*ವಾರ್ತಾ ಇಲಾಖೆಗೆ ವಿದ್ಯಾರ್ಥಿಗಳ ಭೇಟಿ*
ಬೀದರ, ನವೆಂಬರ್.25 :- ಮಕ್ಕಳ ದಿನಾಚರಣೆ ಪ್ರಯುಕ್ತ ಬೀದರ ಜಿಲ್ಲಾಡಳಿತವು ಹಮ್ಮಿಕೊಂಡ ವಿವಿಧ ಇಲಾಖೆಗಳಿಗೆ ವಿದ್ಯಾರ್ಥಿಗಳ ಭೇಟಿ ಹಾಗೂ ಕಾರ್ಯವೈಖರಿಯನ್ನು ತಿಳಿದುಕೊಳ್ಳುವ ನಿಟ್ಟಿನಲ್ಲಿ ಇಂದು ಅಕ್ಕಮಹಾದೇವಿ ಹೈಸ್ಕೂಲಿನ್ ವಿದ್ಯಾರ್ಥಿಗಳು ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದರು.
ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಸುಳ್ಳೊಳ್ಳಿ ವಾರ್ತಾ ಇಲಾಖೆಯ ದಿನಿತ್ಯದ ಕಾರ್ಯವೈಖರಿ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಸರ್ಕಾರದ ಯೋಜನೆಗಳನ್ನು ವಿವಿಧ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ತಲುಪಿಸುವ ಕಾರ್ಯ ವಾರ್ತಾ ಇಲಾಖೆ ಮಾಡುತ್ತದೆ. ಜಿಲ್ಲಾಡಳಿತದ ಸಭೆ ಸಮಾರಂಭಗಳ ಸುದ್ದಿಯನ್ನು ಪತ್ರಿಕಾ ಮಾಧ್ಯಮಗಳಿಗೆ ತಲುಪಿಸಿ ಪ್ರಕಟಗೊಳಿಸಲಾಗುತ್ತದೆ ಎಂದು ತಿಳಿಸಿದರು.
ಸರಕಾರದ ಐದು ಗ್ಯಾರಂಟಿಗಳ ಕುರಿತು ಬೀದಿ ನಾಟಕ ಹಾಗೂ ಜಾನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಗ್ರಾಮ ಮಟ್ಟದಲ್ಲಿ ಅರಿವು ಮೂಡಿಸಲಾಗುತ್ತಿದೆಯೆಂದರು.
ಇದೇ ಸಂದರ್ಭದಲ್ಲಿ ಇಲಾಖೆಯ ವಿಜಯಕೃಷ್ಣ, ನರೇಶ ತಮ್ಮ ಕಾರ್ಯವನ್ನು ವಿವರಿಸಿದರು.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…