08/07/2025 3:22 AM

Translate Language

Home » ಲೈವ್ ನ್ಯೂಸ್ » ವಸತಿ ಶಾಲೆಯಲ್ಲಿ ಖಾಲಿ ಸ್ಥಾನಗಳಿಗೆ ನೇರ ಪ್ರವೇಶ

ವಸತಿ ಶಾಲೆಯಲ್ಲಿ ಖಾಲಿ ಸ್ಥಾನಗಳಿಗೆ ನೇರ ಪ್ರವೇಶ

Facebook
X
WhatsApp
Telegram

ಚಿತ್ರದುರ್ಗ.07.ಜುಲೈ.25:- ರಾಜ್ಯದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿ ಕಾರ್ಯನಿರ್ವಹಿಸುತ್ತಿರುವ ಮೋರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಇಂದಿರಾಗಾoಧಿ ವಸತಿ ಶಾಲೆಗಳಲ್ಲಿ ಖಾಲಿ ಇರುವ 9 ಮತ್ತು 10 ನೇ ತರಗತಿಯಲ್ಲಿ ಸ್ಥಾನಗಳಿಗೆ ನೇರ ಪ್ರವೇಶ ನೀಡಲಾಗುತ್ತಿದೆ.

ಈಗಾಗಲೇ ಸರ್ಕಾರ ಆದೇಶದಂತೆ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆ ಸಮಿತಿಯಲ್ಲಿ ತಾಲ್ಲೂಕುವಾರು ಖಾಲಿ ಇರುವ ಸ್ಥಾನಗಳಿಗೆ ಮೀಸಲಾತಿ ಗುರುತಿಸಲಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 9ನೇ ತರಗತಿಗೆ 8 ಹಾಗೂ 10ನೇ ತರಗತಿಗೆ 28 ಸ್ಥಾನಗಳು ಖಾಲಿಯಿವೆ. ಚಳ್ಳಕೆರೆ ತಾಲ್ಲೂಕಿನಲ್ಲಿ 9ನೇ ತರಗತಿಗೆ 6 ಹಾಗೂ 10ನೇ ತರಗತಿಗೆ 13, ಹಿರಿಯೂರು ತಾಲ್ಲೂಕಿನಲ್ಲಿ 9ನೇ ತರಗತಿಗೆ 5 ಹಾಗೂ 10ನೇ ತರಗತಿಗೆ 22, ಹೊಳಲ್ಕೆರೆ ತಾಲ್ಲೂಕಿನಲ್ಲಿ 9ನೇ ತರಗತಿಗೆ 15 ಹಾಗೂ 10ನೇ ತರಗತಿಗೆ 27,ಹೊಸದುರ್ಗ ತಾಲ್ಲೂಕಿನಲ್ಲಿ 9ನೇ ತರಗತಿಗೆ 18 ಹಾಗೂ 10ನೇತರಗತಿಗೆ 19 ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 9ನೇ ತರಗತಿಗೆ 2 ಹಾಗೂ 10ನೇ ತರಗತಿಗೆ 1 ಸ್ಥಾನ ಖಾಲಿಯಿದೆ.

ಅರ್ಹ ಅಭ್ಯರ್ಥಿಗಳು ತಮಗೆ ಸಮೀಪವಿರುವ ವಸತಿ ಶಾಲೆಗೆ ಭೇಟಿ ನೀಡಿ ನೇರ ಪ್ರವೇಶ ಪಡೆಯಬಹುದು. 2024-25ನೇ ಸಾಲಿನಲ್ಲಿ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಿ ಶೇ.75ಕ್ಕಿಂತ ಹೆಚ್ಚಿನ ಅಂಕಗಳೊoದಿಗೆ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಮೊಹಮ್ಮದ್ ಜಿಲಾನಿ ಖುರೇಷಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!