2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಮತ್ತು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನು ಹಮ್ಮಿಕೊಳ್ಳುವ ಬಗ್ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ:04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ಹಾಗೂ ವರ್ಗಾವಣಾ ತಿದ್ದುಪಡಿ ಕಾಯ್ದೆ ಮತ್ತು ನಿಯಮಗಳು-2022ರ ಪ್ರಕಾರ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಮತ್ತು ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳಿಗೆ ೧. ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ವರ್ಗಾವಣಾ ನಿಯಮ-2020ರ ನಿಯಮ-6 ರಲ್ಲಿ ನಿಗದಿಪಡಿಸಿರುವಂತೆ ವರ್ಗಾವಣೆ(ಅನುಸೂಚಿ) ವಿಸ್ತ್ರತವಾದ ಮಾರ್ಗಸೂಚಿಗಳನ್ನೊಳಗೊಂಡಂತೆ ವೇಳಾಪಟ್ಟಿಯನ್ನು ಉಲ್ಲೇಖಿತ . ಅಧಿಸೂಚನೆಯಂತೆ ಹೊರಡಿಸಲಾಗಿತ್ತು. ಕೆಲವು ತಾಂತ್ರಿಕ ಮತ್ತು ಆಡಳಿತಾತ್ಮಕ ಕಾರಣಗಳಿಂದ ವೇಳಾಪಟ್ಟಿಯನ್ನು ಉಲ್ಲೇಖಿತ ಪತ್ರದಲ್ಲಿ ಸೂಚಿಸಿರುವಂತೆ ಈ ಕೆಳಕಂಡ ಅನುಬಂಧ-2 ರಲ್ಲಿರುವಂತೆ ಪರಿಷ್ಕರಿಸಿದೆ. ಉಳಿದಂತೆ ಉಲ್ಲೇಖಿತ ವರ್ಗಾವಣಾ ಅಧಿಸೂಚನೆಯಲ್ಲಿರುವ ಎಲ್ಲಾ ಅನುಬಂಧ-1 ರಲ್ಲಿನ ಎಲ್ಲಾ ಮಾರ್ಗಸೂಚಿ ಅಂಶಗಳು ಯಥಾವತ್ತಾಗಿ ಮುಂದುವರೆಯುತ್ತವೆ. ಈ ಪರಿಷ್ಕೃತ ವೇಳಾಪಟ್ಟಿಯ ಜೊತೆಯಲ್ಲಿ ಸದರಿ ಮಾರ್ಗಸೂಚಿ ಅಂಶಗಳನ್ನು ಓದಿಕೊಳ್ಳತಕ್ಕದ್ದು.
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…