02/08/2025 4:59 PM

Translate Language

Home » ಲೈವ್ ನ್ಯೂಸ್ » ವಿದೇಶಿ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ವಿದೇಶಿ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Facebook
X
WhatsApp
Telegram

ಕೊಪ್ಪಳ.22.ಜುಲೈ.25: 2025-26 ನೇ ಶೈಕ್ಷಣಿಕ ವರ್ಷಕ್ಕೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ವಿದೇಶಿ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾಸಲಾಗಿದೆ.


ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ ಅಭ್ಯರ್ಥಿಗಳು ಸೇವಾಸಿಂಧು ವೆಬ್ ಪೋರ್ಟಲ್  https://sevasindhu.karnataka.gov.in     ನಲ್ಲಿ ಸೆಪ್ಟೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು. ಪೂರ್ಣಕಾಲಿಕ ಸ್ನಾತಕೋತ್ತರ ಕೋರ್ಸ್ ಆಗಿರಬೇಕು. ವಿದ್ಯಾರ್ಥಿಯ ಗರಿಷ್ಠ ವಯೋಮಿತಿ 38 ವರ್ಷ ಮೀರಿರಬಾರದು. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ. 15 ಲಕ್ಷಕ್ಕಿಂತ ಮೀರಿರಬಾರದು.


ವಿದ್ಯಾರ್ಥಿಯು ವ್ಯಾಸಂಗ ಮಾಡುತ್ತಿರುವ ವಿದೇಶಿ ವಿಶ್ವವಿದ್ಯಾಲಯವು  QS TOP 500 University Ranking    ಪಟ್ಟಿಯಲ್ಲಿ ಸ್ಥಾನ ಪಡೆದಿರಬೇಕು.

ವಿದ್ಯಾರ್ಥಿವೇತನ ಪಡೆಯಲು  NPCI Active status     ಮತ್ತು ಬ್ಯಾಂಕ್ ನೊಂದಿಗೆ ಆಧಾರ್ ಜೋಡಣೆ ಮಾಡಿಸುವುದು ಕಡ್ಡಾಯವಾಗಿದೆ. ವಿದೇಶಿ ವಿದ್ಯಾರ್ಥಿವೇತನ ಯೋಜನೆಯ ಪ್ರಕ್ರಿಯೆಯು ಸರ್ಕಾರಿ ಆದೇಶದಲ್ಲಿನ ಇತರೆ ಷರತ್ತುಗಳಿಗೊಳಪಟ್ಟಿರುತ್ತದೆ. ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಆದೇಶ ಹಾಗೂ ಷರತ್ತಿಗೊಳಪಟ್ಟು ಯಾವುದೇ ಅಂಶಗಳನ್ನು ಮಾರ್ಪಾಡು ಮಾಡುವ ಅಧಿಕಾರವನ್ನು ಸರ್ಕಾರ ಹೊಂದಿರುತ್ತದೆ.


ಅರ್ಜಿ ಸಲ್ಲಿಕೆ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‌ಸೈಟ್ : 

https://dom.karnataka.gov.in     ಹಾಗೂ ಸಹಾಯವಾಣಿ: 8277799990, ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಛೇರಿ ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕೊಪ್ಪಳ: 8088894549, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಗಂಗಾವತಿ: 9986244408, ಕುಷ್ಟಗಿ: 8880482486, ಯಲಬುರ್ಗಾ: 8095191406 ವಿಳಾಸ ಮತ್ತು ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ರವಿ ಪೂಜಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.     

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!