ಬೀದರ.09.ಜುಲೈ.25:- 2025-26ನೇ ಸಾಲಿನಲ್ಲಿ ಎಸ್‍ಎಸ್‍ಪಿ ವಿದ್ಯಾರ್ಥಿವೇತನ ಯೋಜನೆಯಡಿ ವಿಕಲಚೇತನರ ವಿದ್ಯಾರ್ಥಿಗಳು ಸ್ಕಾಲರ್‍ಶಿಪ್ ಪಡೆಯಲು ಪ್ರೀ-ಮೆಟ್ರಿಕ್ ಮತ್ತು ಪೋಸ್ಟ್-ಮೆಟ್ರಿಕ್ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಬೀದರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹ ವಿಕಲಚೇತನ ವಿದ್ಯಾರ್ಥಿಗಳು ವೆಬ್‍ಸೈಟ್ https://ssp.postmatric.karnataka.gov.in/2223_Processing/LoginPageನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಒಂದು ಪ್ರತಿಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮೈಲೂರ ಬೀದರ ಇಲ್ಲಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08482-234647 ಹಾಗೂ ಎಲ್ಲಾ ತಾಲ್ಲೂಕು ಎಂ.ಆರ್.ಡಬ್ಲ್ಯೂ. ಮೊಬೈಲ್ ಸಂಖ್ಯೆ: ಬೀದರ (9880801991), ಭಾಲ್ಕಿ (9741166275), ಬಸವಕಲ್ಯಾಣ, ಹುಮನಾಬಾದ (9611221445, 8432574070), ಔರಾದ.ಬಿ (9611590832, 924231284), ಹುಮನಾಬಾದ (9731772898) ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.