ವಸತಿ ನಿಲಯಗಳ ಮಕ್ಕಳಲ್ಲಿ ಮಾನಸಿಕ ಸ್ಥೆöÊರ್ಯ ಹೆಚ್ಚಿಸಲು ಮನೋವೈದ್ಯರ ಪ್ರತಿ ವಾರ ಸಮಾಲೋಚನೆ ನಡೆಸಿ-ಸಿಇಓ ಡಾ.ಗಿರೀಶ್ ಬದೋಲೆ

ಬೀದರ.16.ಜುಲೈ.25:- ಔರಾದ್ ಪಟ್ಟಣದ ಬಾಲಕಿಯರ ವಸತಿ ನಿಲಯದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಘಟನೆ ಹಿನ್ನಲೆ ಜಿಲ್ಲೆಯ ವಸತಿ ನಿಲಯಗಳ ಮಕ್ಕಳಲ್ಲಿ ಮಾನಸಿಕ ಸ್ಥೆöÊರ್ಯ ಹೆಚ್ಚಿಸುವ ದಿಸೆಯಲ್ಲಿ ಅವರೊಂದಿಗೆ ಮನೋವೈದ್ಯರ ಮೂಲಕ ಪ್ರತಿ ವಾರ ಸಮಾಲೋಚನೆ ನಡೆಸಲು ಕ್ರಮವಹಿಸುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ್ ಬದೋಲೆ ಅಧಿಕಾರಿಗೆ ನಿರ್ದೇಶನ ನೀಡಿದರು.

ಅವರು ಮಂಗಳವಾರ ಜಿಲ್ಲಾ ಪಂಚಾಯತ ಕಚೇರಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಧ್ಯಾನೇಶ್ವರ ನಿರಗುಡೆ ಮತ್ತು ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ಕಿರಣ ಪಾಟೀಲ ಸೇರಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಜತೆಗೆ ತುರ್ತು ಸಭೆ ನಡೆಸಿ, ಅಗತ್ಯ ಸಲಹೆಗಳನ್ನು ನೀಡಿದ್ದಾರೆ.

ಜಿಲ್ಲೆಯ ಸಿಎಚ್‌ಸಿ ಮತ್ತು ಪಿಎಚ್‌ಸಿ ಕೇಂದ್ರಗಳಲ್ಲಿನ ವೈದ್ಯಾಧಿಕಾರಿಗಳು ಪ್ರತಿ ವಾರಕ್ಕೊಮ್ಮೆ ತಮ್ಮ ವ್ಯಾಪ್ತಿಯ ವಸತಿ ನಿಲಯಗಳಿಗೆ ಭೇಟಿ ನೀಡಬೇಕು. ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಬೇಕು. ಅವರ ಚಲನವಲನಗಳಲ್ಲಿ ವ್ಯತ್ಯಾಸ, ಖಿನ್ನತೆಯಂತ ವಿಷಯಗಳು ಕಂಡುಬoದಲ್ಲಿ ವೈದ್ಯರು ಹಾಗೂ ವಾರ್ಡನ್‌ಗಳು, ತಮ್ಮ ಇಲಾಖೆಯ ಮುಖ್ಯಸ್ಥರಿಗೆ ಮಾಹಿತಿ ನೀಡಬೇಕು. ಆ ಮೂಲಕ ಮಕ್ಕಳ ಆರೋಗ್ಯದ ಸ್ಥಿರತೆ ಕಾಪಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಧ್ಯಾನೇಶ್ವರ ನಿರಗುಡೆ ಅವರಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳು ಮತ್ತು ವಾರ್ಡನ್‌ಗಳ ಮಾಹಿತಿಯನ್ನು ಅಧಿಕಾರಿಗಳು ಒಂದೆರಡು ದಿನದಲ್ಲಿ ನೀಡಬೇಕು. ಹಾಸ್ಟೆಲ್‌ಗಳಿಗೆ ಆಯಾ ವ್ಯಾಪ್ತಿಯ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮನೋವೈದ್ಯರಾದ ಡಾ. ಅಮಲ್ ಮತ್ತು ಡಾ. ರಾಘವೇಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

4 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

5 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

5 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

6 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

6 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

7 hours ago