ಕೊಪ್ಪಳ.16.ಜುಲೈ.25:- ಯಲಬುರ್ಗಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ವರ್ಗದ ವಾಲ್ಮೀಕಿ ಆಶ್ರಮ ಶಾಲೆ, ಯಡೋಣಿಯಲ್ಲಿ 6 ಮತ್ತು 7ನೇ ತರಗತಿಯಲ್ಲಿ ಖಾಲಿ ಇರುವ ಸ್ಥಾನಗಳ ಭರ್ತಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
6ನೇ ತರಗತಿಯಲ್ಲಿ ಪರಿಶಿಷ್ಟ ಪಂಗಡ ಬಾಲಕ-1 ಹಾಗೂ ಬಾಲಕಿಯರು-10 ಒಟ್ಟು 11 ಸ್ಥಾನಗಳು ಹಾಗೂ 7ನೇ ತರಗತಿಯಲ್ಲಿ ಪರಿಶಿಷ್ಟ ಪಂಗಡ ಬಾಲಕ-2 ಹಾಗೂ ಬಾಲಕಿಯರು-2 ಒಟ್ಟು 04 ಸ್ಥಾನಗಳು ಖಾಲಿ ಇದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜುಲೈ 18 ಕೊನೆಯ ದಿನವಾಗಿದ್ದು, ಶಾಲೆ ಅಥವಾ ಯಲಬುರ್ಗಾದ ಸಮಾಜ ಕಲ್ಯಾಣ ಇಲಾಖೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯೊಂದಿಗೆ ವಿದ್ಯಾರ್ಥಿ ಹಾಗೂ ಪಾಲಕರ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿಯ ಹಿಂದಿನ ತರಗತಿಯ ಗ್ರೇಡ್ ಮತ್ತು ಅಂಕ ನಮೂದಿಸಿರುವ ಅಂಕಪಟ್ಟಿ, ಶಾಲಾ ದೃಢೀಕರಣ ಪ್ರಮಾಣ ಪತ್ರ, ವಿದ್ಯಾರ್ಥಿಯ 02 ಭಾವಚಿತ್ರ, ವಿದ್ಯಾರ್ಥಿಯ ಆರೋಗ್ಯ ತಪಾಸಣೆ ವರದಿಯನ್ನು ಲಗತ್ತಿಸಬೇಕು.
ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ಸ್ಥಳೀಯ ತಾಲೂಕಾ ಹಾಗೂ ಈ ಹಿಂದಿನ ತರಗತಿಯಲ್ಲಿ ವಿದ್ಯಾರ್ಥಿ ಪಡೆದ ಅಂಕಗಳನ್ನು ಆಧರಿಸಿ ಆಯ್ಕೆ ಮಾಡಲಾಗುವುದು ಎಂದು ಯಲಬುರ್ಗಾ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು(ಗ್ರೇಡ್-2) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…
ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…