Categories: ಜೀಲ್ಲೆ

ವಿಕಲಚೇತನರು ಕ್ರೀಡೆಗಳಲ್ಲಿ ಭಾಗವಹಿಸುವುದರ ಮೂಲಕತಮ್ಮ ಪ್ರತಿಭೆಯನ್ನು ಮುಖ್ಯ ವಾಹನಿಗೆ ತರಬೇಕು!


ಬೀದರ, ನವೆಂಬರ್.26 :-ಎಲ್ಲಾ ವಿಕಲಚೇತನರು ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವುದರ ಮೂಲಕ ತಮ್ಮ ಪ್ರತಿಭೆಯನ್ನು ಮುಖ್ಯ ವಾಹಿನಿಗೆ ತರಬೇಕೆಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಶ್ರೀಧರ ಎಮ್. ಅವರು ತಿಳಿಸಿದರು,


ಅವರು ಸೋಮವಾರ ವಿಶ್ವ ವಿಕಲಚೇತನರ ದಿನಾಚರಣೆ ನಿಮಿತ್ಯ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದರು.


ವಿಕಲಚೇತನರು (ಅಂಗವಿಕಲರು) ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಹಾಗೂ ತಮ್ಮ ಪ್ರತಿಭೆಯನ್ನು ರಾಜ್ಯಮಟ್ಟ ಮತ್ತು ರಾಷ್ಟç ಮಟ್ಟದಲ್ಲಿ ಪ್ರದರ್ಶಿಸಲು ತಿಳಿಸಿದರು.


ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ದಿನಾಂಕ: 03-12-2024ರಂದು ನಡೆಯುವ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಬಹುಮಾನ ಹಾಗೂ ಪ್ರಶಸ್ತಿ ವಿತರಣೆ ಮಾಡಲಾಗುವುದು.


ಈ ಕಾರ್ಯಕ್ರಮದಲ್ಲಿ ಬೀದರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ ಸುಭಾಷ, ರಾಜು ಕಡ್ಯಾಳ, ಸಂತೋಷ ಭಾಲ್ಕೆ, ಸಂಜು ಬಿ ಕೇರಿ, ಮೊಗಲಪ್ಪಾ ಎಂ ಮಾಳಗೆ, ರಾಜಪ್ಪಾ ಪಾತರಪಳ್ಳಿ, ಬೀದರ ಜಿಲ್ಲೆಯ ಎಲ್ಲಾ ವಿಶೇಷ ಮಕ್ಕಳ ಶಾಲೆಯ ಮುಖ್ಯಗುರುಗಳು ಹಾಗೂ ಸಿಬ್ಬಂದಿ ವರ್ಗದವರು, ವಿಶೇಷ ಮಕ್ಕಳು ಹಾಗೂ ಎಲ್ಲಾ ತಾಲ್ಲೂಕಿನ ಎಂ.ಆರ್.ಡಬ್ಲೂö್ಯ, ವಿ.ಆರ್.ಡಬ್ಲೂö್ಯಗಳು, ಯು.ಆರ್.ಡಬ್ಲೂö್ಯಗಳು ಹಾಗೂ ವಿಕಲಚೇತನರ ಬಾಂಧವರು, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

prajaprabhat

Share
Published by
prajaprabhat

Recent Posts

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

4 minutes ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

1 hour ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

11 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

14 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

14 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

14 hours ago