ಪದವಿ ಪಡೆದಿರುವ ಹಿಂದುಳಿದ ವರ್ಗಗಳ 10 ಅಭ್ಯರ್ಥಿಗಳಿಗೆ ಸರಕಾರಿ ವಕೀಲರು ಅಥವಾ 20
ಹಿಂದುಳಿದ ವರ್ಗಗಳ 10 ಅಭ್ಯರ್ಥಿಗಳಿಗೆ ಸರಕಾರಿ ವಕೀಲರು,
20 ವರ್ಷಗಳಿಗಿಂತ ಹೆಚ್ಚಿನ ಅನುಭವವುಳ್ಳ ವಕೀಲರಿಂದ ತರಬೇತಿ ಅರ್ಜಿ ಅಹ್ವಾನ
ವರ್ಷಗಳಿಗಿಂತ ಹೆಚ್ಚಿನ ಅನುಭವವುಳ್ಳ ವಕೀಲರಿಂದ ತರಬೇತಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಮಟ್ಟದ ಹಿಂದುಳಿದ ವರ್ಗಗಳ ಕಾನೂನು ಪದವೀಧರರ ಆಯ್ಕೆ ಸಮಿತಿ ಹಾಗೂ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.
ತರಬೇತಿಯ ಅವಧಿಯ 4 ವರ್ಷಗಳಿದ್ದು, ತರಬೇತಿ ಅವಧಿಯಲ್ಲಿ ಮಾಸಿಕ 4000 ರೂ.ಗಳ ತರಬೇತಿ ಭತ್ಯೆ ನೀಡಲಾಗುವುದು. ಅರ್ಜಿಗಳನ್ನು ಸಲ್ಲಿಸಲು ಬಯಸುವರು ಷರತ್ತುಗಳು ಪೂರೈಸಿರಬೇಕು.
ಷರತ್ತುಗಳು : ಅಭ್ಯರ್ಥಿ ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ, 3ಬಿ ಸೇರಿದವರಾಗಿರಬೇಕು, ಬೀದರ ಜಿಲ್ಲೆಯ ನಿವಾಸಿಯಾಗಿರಬೇಕು, ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ಪ್ರವರ್ಗ-1, ರಡಿಯಲ್ಲಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಆದಾಯ 3.50 ಲಕ್ಷ ರೂ.ಗಳ ಒಳಗಿರಬೇಕು, ಪ್ರವರ್ಗ-2ಎ, 3ಎ ಮತ್ತು 3ಬಿ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಆದಾಯ 2.50 ಲಕ್ಷ ರೂ.ಗಳ ಒಳಗಿರಬೇಕು.
ದಾಖಲಾತಿಗಳು : ಎಸ್.ಎಸ್.ಎಲ್.ಸಿ ದೃಢೀಕೃತ ಅಂಕಪಟ್ಟಿ, ಕಾನೂನು ಪದವಿ ಪರೀಕ್ಷೆಯ ಎಲ್ಲಾ ವರ್ಷಗಳ ದೃಢೀಕೃತ ಅಂಕ ಪಟ್ಟಿ, ತಹಸೀಲ್ದಾರರಿಂದ ನೀಡಲ್ಪಟ್ಟ ಜಾತಿ, ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಬಾರ್‌ಕೌನ್ಸಿಲ್‌ನಲ್ಲಿ ಹೆಸರನ್ನು ನೋಂದಾಯಿಸಿದ ಪ್ರಮಾಣ ಪತ್ರ ಲಗತ್ತಿಸಬೇಕು.
ಅಭ್ಯರ್ಥಿಯ ಬಾರ ಕೌನ್ಸಿಲ್‌ನಲ್ಲಿ ಹೆಸರನ್ನು ನೋಂದಾಯಿಸಿರಬೇಕು, ತರಬೇತಿಗೆ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕಕ್ಕೆ ಹಿಂದೆ 2 ವರ್ಷ ಒಳಗಿರಬೇಕು, ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು, ಅರ್ಜಿಸಲ್ಲಿಸಲು ನಿಗದಿ ಪಡಿಸಿದ ಕಡೆಯ ದಿನಾಂಕಕ್ಕೆ ಪ್ರವರ್ಗ 2ಎ, 3ಎ, ಮತ್ತು 3ಬಿಯ ಅಭ್ಯರ್ಥಿಯ 38 ವರ್ಷ ಒಳಗಿರಬೇಕು, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳ 40 ವರ್ಷ ಒಳಗಿರಬೇಕು, ಅರ್ಜಿ ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕಕ್ಕೆ ಅಭ್ಯರ್ಥಿಯು 3 ವರ್ಷಗಳ ಅವಧಿ ಒಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯಲ್ಲಿ ಕೆಳಗೆ ಸಹಿ ಮಾಡಿದವರ ಕಛೇರಿಯಿಂದ ಪಡೆದು ದಾಖಲಾತಿಗಳೊಂದಿಗೆ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ನಾವದಗೇರಿ ಬೀದರ ಇವರಿಗೆ 2026ರ ಜೂನ್ 29ರ ಒಳಗೆ ಸಂಜೆ 5 ಗಂಟೆಯ ಒಳಗೆ ಅರ್ಜಿಸಲ್ಲಿಸಬೇಕು. ಅಪೂರ್ಣವಾದ ಹಾಗೂ ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





Any questions related to ವಕೀಲರಿಂದ ತರಬೇತಿಗೆ ಅರ್ಜಿ ಆಹ್ವಾನ<br>?