Categories: ಬೀದರ

ವರದಿಗಾರಿಕೆಯಲ್ಲಿ ಓದುವ ಹಾಗೂ ಗೃಹಿಸುವಿಕೆಯನ್ನು ಬೆಳೆಸಿಕೊಳ್ಳಬೇಕು-ರಶ್ಮಿ.ಎಸ್.


18ಡಿಸೆಂಬರ್.16 ಬೀದರ್:- ಮಾಧ್ಯಮ ಕ್ಷೇತ್ರದಲ್ಲಿ ವರದಿಗಾರರು ಆಗಬಯಸುವ ವಿದ್ಯಾರ್ಥಿಗಳು ಪ್ರಸ್ತಕ ಓದುವಿಕೆ ಹಾಗೂ ವಿಷಯ ಗೃಹಿಸುವಿಕೆಯನ್ನು ಬೆಳೆಸಿಕೊಳ್ಳಬೇಕೆಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯರು ಆಗಿರುವ ಪ್ರಜಾವಾಣಿ ಪತ್ರಿಕೆಯ ಉಪ ಸಂಪಾದಕರಾದ ರಶ್ಮಿ ಎಸ್.ಅವರು ಅಭಿಪ್ರಾಯಪಟ್ಟರು.


ಅವರು ಇಂದು ಬಿ.ವ್ಹಿ.ಭೂಮರೆಡ್ಡಿ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ವಿಭಾಗ ಮಾಧ್ಯಮ ಅಕಾಡೆಮಿ ಹಾಗೂ ಕರ್ನಾಟಕ ಲೇಖಕಿಯರ ಸಂಘದ ಸಂಯುಕ್ತಾಶ್ರಯದಲ್ಲಿ ಪತ್ರಿಕೋದ್ಯಮದಲ್ಲಿ ಅವಕಾಶಗಳು ಕುರಿತು ವಿಚಾರ ಸಂಕಿರಣದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.


ಕನ್ನಡ ಭಾಷೆಯನ್ನು ಸಾಂಪ್ರದಾಯಕ ಹಾಗೂ ಪಾರಂಪರಿಕವಾಗಿ ಅಧ್ಯಯನ ಮಾಡುವ ವಿದ್ಯಾರ್ಥಿಗಳು ಭಾಷೆಯನ್ನೆ ಬಂಡವಾಳವಾಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಅನುವಾದದ ಜಾಣ್ಮೆ ಇರಬೇಕು. ವಿಶೇಷ ಲೇಖನ ಬರೆಯುವ ಹವ್ಯಾಸ ಬೆಳೆಸಿಕೊಳ್ಳಬೇಕು. ಜನರ ಜೊತೆ ಬೆರೆತುಕೊಂಡಷ್ಟು ಬರವಣಿಗೆಗೆ ವೈವಿದ್ಯಮಯ ದೃಷ್ಟಿಕೋನ ದೊರೆಯುತ್ತದೆ ಎಂದರು.


ಕರ್ನಾಟಕ ಲೇಖಕಿಯರ ಸಂಘದ ಬೀದರ ಜಿಲ್ಲಾಧ್ಯಕ್ಷರಾದ ಭಾರತಿ ವಸ್ತ್ರದ ಅವರು ಮಾತನಾಡಿ, ಹುಟ್ಟಿನಿಂದ ಚಟ್ಟದವರೆಗೆ ತಾಯಿಭಾಷೆಯಾಗಿರುವ ಮಾತೃಭಾಷೆಯ ಮೇಲೆ ಹಿಡಿತಸಾಧಿಸಬೇಕೆಂದರು. ಎಲ್ಲರೂ ಪ್ರಥಮಭಾಷೆ ಕನ್ನಡದಲ್ಲಿ ಶಿಕ್ಷಣ ಕಲಿಯಬೇಕು. ಓದು ಬರಹ ಲೆಕ್ಕಾಚಾರದ ಮೂಲ ಶಿಕ್ಷಣಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡಬೇಕೆಂದರು.


ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಸುಳ್ಳೊಳ್ಳಿ ಮಾತನಾಡಿ, ಆಧುನಿಕ ವಿಜ್ಞಾನ ತಂತ್ರಜ್ಞಾನದಲ್ಲಿ ಮಾಧ್ಯಮದ ವಿಸ್ತಾರ ಸಾಕಷ್ಟು ಬೆಳೆದಿದೆ. ವಿದ್ಯಾರ್ಥಿಗಳು ಯುಟ್ಯೂಬ್ ಚಾನೆಲ್ ವೆಬ್ ಆಪ್‍ಗಳನ್ನು ಬಳಸಿ ಸುದ್ದಿ ಪ್ರಚಾರ ಮಾಡಬಹುದಾಗಿದೆಯೆಂದರು.


ವೇದಿಕೆಯಲ್ಲಿ ಉಪ ಪ್ರಾಚಾರ್ಯರ ಡಾ.ಅನಿಲಕುಮಾರ ಅಣದೂರೆ, ರೇಣುಕಾ ಮಳ್ಳಿ, ರತಿದೇವಿ ಜಿ.ಕೆ. ಹಾಗೂ ಇತರರು ವೇದಿಕೆಯಲ್ಲಿದ್ದರು.
ಅತಿಥಿಗಳಿಂದ ಆರಂಭದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಸಸಿಗೆ ನೀರೆರೆಯಲಾಯಿತು.

prajaprabhat

Share
Published by
prajaprabhat

Recent Posts

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

35 minutes ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

43 minutes ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

2 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

11 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

14 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

14 hours ago