ಬೀದರ.19.ಜೂನ.26 : 2026-27ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ವತಿಯಿಂದ ನೀಡಲಾಗುವ ವಿಕಲಚೇತನರ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಬೀದರ್ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.
ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿ ವತಿಯಿಂದ ಪ್ರತಿ ವರ್ಷ ಡಿಸೆಂಬರ್ 3 ರಂದು ಆಚರಿಸಲಾಗುವ ರಾಷ್ಟ್ರ ಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆ ಸಮಾರಂಭದಲ್ಲಿ ವಿಕಲಚೇತನರ ವಿವಿಧ ಕ್ಷೇತ್ರಗಳಲ್ಲಿ (ಸಬಲೀಕರಣ, ಪುನರ್ವಸತಿ, ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯೋಗ ಸೃಷ್ಟಿ, ತಡೆರಹಿತ ವಾತಾವರಣ, ಸಂಶೋಧನೆ, ನಾವಿನ್ಯತೆ, ಕ್ರೀಡೆ, ಕಲೆ ಸಾಹಿತ್ಯ ಮತ್ತು ಇತರೆ ಕ್ಷೇತ್ರ ಗಳಲ್ಲಿ) ರಾಷ್ಟ್ರ ಪ್ರಶಸ್ತಿಗಳನ್ನು ನೀಡಲು ಗೌರವಿಸಲು ಅರ್ಜಿ ಆಹ್ವಾನಿಸಿದೆ.
ಅರ್ಜಿಯನ್ನು ಸಲ್ಲಿಸಲು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ನವದೆಹಲಿ ಇವರ ಜಾಲತಾಣ www.depwd.gov.in ಮತ್ತು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ www.awards.gov.in ಗಳಲ್ಲಿ ಅಥವಾ ಈ ಕಛೇರಿಯಿಂದ ಅರ್ಜಿಯನ್ನು ಪಡೆದು 2025ರ ಜುಲೈ 31ರ ಒಳಗೆ ಅರ್ಜಿಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08482-234647ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





Any questions related to ವಿಕಲಚೇತನರ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ?