ಬೀದರ|ವಚನ ಸಾಹಿತ್ಯದಲ್ಲಿ ಆತ್ಮದ ಹಸಿವು ನೀಗಿಸುವ ಶಕ್ತಿ’

ಬೀದರ.14.ಫೆ.25:- ಇಂದು ಬೀದರ ನಗರದಲ್ಲಿ ಜಿಲ್ಲಾ ರಾಷ್ಟ್ರೀಯ ಬಸವ ದಳ ಮತ್ತು ಲಿಂಗಾಯತ ಸಮಾಜದ ಸಹಯೋಗದಲ್ಲಿ ಬೀದರ್ ನಗರದಲ್ಲಿ  “ಚನ್ನಬಸವಣ್ಣನವರ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ”12ನೇ ಶತಮಾನದಲ್ಲಿ ಬಸವಾದಿ ಶರಣರು ಕೊಟ್ಟ ವಚನ ಸಾಹಿತ್ಯದಲ್ಲಿ ಆತ್ಮದ ಹಸಿವು ನೀಗಿಸುವ ಶಕ್ತಿ ಇದೆ”ಎಂದು ಕೂಡಲಸಂಗಮ ಬಸವಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿದರು.

ಕಲ್ಯಾಣ ಕ್ರಾಂತಿಯ ನಂತರ ಸನಾತನ ಶಕ್ತಿಗಳು ವಚನ ಸಾಹಿತ್ಯವನ್ನು ನಾಶಪಡಿಸಲು ಯುದ್ಧ ಸಾರಿದ್ದರು. ಚನ್ನಬಸವಣ್ಣ, ಮಡಿವಾಳ ಮಾಚಿದೇವ, ಅಕ್ಕನಾಗಮ್ಮನವರ ನೇತೃತ್ವದ ಶರಣರ ಪಡೆ ಅವರ ವಿರುದ್ಧ ಹೋರಾಟ ನಡೆಸಿ, ಉಳಿಸಿದ್ದರು.

ಈ ಹೋರಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚನ್ನಬಸವಣ್ಣನವರು ದಟ್ಟಾರಣ್ಯದಲ್ಲಿ ಲಿಂಗೈಕ್ಯರಾಗಿದ್ದರು. ಅವರ ಕೊನೆಯ ದಿನಗಳಲ್ಲಿ ಉಳಿದುಕೊಂಡಿದ್ದ ಸ್ಥಳಕ್ಕೀಗ ಉಳವಿ ಸುಕ್ಷೇತ್ರ ಎಂದು ಕರೆಯಲಾಗುತ್ತದೆ. ಪ್ರತಿ ವರ್ಷ ಚನ್ನಹುಣ್ಣಿಮೆಯ ದಿನ ಉಳವಿಯಲ್ಲಿ ಜಾತ್ರೆ ನಡೆಯುತ್ತದೆ.

ಎಲ್ಲರಿಗೂ ಅಲ್ಲಿಗೆ ಹೋಗಲು ಆಗುವುದಿಲ್ಲ ಎಂದು ಭಾವಿಸಿ ಮಾತೆ ಮಹಾದೇವಿಯವರು, ಪ್ರತಿಯೊಬ್ಬರೂ ಅವರಿರುವ ಸ್ಥಳದಲ್ಲಿಯೇ ಚನ್ನಹುಣ್ಣಿಮೆ ಆಚರಿಸಬೇಕೆಂದು ಕರೆ ಕೊಟ್ಟರು. ಅಂದಿನಿಂದ ಇದು ಚಾಲ್ತಿಗೆ ಬಂದಿದೆ ಎಂದರು.

ಕಲ್ಯಾಣ ಕ್ರಾಂತಿ ನಂತರ ವಚನ ಸಾಹಿತ್ಯ ಗುಪ್ತಗಾಮಿನಿಯಾಗಿತ್ತು‌ ಅದನ್ನು ಬೆಳಕಿಗೆ ತಂದ ಕೀರ್ತಿ ಫ.ಗು‌ ಹಳಕಟ್ಟಿ ಅವರಿಗೆ ಸಲ್ಲುತ್ತದೆ. ವಿಶ್ವವಿದ್ಯಾಲಯಕ್ಕೆ ಸೀಮಿತವಾಗಿದ್ದ ವಚನ ಸಾಹಿತ್ಯವನ್ನು ಮನೆ ಮನೆಗೆ ತಲುಪಿಸಿದ ಕೀರ್ತಿ ಲಿಂಗಾನಂದ ಸ್ವಾಮೀಜಿ, ಮಾತೆ ಮಹಾದೇವಿ ಅವರಿಗೆ ಸಲ್ಲುತ್ತದೆ.

ಈಗ ವಚನ ಸಾಹಿತ್ಯ ಇಡೀ ಜಗತ್ತಿಗೆ ಪರಿಚಯವಾಗಿರುವುದು ಖುಷಿಯ ಸಂಗತಿ ಎಂದು ಹೇಳಿದರು.

ಚಿಂತಕ ಸಂಜಯ ಮಾಕಾಲ ಮಾತನಾಡಿ, ಕಾಯಕದಲ್ಲಿ ನಿರತನಾದೆಡೆ ಗುರು, ಲಿಂಗಪೂಜೆ ಕೂಡ ಮರೆಯಬಹುದು.

ಕಾಯಕದಿಂದಲೇ ಕೈಲಾಸ ಎಂದು ಹೇಳಿ ಧರ್ಮಕ್ಕಿಂತ ಕಾಯಕ ದೊಡ್ಡದು ಎಂದು ಹೇಳಿದವರು ಬಸವಣ್ಣ. ಕಾಯಕ ಸಿದ್ಧಾಂತದ ಮೇಲೆ ಜಪಾನ್‌ ಸೇರಿದಂತೆ ಅನೇಕ ರಾಷ್ಟ್ರಗಳು ಮುನ್ನಡೆಯುತ್ತಿವೆ. ಆದರೆ, ಭಾರತೀಯರು ಆ ಸಿದ್ಧಾಂತವನ್ನು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ಅದರ ಮಹತ್ವ ಅರಿತರೆ ಭಾರತವನ್ನು ಸಮೃದ್ಧ ರಾಷ್ಟ್ರವಾಗಿ ಕಟ್ಟಬಹುದು ಎಂದರು.

ರಾಷ್ಟ್ರೀಯ ಶಿಕ್ಷಣ ನ್ಯಾಸ ಅಧ್ಯಕ್ಷ ಡಾ. ಬಸವರಾಜ ಪಾಟೀಲ ಅಷ್ಟೂರ ಅವರು ಷಟಸ್ಥಲ ಧ್ವಜಾರೋಹಣ ನೆರವೇರಿಸಿದರು. ಬಸವ ಮಂಟಪದ ಮಾತೆ ವಿಜಯಾಂಬಿಕಾ ಅವರು ಸಮ್ಮುಖ ವಹಿಸಿದ್ದರು.

ಗಾಂಧಿ ಗಂಜ್‌ ಕೋ ಆಪರೇಟಿವ್‌ ಬ್ಯಾಂಕಿನ ಅಧ್ಯಕ್ಷ ವಿಜಯಕುಮಾರ ಪಾಟೀಲ ಗಾದಗಿ, ಸಂಗೋಳಗಿ ಪಿಕೆಪಿಎಸ್‌ ಅಧ್ಯಕ್ಷ ಶಿವಕುಮಾರ ಹಿಂದಾ, ಬ್ಯಾಲಹಳ್ಳಿ ಪಿಕೆಪಿಎಸ್‌ ಸದಸ್ಯ ಓಂಕಾರ ಪಸರ್ಗೆ ಅವರನ್ನು ಸನ್ಮಾನಿಸಲಾಯಿತು.

ಲಿಂಗಾಯತ ಸಮಾಜದ ಜಿಲ್ಲಾಧ್ಯಕ್ಷ ಕುಶಾಲರಾವ್‌ ಪಾಟೀಲ ಖಾಜಾಪೂರ, ರಾಷ್ಟ್ರೀಯ ಬಸವ ದಳದ ಜಿಲ್ಲಾಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ಪ್ರಧಾನ ಕಾರ್ಯದರ್ಶಿ ಸುರೇಶ ಸ್ವಾಮಿ, ಡಾ.ಸಿ.ಆನಂದರಾವ್‌, ಚಂದ್ರಶೇಖರ ಹೆಬ್ಬಾಳೆ, ರಾಜೇಂದ್ರಕುಮಾರ ಗಂದಗೆ, ಕಂಟೆಪ್ಪ ಗಂದಿಗುಡೆ, ರಾಜೇಂದ್ರ ಜೊನ್ನಿಕೇರಿ, ವಿಜಯಕುಮಾರ ಪಾಟೀಲ, ಗಂಗಶೆಟ್ಟಿ ವಕೀಲರು, ಸಿದ್ರಾಮ ಶೆಟಕಾರ, ಗಣೇಶ ಬಿರಾದಾರ ಮತ್ತಿತರರು ಹಾಜರಿದ್ದರು.

prajaprabhat

Recent Posts

ರಾಜ್ಯದಲ್ಲಿ ಖಾಲಿ ಪ್ರಾಧ್ಯಾಪಕರ ಹುದ್ದೆಗಳು  ಶೀಘ್ರ ಭರ್ತಿ ಮಾಡಲಾಗುವುದು.

ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್‌ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…

5 hours ago

ಶ್ರೀಕೃಷ್ಣ ಜನ್ಮಾಷ್ಠಮಿ‌: ಔರಾದ್ ನಲ್ಲಿ 16ರಂದು “ದಹಿ ಹಂಡಿ” ಉತ್ಸವ*

ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ‌ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…

8 hours ago

ಹರ್ ಘರ್ ತಿರಂಗಾ ಅಭಿಯಾನ: 14ರಂದು ಔರಾದನಲ್ಲಿ ಬೈಕ್ ರ‍್ಯಾಲಿ*

ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…

8 hours ago

ಹ.ರಾ.ಮಹೇಶ್ ಅವರ ಅಭಿನಂದನಾ ಗ್ರಂಥಕ್ಕೆ ಹಾರೈಕೆ ನುಡಿಗಳ ಲೇಖನಗಳ ಆಹ್ವಾನ

   ಬಂಧುಗಳೇ,                  ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…

8 hours ago

ಸ್ಟಡಿ ಅಬ್ರಾಡ್’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…

15 hours ago

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ: ಪ್ರಗತಿ ಪರಿಶೀಲನಾ ಸಭೆ

ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…

15 hours ago