ಬೆಂಗಳೂರು.17.ಮೇ.25:- ರಾಜ್ಯದಲ್ಲಿ ಪಿ ಯೂ ಸಿ ದ್ವಿತೀಯ 3rd ರೌಂಡ್ 2025 ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿ.ಯು.ಸಿ ಪರೀಕ್ಷೆ-3 ಕ್ಕೆ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ.
2025 ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3 ಕ್ಕೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಈ ಕೆಳಕಂಡಂತೆ ದಿನಾಂಕ ನಿಗದಿಪಡಿಸಲಾಗಿದೆ.
ಎಲ್ಲಾ ಕಾಲೇಜಿನ ಪ್ರಾಂಶುಪಾಲರುಗಳು ಈ ಸುತ್ತೋಲೆಯನ್ನು ಕಡ್ಡಾಯವಾಗಿ ಕಾಲೇಜಿನ ಸೂಚನಾ ಫಲಕದಲ್ಲಿ ಪ್ರಕಟಿಸುವುದು ಮತ್ತು ಪ್ರಾಂಶುಪಾಲರುಗಳು ಈ ಕೆಳಗಿನಂತೆ ಸೂಚನೆಗಳನ್ನು ಪಾಲಿಸುವುದು.
1. 2025 d ಪರೀಕ್ಷೆ-1 ಮತ್ತು ಪರೀಕ್ಷೆ-2 ರಲ್ಲಿ ಉತ್ತೀರ್ಣರಾಗಿದ್ದು ಫಲಿತಾಂಶ ಉತ್ತಮಪಡಿಸಿಕೊಳ್ಳಲು 2025ರ ದ್ವಿತೀಯ ಪಿಯುಸಿ ಪರೀಕ್ಷೆ-3 ನ್ನು ಬರೆಯಲು ಇಚ್ಚಿಸಿದಲ್ಲಿ, ಅಂತಹ ವಿದ್ಯಾರ್ಥಿಗಳು ಫಲಿತಾಂಶ ಪಟ್ಟಿಯ ಆಧಾರದ ಮೇಲೆ ನಿಯಮಾನುಸಾರ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಅರ್ಜಿಯನ್ನು ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಸಲ್ಲಿಸುವುದು. ಸದರಿ ಪ್ರಕ್ರಿಯೆಗೆ ಮಂಡಲಿಯ ಅನುಮತಿ ಪಡೆಯುವ ಅವಶ್ಯಕತೆ ಇರುವುದಿಲ್ಲ.
2. 2025 ದ್ವಿತೀಯ ಪಿಯುಸಿ ಪರೀಕ್ಷೆ-2 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಂಡಲಿಯಿಂದ ನೀಡಲಾಗುವ ಫಲಿತಾಂಶ ಪಟ್ಟಿಯ (RESULT SHEET) ಆಧಾರದ ಮೇಲೆ ಪರೀಕ್ಷೆ-3 ಕ್ಕೆ ನೋಂದಾಯಿಸಿಕೊಂಡು ಮಂಡಲಿಯ PU EXAM-3 ವಿದ್ಯಾರ್ಥಿಗಳ ಮಾಹಿತಿಯನ್ನು ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರು ಇಂದೀಕರಿಸುವುದು. ಸದರಿ ವಿದ್ಯಾರ್ಥಿಗಳಿಂದ ಯಾವುದೇ ಪರೀಕ್ಷಾ ಶುಲ್ಕವನ್ನು ಪಡೆಯುವಂತಿಲ್ಲ.
3. ಪರೀಕ್ಷೆ-1 ಕ್ಕೆ ನೊಂದಾಯಿಸಿಕೊಂಡು ಪರೀಕ್ಷೆ ಬರೆಯದೇ ಇರುವ ವಿದ್ಯಾರ್ಥಿಗಳು ಪರೀಕ್ಷೆ-3 ಕ್ಕೆ ಹಾಜರಾಗಬಹುದಾಗಿದೆ.
4. 2025ನೇ ಸಾಲಿಗಿಂತ ಹಿಂದಿನ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಂದ ಮೂಲ ಅನುತ್ತೀರ್ಣ ಅಂಕಪಟ್ಟಿ/ಅರ್ಜಿ ಅಥವಾ ಹಿಂದಿನ ಎಂ.ಸಿ.ಎ.ಗಳ ಆಧಾರದ ಮೇಲೆ ಪ್ರಾಂಶುಪಾಲರು ಮಂಡಲಿಯ PU EXAM-3 ಲಾಗಿನ್ ನಲ್ಲಿ ವಿದ್ಯಾರ್ಥಿಗಳ ಮಾಹಿತಿಯನ್ನು ಇಂಧೀಕರಿಸುವುದು.
5. 2006 ರಿಂದ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಂದ ಮೂಲ ಅನುತ್ತೀರ್ಣ ಅಂಕಪಟ್ಟಿ/ಅರ್ಜಿ ಅಥವಾ ಹಿಂದಿನ ಎಂ.ಸಿ.ಎ.ಗಳ ಆಧಾರದ ಮೇಲೆ ಸಂಬಂಧಿಸಿದ ದಾಖಲೆಗಳನ್ನು ಪ್ರಾಂಶುಪಾಲರು ದೃಢೀಕರಿಸಿ, ಜಿಲ್ಲಾ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, (ಪದವಿ ಪೂರ್ವ) ಇವರಿಗೆ ಸಲ್ಲಿಸುವುದು.
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…
ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಮತ್ತು ವಿಧಾನಸಭಾ ಸ್ಪೀಕರ್ ಡಾ. ರಮಣ್ ಸಿಂಗ್ ಅವರು ಇಂದು ರಾಜಧಾನಿ ರಾಯ್‌ಪುರ…
ಗೂಂಡಾ.03.ಆಗಸ್ಟ್.25:- ಉತ್ತರ ಪ್ರದೇಶದ ಗೊಂಡಾದಲ್ಲಿ ಇಂದು ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.…
ರಾಯಚೂರು.03.ಆಗಸ್ಟ್.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಉಡಮಗಲ್ ಖಾನಾಪುರ…
ರಾಯಚೂರು.03.ಆಗಸ್ಟ್.25:- ಯೂರಿಯಾ ಗೊಬ್ಬರ ವಿತರಿಸಿದ ವಿವರ (ಮೆಟ್ರೀಕ್ ಟನ್ ಗಳಲ್ಲಿ) ಅನ್ನಪೂರ್ಣೇಶ್ವರಿ ಅಗ್ರೋ ಟ್ರೇಡಿಂಗ್ ಕ್ಯಾಂಪ್ ಬ್ಯಾಗ್ವಾಟ್ -9, ಬಂದೇನವಾಜ್…
ಕೊಪ್ಪಳ.03.ಆಗಸ್ಟ್.25: ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು ಮುಷ್ಕರವನ್ನು ಕೈಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಪ್ರಾಯಾಣಕ್ಕೆ ಯವುದೇ…